Tulsi Gowda: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತುಳಸಿಗೌಡ ಆರೋಗ್ಯದಲ್ಲಿ ಏರುಪೇರು: ಐಸಿಯುನಲ್ಲಿ ಚಿಕಿತ್ಸೆ

ವೃಕ್ಷಮಾತೆ ಎಂದೇ ಪ್ರಸಿದ್ಧರಾಗಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತುಳಸಿಗೌಡ ಆರೋಗ್ಯದಲ್ಲಿ ಏರುಪೇರಾಗಿದೆ. ವಯೋಸಹಜ ಕಾಯಿಲೆ, ಉಸಿರಾಟದ ಸಮಸ್ಯೆಯಿಂದ ಅಸ್ವಸ್ಥಗೊಂಡಿದ್ದು, ಕಾರವಾರದ ಕಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

Tulsi Gowda: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತುಳಸಿಗೌಡ ಆರೋಗ್ಯದಲ್ಲಿ ಏರುಪೇರು: ಐಸಿಯುನಲ್ಲಿ ಚಿಕಿತ್ಸೆ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತುಳಸಿಗೌಡ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಗಂಗಾಧರ​ ಬ. ಸಾಬೋಜಿ

Updated on:Apr 22, 2024 | 10:45 PM

ಕಾರವಾರ, ಏಪ್ರಿಲ್ 22: ವೃಕ್ಷಮಾತೆ ಎಂದೇ ಪ್ರಸಿದ್ಧರಾಗಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತುಳಸಿ ಗೌಡ (Tulsi Gowda) ಆರೋಗ್ಯದಲ್ಲಿ ಏರುಪೇರಾಗಿದೆ. ವಯೋಸಹಜ ಕಾಯಿಲೆ, ಉಸಿರಾಟದ ಸಮಸ್ಯೆಯಿಂದ ಅಸ್ವಸ್ಥಗೊಂಡಿದ್ದು, ಕಾರವಾರದ ಕಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಾಳಿ ಗ್ರಾಮದವರಾದ ತುಳಸಿ ಗೌಡ ಅವರು ಹಾಲಕ್ಕಿ ಬುಡಕಟ್ಟು ಜನಾಂಗಕ್ಕೆ ಸೇರಿದ್ದಾರೆ.

30 ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಟ್ಟಿದ್ದಾರೆ. ಅವರ ಕೆಲಸವನ್ನು ಮೆಚ್ಚಿ ಭಾರತ ಸರ್ಕಾರವು 2021ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಯಾವುದೇ ಜಾತಿಯ ಮರಗಳ ತಾಯಿ ಮರವನ್ನು ಗುರುತಿಸುವ ಸಾಮರ್ಥ್ಯ ಹೊಂದಿರುವ ತುಳಸಿ ಗೌಡ ಅವರನ್ನು “ಎನ್ಸೈಕ್ಲೋಪೀಡಿಯಾ ಆಫ್ ದಿ ಫಾರೆಸ್ಟ್” ಎಂದು ಕೂಡ ಕರೆಯಲಾಗುತ್ತದೆ.

ಇದನ್ನೂ ಓದಿ: ತುಳಸಿ ಗೌಡ, ಅಬ್ದುಲ್‌ ಖಾದರ್​ ನಡಕಟ್ಟಿನ್​​ಗೆ ಒಲಿದ ಗೌರವ ಡಾಕ್ಟರೇಟ್

ಸಾಲುಮರದ ತಿಮ್ಮಕ್ಕನವರಂತೆ ಇವರೂ ಕೂಡ ರಸ್ತೆ ಬದಿಗಳಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವ ಕಾಯಕದಲ್ಲಿ ತೊಡಗಿದ್ದಾರೆ. ಅವರ ಈ ಪರಿಸರ ಪ್ರೇಮ ಮತ್ತು ಅದರ ಬಗೆಗಿನ ನಿಷ್ಠೆಯನ್ನು ಪರಿಗಣಿಸಿ ಇತ್ತೀಚೆಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್​ ನೀಡಿದೆ.

ಇದನ್ನೂ ಓದಿ: ಪ್ರಚಾರದ ಮಧ್ಯೆ ವೃಕ್ಷ ಮಾತೆಯರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ: ತುಳಸಿ ಗೌಡ, ಸುಕ್ರಿ ಬೊಮ್ಮಗೌಡಗೆ ಗೌರವ ನಮನ

ಬಡ ಕುಟುಂಬದಲ್ಲಿ ಜನಿಸಿದ ಅವರು ಕೇವಲ 2 ವರ್ಷದವಳಿದ್ದಾಗ ತಂದೆಯನ್ನು ಕಳೆದುಕೊಂಡರು. ಚಿಕ್ಕ ಮಗುವಾಗಿದ್ದಾಗ, ಅವರು ತನ್ನ ತಾಯಿಯೊಂದಿಗೆ ಸ್ಥಳೀಯ ನರ್ಸರಿಯಲ್ಲಿ ಕೆಲಸ ಮಾಡಲು ಪ್ರಾರಂಭಿಸಿದರು. ತುಳಸಿ ಗೌಡ ಅವರು ಯಾವತ್ತೂ ಶಾಲೆಗೆ ಹೋಗಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:27 pm, Mon, 22 April 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ