ಹವಾಮಾನ ವೈಪರೀತ್ಯ: ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್​ ನಾಪತ್ತೆ

ಹವಾಮಾನ ವೈಪರೀತ್ಯದಿಂದ 27 ಮೀನುಗಾರರಿದ್ದ ಗೋವಾ ಮೂಲದ ಬೋಟ್ ಅರಬ್ಬಿ ಸಮುದ್ರದಲ್ಲಿ ಕಾಣೆಯಾಗಿದೆ. ನವೆಂಬರ್​​ 29 ರಂದು ಗೋವಾದ ಪಣಜಿಯಿಂದ ಹೊರಟಿದ್ದ ಬೋಟ್ ಅಂಕೋಲ ತಾಲೂಕಿನ ಬೆಲೆಕೇರಿ ಸಮುದ್ರ ಭಾಗದಲ್ಲಿ ಕೊನೆಯ ಲೊಕೇಷನ್ ತೋರಿಸಿತ್ತು.

ಹವಾಮಾನ ವೈಪರೀತ್ಯ: ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್​ ನಾಪತ್ತೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on: Dec 05, 2023 | 7:57 AM

ಉತ್ತರ ಕನ್ನಡ, ಡಿಸೆಂಬರ್​ 05: ಹವಾಮಾನ ವೈಪರೀತ್ಯದಿಂದ (Weather extremes) 27 ಮೀನುಗಾರರಿದ್ದ (Fishers) ಗೋವಾ (Goa) ಮೂಲದ ಬೋಟ್ ಅರಬ್ಬಿ ಸಮುದ್ರದಲ್ಲಿ (Arabian Sea) ಕಾಣೆಯಾಗಿದೆ. ನವೆಂಬರ್​​ 29 ರಂದು ಗೋವಾದ ಪಣಜಿಯಿಂದ ಹೊರಟಿದ್ದ ಬೋಟ್ ಅಂಕೋಲ ತಾಲೂಕಿನ ಬೆಲೆಕೇರಿ ಸಮುದ್ರ ಭಾಗದಲ್ಲಿ ಕೊನೆಯ ಲೊಕೇಷನ್ ತೋರಿಸಿತ್ತು. ಇಂಜಿನ್‌ನಲ್ಲಿ ಸಮಸ್ಯೆಯಾಗಿ ಸಮುದ್ರದಲ್ಲಿ ಬೋಟ್‌ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬೋಟ್‌ ಮಾಲೀಕ ಮಾಹಿತಿ ಕೋಸ್ಟ್‌ಗಾರ್ಡ್ಸ್‌ಗೆ ಮಾಹಿತಿ ನೀಡಿದ್ದಾರೆ. ಕೋಸ್ಟ್​​ಗಾರ್ಡ್‌ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಿಚಾಂಗ್​ ಚಂಡಮಾರುತದ ಪರಿಣಾಮ ಸೋಮವಾರ ಚೆನ್ನೈನಲ್ಲಿ ಭಾರೀ ಮಳೆ ಸುರಿಯಿತು. ಅಲ್ಲದೆ ತಮಿಳುನಾಡಿನ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಪ್ರವಾಹ ಉಂಟಾಗಿದೆ. ಇದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ತಮಿಳುನಾಡಿನ ಉತ್ತರ ಕರಾವಳಿ, ಆಂಧ್ರಪ್ರದೇಶ ಮತ್ತು ಯಾನಂನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಚಂಡಮಾರುತ ಇಂದು (ಡಿ.05) ಆಂಧ್ರಪ್ರದೇಶದ ಕಡೆಗೆ ಚಲಿಸಲಿದೆ.

ಇದನ್ನೂ ಓದಿ: ಮಿಚಾಂಗ್ ಚಂಡಮಾರುತ ಎಫೆಕ್ಟ್: ಕರ್ನಾಟಕದಿಂದ ತಮಿಳುನಾಡಿಗೆ ತೆರಳಬೇಕಿದ್ದ 10ಕ್ಕೂ ಹೆಚ್ಚು ರೈಲು ಕ್ಯಾನ್ಸಲ್

ಮಿಚಾಂಗ್​ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೂ ಬೀರಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರದಲ್ಲಿ ಕಳೆದ ಎರಡು ದಿನಗಳಿಂದ ತಂಪು ಗಾಳಿ ಬೀಸುತ್ತಿದೆ. ಜೊತೆಗೆ ಮೋಡ ಕವಿದ ವಾತಾವರಣೆವಿದೆ. ಬೆಂಗಳೂರಿನ ಸುತ್ತಮುತ್ತ ಮಂಗಳವಾರ ಮೋಡ ಕವಿದ ವಾತಾವರಣ ಇದೆ. ಕೆಲವಡೆ ಸಾಧಾರಣ ಮಳೆಯಾಗಲಿದೆ. ಬೆಳಗಿನ ಜಾವದಿಂದಲೇ ಮಂಜು ಮುಸುಕಿದ ವಾತಾವರಣ ಇದೆ. ಗರಿಷ್ಠ ಉಷ್ಣಾಂಶ 24 ಇದ್ದರೆ, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್​ ಇರಲಿದೆ.

ಮಂಗಳವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಬೀದರ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವಿದೆ. ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ವರುಣರಾಯ ಕೃಪೆ ತೋರಲಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ