AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಕರ್ಣದಲ್ಲಿ ಉಸಿರುಗಟ್ಟಿ ಮೂವರು ಮೀನುಗಾರರು ಸಾವು, ಮಂಗಳೂರಿನಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಹೆದರಿ ಪ್ರಾಣ ಕಳೆದುಕೊಂಡ ವ್ಯಕ್ತಿ

ಕುಮಟಾ ತಾಲೂಕಿನ ತದಡಿ ಮೀನುಗಾರಿಕಾ ಬಂದರಿನಲ್ಲಿ ಬೋಟ್‌ನ ಮೀನು ಸಂಗ್ರಹಣಾ ಕೊಠಡಿ ಸ್ವಚ್ಛಗೊಳಿಸುವಾಗ ವಿಷಕಾರಿ ಅನಿಲದಿಂದ ಉಸಿರುಗಟ್ಟಿ ಮೂವರು ಮೀನುಗಾರರು ಸಾವನ್ನಪ್ಪಿದ್ದಾರೆ. ನೌಶಾದ್, ಅಮೀನ್, ಅಮನ್ ಮೃತಪಟ್ಟವರು. ಕೊಳೆತ ಮೀನು ಮತ್ತು ರಾಸಾಯನಿಕಗಳಿಂದ ಅನಿಲ ಉತ್ಪತ್ತಿಯಾಗಿ ದುರಂತ ಸಂಭವಿಸಿದೆ. ಗೋಕರ್ಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಗೋಕರ್ಣದಲ್ಲಿ ಉಸಿರುಗಟ್ಟಿ ಮೂವರು ಮೀನುಗಾರರು ಸಾವು, ಮಂಗಳೂರಿನಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಹೆದರಿ ಪ್ರಾಣ ಕಳೆದುಕೊಂಡ ವ್ಯಕ್ತಿ
ಮೀನುಗಾರರ ಸಾವು
ಅಕ್ಷಯ್​ ಪಲ್ಲಮಜಲು​​
|

Updated on: Oct 27, 2026 | 8:57 PM

Share

ಕುಮಟಾ, ಅ.27: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ತದಡಿ ಮೀನುಗಾರಿಕಾ ಬಂದರಿನಲ್ಲಿ ಅತ್ಯಂತ ಭೀಕರ ಘಟನೆಯೊಂದು ಸಂಭವಿಸಿದ್ದು, ಬೋಟ್‌ನಲ್ಲಿದ್ದ ಮೀನು ಸಂಗ್ರಹಣಾ ಕೊಠಡಿ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಮೂವರು ಮೀನುಗಾರರು ದುರಂತವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ನೌಶಾದ್ (48), ಅಮೀನ್ (40) ಹಾಗೂ ಅಮನ್ (26) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತಿಬ್ಬರು ಮೀನುಗಾರರನ್ನು ರಕ್ಷಿಸಲಾಗಿದ್ದು, ಈ ಪೈಕಿ ಒಬ್ಬರ ಸ್ಥಿತಿ ಅತ್ಯಂತ ಗಂಭೀರವಾಗಿದೆ.

‘ಕುಚೈಮಾ’ ಎಂಬ ಹೆಸರಿನ ಬೋಟ್‌ನಲ್ಲಿ ಮೀನುಗಾರರು ‘ಚಮನ್’ ತಳಿಯ ಮೀನುಗಳನ್ನು ಬೇಟೆಯಾಡಿ ತದಡಿ ಬಂದರಿಗೆ ತಂದಿದ್ದರು. ಐಸ್ ಮತ್ತು ಮೀನುಗಳನ್ನು ಖಾಲಿ ಮಾಡಿದ ಬಳಿಕ, ಬೋಟ್‌ನ ಅಡಿಯಲ್ಲಿದ್ದ ಮೀನು ಸಂಗ್ರಹಾಗಾರವನ್ನು ಸ್ವಚ್ಛಗೊಳಿಸಲು ಮೀನುಗಾರರು ಕೆಳಗಿಳಿದಿದ್ದಾರೆ. ಈ ವೇಳೆ ಕೊಳೆತ ಮೀನಿನ ಚರಂಡಿ ಮತ್ತು ರಸಾಯನಿಕಗಳಿಂದ ರೂಪುಗೊಂಡಿದ್ದ ತೀವ್ರ ವಿಷಕಾರಿ ಅನಿಲ ಹಾಗೂ ದುರ್ವಾಸನೆಯಿಂದಾಗಿ ಉಸಿರುಗಟ್ಟಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ತಂದೆಯ ಮುಂದೆಯೇ ಪ್ರಾಣ ಕಳೆದುಕೊಂಡ ಡಿಆರ್‌ಡಿಒ ಹಿರಿಯ ವಿಜ್ಞಾನಿ: ಮಗನನ್ನು ಬದುಕಿಸುವ ಹೋರಾಟದಲ್ಲಿ ಸೋತ ವೃದ್ಧ ಅಪ್ಪ

ನೈತಿಕ ಪೊಲೀಸ್‌ಗಿರಿ ಪ್ರಕರಣ: ಕೇಸ್ ದಾಖಲಾಗುತ್ತಿದ್ದಂತೆ ಮನನೊಂದು ವ್ಯಕ್ತಿ ನೇಣಿಗೆ ಶರಣು

ನೈತಿಕ ಪೊಲೀಸ್‌ಗಿರಿ (Moral Policing) ನಡೆಸಿದ ಆರೋಪ ಎದುರಿಸುತ್ತಿದ್ದ ವ್ಯಕ್ತಿಯೊಬ್ಬರು ಮನೆ ಮಂದಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಹೊರವಲಯದ ಹೊಸಬೆಟ್ಟುವಿನಲ್ಲಿ ನಡೆದಿದೆ. ಮೃತರನ್ನು ಹೊಸಬೆಟ್ಟು ನಿವಾಸಿ ಸೋಮನಾಥ (48) ಎಂದು ಗುರುತಿಸಲಾಗಿದೆ.

ಅಕ್ಟೋಬರ್ 25ರ ರಾತ್ರಿ ಹೊಸಬೆಟ್ಟು ಬೀಚ್ ಸಮೀಪ ಸಂಚರಿಸುತ್ತಿದ್ದ ದಂಪತಿಯನ್ನು ಸೋಮನಾಥ್ ಹಾಗೂ ಅವರ ಸ್ನೇಹಿತರ ತಂಡ ತಡೆದು, ಪ್ರಶ್ನಿಸಿ ನೈತಿಕ ಪೊಲೀಸ್‌ಗಿರಿ ನಡೆಸಿತ್ತು ಎನ್ನಲಾಗಿದೆ. ಈ ಕುರಿತು ಸಂತ್ರಸ್ತ ದಂಪತಿ ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಸುರತ್ಕಲ್ ಪೊಲೀಸರು ಆರೋಪಿ ಸೋಮನಾಥ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿ ಕಳುಹಿಸಿದ್ದರು. ಪೊಲೀಸ್ ಕೇಸ್ ದಾಖಲಾದ ಹಿನ್ನೆಲೆಯಲ್ಲಿ ತೀವ್ರ ಮನನೊಂದಿದ್ದ ಸೋಮನಾಥ್, ಇಂದು ಬೆಳಿಗ್ಗೆ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನೇಣಿಗೆ ಶರಣಾಗಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಸ್ಟಿಂಗ್ ಚರ್ಚೆ ನಡುವೆ ಕುಮಾರಸ್ವಾಮಿ ಭೇಟಿಯಾದ ರಾಜೇಂದ್ರ ರಾಜಣ್ಣ
ಸ್ಟಿಂಗ್ ಚರ್ಚೆ ನಡುವೆ ಕುಮಾರಸ್ವಾಮಿ ಭೇಟಿಯಾದ ರಾಜೇಂದ್ರ ರಾಜಣ್ಣ
ಧನ್ವೀರ್ ವಿವಾದ: ದರ್ಶನ್ ನೋಡಲು ಝೈದ್ ಖಾನ್ ಜೊತೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಧನ್ವೀರ್ ವಿವಾದ: ದರ್ಶನ್ ನೋಡಲು ಝೈದ್ ಖಾನ್ ಜೊತೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹೈಕಮಾಂಡ್ ಅಂಗಳಕ್ಕೆ ಸ್ಟಿಂಗ್ ಆಪರೇಷನ್: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿದ್ದು
ಹೈಕಮಾಂಡ್ ಅಂಗಳಕ್ಕೆ ಸ್ಟಿಂಗ್ ಆಪರೇಷನ್: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿದ್ದು
‘ಸೌಂದರ್ಯಾ ಸ್ವಯಂವರ’ದಲ್ಲಿ ನಗುವೋ ನಗು: ವಿಡಿಯೋ ನೋಡಿ
‘ಸೌಂದರ್ಯಾ ಸ್ವಯಂವರ’ದಲ್ಲಿ ನಗುವೋ ನಗು: ವಿಡಿಯೋ ನೋಡಿ
ಧನ್ವೀರ್ ಮೇಲೆ ಇಡಿ, ಐಟಿ ಇಲಾಖೆಗೆ ಕೇಸ್ ಹಾಕಿದ್ದು ಯಾಕೆ? ವಿವರಿಸಿದ ಲಾಯರ್
ಧನ್ವೀರ್ ಮೇಲೆ ಇಡಿ, ಐಟಿ ಇಲಾಖೆಗೆ ಕೇಸ್ ಹಾಕಿದ್ದು ಯಾಕೆ? ವಿವರಿಸಿದ ಲಾಯರ್
Live: ಕರ್ನಾಟಕದ ಮುಖ್ಯ ಚುನಾವಣಾ ಆಯುಕ್ತರ ಸುದ್ದಿಗೋಷ್ಠಿ ನೇರಪ್ರಸಾರ
Live: ಕರ್ನಾಟಕದ ಮುಖ್ಯ ಚುನಾವಣಾ ಆಯುಕ್ತರ ಸುದ್ದಿಗೋಷ್ಠಿ ನೇರಪ್ರಸಾರ
ಆಸ್ಪತ್ರೆಗೆ ದಾಖಲಾದ ಡಿಸಿಎಂ ಪರಮೇಶ್ವರ್; ಆರೋಗ್ಯ ವಿಚಾರಿಸಿದ ಸಿಎಂ ಡಿಕೆಶಿ
ಆಸ್ಪತ್ರೆಗೆ ದಾಖಲಾದ ಡಿಸಿಎಂ ಪರಮೇಶ್ವರ್; ಆರೋಗ್ಯ ವಿಚಾರಿಸಿದ ಸಿಎಂ ಡಿಕೆಶಿ
ಅರ್ನಾಬ್ ಅಬ್ಬರ: ಕಾಕಿನಾಡಕ್ಕೆ ರೆಡ್​​ ಅಲರ್ಟ್
ಅರ್ನಾಬ್ ಅಬ್ಬರ: ಕಾಕಿನಾಡಕ್ಕೆ ರೆಡ್​​ ಅಲರ್ಟ್
ಬೀದರ್‌ನ 8 ವಿದ್ಯಾರ್ಥಿಗಳಿಗೆ ವಿಮಾನಯಾನದ ಉಡುಗೊರೆ ನೀಡಿದ ಶಿಕ್ಷಕ!
ಬೀದರ್‌ನ 8 ವಿದ್ಯಾರ್ಥಿಗಳಿಗೆ ವಿಮಾನಯಾನದ ಉಡುಗೊರೆ ನೀಡಿದ ಶಿಕ್ಷಕ!
ಪ್ರಮೋದಾದೇವಿ ಆರೋಪಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ್​​ ಏನಂದ್ರು?
ಪ್ರಮೋದಾದೇವಿ ಆರೋಪಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ್​​ ಏನಂದ್ರು?