ಕುಡಿಯಲು ಹಣ ಕೊಡಲಿಲ್ಲವೆಂದು ಪತ್ನಿಯನ್ನು ಅಮಾನುಷವಾಗಿ ಹತ್ಯೆಗೈದ ಪತಿ: ತಂದೆ ಕೃತ್ಯಕ್ಕೆ ಕೈಜೋಡಿಸಿದ ಪಾಪಿ ಮಗ

ಕುಡಿತದ ಚಟಕ್ಕೆ ಒಳಗಾಗಿದ್ದ ಪತಿ, ತನ್ನ ಪತ್ನಿಯನ್ನು ಅಮಾನುಷವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಇನ್ನು ತಂದೆಯ ಈ ಕೃತ್ಯಕ್ಕೆ ಮಗನೂ ಕೈಜೋಡಿಸಿದ್ದು ದುರಂತ.

ಕುಡಿಯಲು ಹಣ ಕೊಡಲಿಲ್ಲವೆಂದು ಪತ್ನಿಯನ್ನು ಅಮಾನುಷವಾಗಿ ಹತ್ಯೆಗೈದ ಪತಿ: ತಂದೆ ಕೃತ್ಯಕ್ಕೆ ಕೈಜೋಡಿಸಿದ ಪಾಪಿ ಮಗ
ಕೊಲೆ ಆರೋಪಿಗಳು
Follow us
| Updated By: ರಮೇಶ್ ಬಿ. ಜವಳಗೇರಾ

Updated on:Dec 07, 2022 | 9:22 PM

ಕಾರವಾರ: ಮದ್ಯ ಕುಡಿಯಲು ಹಣ ನೀಡಲಿಲ್ಲ ಎನ್ನುವ ಒಂದು ಕಾರಣಕ್ಕೆ ಪತಿರಾಯನೊಬ್ಬ ಕಟ್ಟಿಕೊಂಡ ಪತ್ನಿಯನ್ನೇ ಕೊಂದಿದ್ದಾನೆ (Murder).  ತಂದೆಯ ಈ ಕೃತ್ಯಕ್ಕೆ ಮಗನೂ ಕೈಜೋಡಿಸಿದ್ದಾನೆ ಎನ್ನುವುದು ದುರಂತ. ಉತ್ತರ ಕನ್ನಡ ಜಿಲ್ಲೆ (Uttara Kannada District) ಕುಮಟಾ ತಾಲೂಕಿನ ಕೂಜಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಆರೋಪಿಗಳಾದ ಪತಿ ವಿಶ್ವೇಶ್ವರ ಭಟ್(69), ಮಗ ಮಧುಕರ ಭಟ್​(33) ಕುಡಿತದ ಚಟ ಬೆಳೆಸಿಕೊಂಡಿದ್ದರು. ಇಂದು(ಡಿ.07) ಕುಡಿಯಲು ಹಣ ನೀಡಲಿಲ್ಲವೆಂದು ಇಬ್ಬರು ಸೇರಿ ಗೀತಾ ಭಟ್​ಳನ್ನು (64) ಕೊಲೆ ಮಾಡಿದ್ದಾರೆ. ಸದ್ಯ ಆರೋಪಿ ಮಧುಕರ್ ಭಟ್​ನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಗದಗನಲ್ಲಿ ಮತ್ತೊಂದು ಚಾಕು ಇರಿತ: ಒಂದೇ ವಾರದಲ್ಲಿ ಮೂರು ಪ್ರಕರಣ, ಬೆಚ್ಚಿಬಿದ್ದ ಜನ

ದಿನನಿತ್ಯ ಮನೆಯಲ್ಲಿ ತನ್ನ ಕುಡಿತಕ್ಕೆ ಹಣ ನೀಡುವಂತೆ ಗೀತಾ ಭಟ್​ಳ ಮಗ ಮತ್ತು ಗಂಡ ಕಿರುಕುಳ ನೀಡುತ್ತಿದ್ದರು. ಹೀಗಾಗಿ ಇವರ ಮನೆಯಲ್ಲಿ ಕುಡಿತದ ಕಾರಣದಿಂದ ದಿನವೂ ಕಲಹ ನಡೆಯುತ್ತಲೇ ಇತ್ತು. ಎದಿನಂತೆ ಇಂದೂ ಕೂಡಾ ಹಣ ನೀಡುವಂತೆ ಜಗಳವಾಡಿದ್ದಾರೆ. ಆದರೆ ಹಣ ನೀಡದ ಕಾರಣ ತಂದೆ-ಮಗ ಸೇರಿಕೊಂಡು ಗೀತಾ ಭಟ್​ಳನ್ನು ಕಟ್ಟಿಗೆಯಿಂದ ಹೊಡೆದು ಕೊಂದ್ದಿದ್ದಾರೆ.

ಇನ್ನು ವಿಷಯ ತಿಳಿದು ಸ್ಥಳಕ್ಕೆ ಕುಮಟಾ ಪಿಎಸ್‌ಐ ನವೀನಕುಮಾರ ಹಾಗೂ ಸಿಬ್ಬಂದಿಗಳು ಭೇಟಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:21 pm, Wed, 7 December 22

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್