ಮೂತ್ರ ವಿಸರ್ಜನೆಗೆ ತೆರಳಿದ್ದಾಗ ಶಾಲೆಯ ವಿದ್ಯುತ್ ವೈರ್ ತಗುಲಿ ವಿದ್ಯಾರ್ಥಿನಿ ಸಾವು

ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯುತ್ ವೈರ್ ತಗುಲಿ 2ನೇ ತರಗತಿ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಬೋರ್‌ವೆಲ್ ಅಳವಡಿಸಲು ಅನಧಿಕೃತವಾಗಿ ಪಡೆದಿದ್ದ ವಿದ್ಯುತ್​ ವೈರ್​ 8 ವರ್ಷದ ಬಾಲಕಿಯನ್ನು ಬಲಿಪಡೆದುಕೊಂಡಿದ್ದು, ಹೆಸ್ಕಾಂ ಹಾಗೂ ಶಾಲಾ ಮುಖ್ಯೋಪಾಧ್ಯಾಯರ ಒಂದು ನಿರ್ಲಕ್ಷ್ಯಕ್ಕೆ ಈ ದುರಂತ ಸಂಭವಿಸಿದೆ.

ಮೂತ್ರ ವಿಸರ್ಜನೆಗೆ ತೆರಳಿದ್ದಾಗ ಶಾಲೆಯ ವಿದ್ಯುತ್ ವೈರ್ ತಗುಲಿ ವಿದ್ಯಾರ್ಥಿನಿ ಸಾವು
ಸಾನ್ವಿ ಬಸವರಾಜ ಗೌಳಿ(8) ಮೃತ ವಿದ್ಯಾರ್ಥಿನಿ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ರಮೇಶ್ ಬಿ. ಜವಳಗೇರಾ

Updated on: Nov 28, 2024 | 4:35 PM

ಕಾರವಾರ, (ನವೆಂಬರ್ 28): ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯಾರ್ಥಿನಿಗೆ ತುಂಡಾದ ವಿದ್ಯುತ್ ಸರ್ವಿಸ್ ವೈರ್ ತಗುಲಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. 2ನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಬಸವರಾಜ ಗೌಳಿ(8) ಮೃತ ವಿದ್ಯಾರ್ಥಿನಿ. ಬೋರ್‌ವೆಲ್ ಅಳವಡಿಸಲು ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆಯಲಾಗಿದ್ದು, ವೈರ್ ತುಂಡಾಗಿ ಶಾಲೆಯ ಶೌಚಾಲಯ ಒಳಗೆ ಬಿದ್ದಿತ್ತು. ಆದ್ರೆ, ವಿಶ್ರಾಂತಿ ಸಮಯದಲ್ಲಿ ಮೂತ್ರ ವಿಸರ್ಜನೆಗೆ ತೆರಳಿದ್ದ ಸಾನ್ವಿ ಆ ತುಂಡಾಗಿ ಬಿದ್ದಿದ್ದ ವೈರ್​ಗೆ ಬಲಿಯಾಗಿದ್ದಾಳೆ.

ಹೆಸ್ಕಾಂ ಹಾಗೂ ಮುಖ್ಯ ಶಿಕ್ಷಕರ ನಿರ್ಲಕ್ಷ್ಯದಿಂದ ಈ ಸಾವು ಸಂಭವಿಸಿದ್ದು, ಗ್ರಾಮಸ್ಥರು ಹಾಗೂ ಕುಟುಂಬಸ್ಥರು ತೀವ್ರ ಆಕ್ರೋಶಗೊಂಡಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ತಹಶೀಲ್ದಾರ್ ಪ್ರವೀಣ್ ಹುಚ್ಚನ್ನವರ್ ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸ್ಪಾ ಕೆಲಸಕ್ಕಿದ್ದ ದೆಹಲಿ ಮೂಲದ ಯುವತಿ ನೇಣಿಗೆ ಶರಣು

ಸದ್ಯ ವಿದ್ಯಾರ್ಥಿನಿ ಸಾನ್ವಿ ಮೃತದೇಹವನ್ನು ಹಳಿಯಾಳ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇನ್ನು ಈ ವಿಷಯ ತಿಳಿದು ಕಾಂಗ್ರೆಸ್ ಶಾಸಕ ​ಆರ್.ವಿ.ದೇಶಪಾಂಡೆ ಆಸ್ಪತ್ರಗೆ ಭೇಟಿ ನೀಡಿ ಬಾಲಕಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಅಲ್ಲದೇ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದರು.

ಶಾಲೆಗೆ ಹೋಗಿದ್ದ ವಿದ್ಯಾರ್ಥಿನಿ ಎಂದಿನಂತೆ ವಿಶ್ರಾಂತಿ ಸಮಯದಲ್ಲಿ ಮೂತ್ರ ವಿಸರ್ಜನೆಗೆ ಶಾಲೆಯ ಶೌಚಾಲಯದೊಳಗೆ ಹೋಗಿದ್ದಾಳೆ. ಈ ವೇಳೆ ಹೊರಗಡೆ ಶೌಚಾಲಯದ ಬಳಿಯೇ ಬೋರ್‌ವೆಲ್‌ಗೆ ಹಾಕಿದ್ದ ಅನಧಿಕೃತ ವಿದ್ಯುತ್ ಸಂಪರ್ಕ ಮಾಡಲಾಗಿದ್ದ ವೈರ್ ಶೌಚಾಲಯದೊಳಗೆ ಬಿದ್ದಿದೆ. ಅದನ್ನು ಗಮನಿಸದ ಮಗು ಹಾಗೆ ಒಳ ಹೋಗಿದ್ದಾಳೆ. ಈ ವೇಳೆ ವಿದ್ಯುತ್ ತಂತಿ ಸ್ಪರ್ಶದಿಂದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಶಾಲೆ ಅಂದಮೇಲೆ ಮಕ್ಕಳು ಓಡಾಡುವ ಜಾಗ. ಬೋರ್‌ವೆಲ್‌ಗೆ ವಿದ್ಯುತ್ ಸಂಪರ್ಕ ಕಲ್ಪಿಸುವಾಗ ತುಂಬಾ ಎಚ್ಚರಿಕೆ ವಹಿಸಬೇಕಿತ್ತು. ಆದರೆ ಅನಧಿಕೃತವಾಗಿ ಸರ್ವಿಸ್ ಲೈನ್‌ನಿಂದ ಬೋರ್‌ವೆಲ್‌ಗೆ ಸಂಪರ್ಕ ಕಲ್ಪಿಸಲಾಗಿದೆ. ಇನ್ನು ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದರೂ ಹೆಸ್ಕಾಂ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕರು ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದಲ್ಲದೇ ವಿದ್ಯುತ್ ವೈರ್‌ ತುಂಡಾದರೂ ನಿರ್ಲಕ್ಷ ವಹಿಸಿದ್ದರಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಒಟ್ಟಿನಲ್ಲಿ ಹೆಸ್ಕಾಂ ಹಾಗೂ ಶಾಲಾ ಮುಖ್ಯೋಪಾಧ್ಯಾಯರ ನಿರ್ಲಕ್ಷ್ಯವೇ ಮಗುವಿನ ಸಾವಿಗೆ ಕಾರಣ ಎಂಬ ಆರೋಪಿಸಲಾಗಿದೆ. ಆಕಸ್ಮಿಕವಾಗಿ ನಡೆದ ದುರ್ಘಟನೆಯಿಂದಾಗಿ ಬಾಲಕಿ ಕುಟುಂಬಸ್ಥರ ಅಕ್ರಮಂದ ಮುಗಿಲು ಮುಟ್ಟಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮೋಕ್ಷಿತಾ ಬಗ್ಗೆ ಉಗ್ರಂ ಮಂಜು ಗೇಲಿ, ಥೂ ಎಂದ ‘ಮಹರಾಣಿ’
ಮೋಕ್ಷಿತಾ ಬಗ್ಗೆ ಉಗ್ರಂ ಮಂಜು ಗೇಲಿ, ಥೂ ಎಂದ ‘ಮಹರಾಣಿ’
‘ಮಂಜು ರೋಗಿಷ್ಟ ರಾಜ’: ಬಿಗ್ ಬಾಸ್ ಮನೆಯಲ್ಲಿ ಮತ್ತೆ ನಾಲಿಗೆ ಹರಿಬಿಟ್ಟ ರಜತ್
‘ಮಂಜು ರೋಗಿಷ್ಟ ರಾಜ’: ಬಿಗ್ ಬಾಸ್ ಮನೆಯಲ್ಲಿ ಮತ್ತೆ ನಾಲಿಗೆ ಹರಿಬಿಟ್ಟ ರಜತ್
IND vs AUS: ಆಸ್ಟ್ರೇಲಿಯಾ ಪ್ರಧಾನಿಯನ್ನ ಭೇಟಿಯಾದ ಟೀಮ್ ಇಂಡಿಯಾ
IND vs AUS: ಆಸ್ಟ್ರೇಲಿಯಾ ಪ್ರಧಾನಿಯನ್ನ ಭೇಟಿಯಾದ ಟೀಮ್ ಇಂಡಿಯಾ
ಗುಂಪುಗಾರಿಕೆ 2 ತಿಂಗಳು ಮುಂದುವರಿಯಲಿದೆ, ಪತ್ರ ಚಳುವಳಿ ಅಗತ್ಯವಿಲ್ಲ: ಶಾಸಕ
ಗುಂಪುಗಾರಿಕೆ 2 ತಿಂಗಳು ಮುಂದುವರಿಯಲಿದೆ, ಪತ್ರ ಚಳುವಳಿ ಅಗತ್ಯವಿಲ್ಲ: ಶಾಸಕ
ಯತ್ನಾಳ್ ತಂಡದ ವಿರುದ್ದ 2 ಪತ್ರ ಬರೆದರೂ ವರಿಷ್ಠರಿಂದ ಕ್ರಮವಿಲ್ಲ: ಡಿವಿಎಸ್
ಯತ್ನಾಳ್ ತಂಡದ ವಿರುದ್ದ 2 ಪತ್ರ ಬರೆದರೂ ವರಿಷ್ಠರಿಂದ ಕ್ರಮವಿಲ್ಲ: ಡಿವಿಎಸ್
ನನ್ನ ಹಾಗೂ ನನ್ನ ಮಗನ ವಿರುದ್ಧ ಒಂದೇ ಒಂದು ದೂರು ದಾಖಲಾಗಿಲ್ಲ: ದೇವೇಗೌಡ
ನನ್ನ ಹಾಗೂ ನನ್ನ ಮಗನ ವಿರುದ್ಧ ಒಂದೇ ಒಂದು ದೂರು ದಾಖಲಾಗಿಲ್ಲ: ದೇವೇಗೌಡ
ತೆಂಗಿನಕಾಯಿ ವ್ಯಾಪಾರಿಯ ಮದುವೆ ಊಟದ ವ್ಯವಸ್ಥೆ ಕಂಡು ನೆಟ್ಟಿಗರು ಫಿದಾ
ತೆಂಗಿನಕಾಯಿ ವ್ಯಾಪಾರಿಯ ಮದುವೆ ಊಟದ ವ್ಯವಸ್ಥೆ ಕಂಡು ನೆಟ್ಟಿಗರು ಫಿದಾ
Video: ಮಹಿಳೆಯ ಜಡೆ ಹಿಡಿದು ಎಳೆದೊಯ್ದ ಪೊಲೀಸ್​ ಅಧಿಕಾರಿ
Video: ಮಹಿಳೆಯ ಜಡೆ ಹಿಡಿದು ಎಳೆದೊಯ್ದ ಪೊಲೀಸ್​ ಅಧಿಕಾರಿ
ಬೇರೆ ಖಾತೆ ನೀಡಿದರೂ ಚಿಂತೆಯಿಲ್ಲ, ನಿಷ್ಠೆಯಿಂದ ಕೆಲಸ ಮಾಡುವೆ: ಪರಮೇಶ್ವರ್
ಬೇರೆ ಖಾತೆ ನೀಡಿದರೂ ಚಿಂತೆಯಿಲ್ಲ, ನಿಷ್ಠೆಯಿಂದ ಕೆಲಸ ಮಾಡುವೆ: ಪರಮೇಶ್ವರ್
ಕೇರಳದ ಸೀರೆ ತೊಟ್ಟು, ಸಂವಿಧಾನದ ಪುಸ್ತಕ ಹಿಡಿದು ಪ್ರಿಯಾಂಕಾ ಪ್ರಮಾಣವಚನ
ಕೇರಳದ ಸೀರೆ ತೊಟ್ಟು, ಸಂವಿಧಾನದ ಪುಸ್ತಕ ಹಿಡಿದು ಪ್ರಿಯಾಂಕಾ ಪ್ರಮಾಣವಚನ