ಉತ್ತರ ಕನ್ನಡ, ಆ.26: ಇತ್ತೀಚೆಗಷ್ಟೇ ಮೊಬೈಲ್ ಚಾರ್ಚರ್ನಿಂದ ವಿದ್ಯುತ್ ತಗುಲಿ ಮಗುವೊಂದು ಜಿಲ್ಲೆಯಲ್ಲಿ ಸಾವನ್ನಪ್ಪಿತ್ತು. ಇದೀಗ ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾರವಾರದ ಹರಿದೇವನಗರದಲ್ಲಿ ನಡದಿದೆ. ಮನೆ ಬಳಿ ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು ಸ್ತುತಿ(3) ಸಾವು. ಬಾಲಕಿ ಆಟವಾಡುತ್ತಾ ಗಣಪತಿ ಮೂರ್ತಿ ಎಂದುಕೊಂಡು ಬಾವಿಗೆ ಮಣ್ಣುಹಾಕಲು ಮುಂದಾಗಿದ್ದಾಳೆ. ಈ ವೇಳೆ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದು, ಪೊಷಕರು ಹಾಗೂ ಬಡಾವಣೆಯ ನಿವಾಸಿಗಳೆಲ್ಲ ಮಗು ನಾಪತ್ತೆ ಎಂದು ಹುಡುಕಾಡುವಾಗ ಮಗುವಿನ ಮೃತದೇಹ ಪತ್ತೆಯಾಗಿದೆ. ಈ ಕುರಿತು ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಪೊಷಕರು ಚೆನ್ನಾಗಿ ಓದು ಎಂದು ಹೇಳಿದ್ದಕ್ಕೆ ವಿದ್ಯಾರ್ಥಿಯನಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹದಿನೇಳು ವರ್ಷದ ಕಾವೇರಿ, ಆತ್ಮಹತ್ಯೆ ಮಾಡಿಕೊಂಡ ಯುವತಿ. ಇವರು ಪ್ರಥಮ ಪಿಯುಸಿ ಓದುತ್ತಿದ್ದರು. ನಿನ್ನೆ(ಆ.24) ಸಂಜೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಪೋಷಕರೇ ನಿಮ್ಮ ಮಕ್ಕಳ ಬಗ್ಗೆ ಜಾಗೃತಿ ಇರಲಿ. ಇತ್ತೀಚೆಗೆ ಪುಟ್ಟ ಮಕ್ಕಳ ಮೇಲೂ ಕೂಡ ಕಾಮುಕರ ಕೆಂಗೆಣ್ಣು ಬಿದ್ದಿದ್ದು, ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರು ವರ್ಷದ ಅಪ್ರಾಪ್ತ ಬಾಲಕಿ ಮೇಲೆ, ಆರವತ್ತು ವರ್ಷದ ವೃದ್ದನೋರ್ವ, ಚಾಕಲೇಟ್ ಕೊಡಿಸೋದಾಗಿ ಹೇಳಿ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚರ ನಡೆಸಿದ ಘಟನೆ ನೆಡದಿದೆ. ಸದ್ಯ ಆರೋಪಿ ವೃದ್ದನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ