AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲಬಾಧೆ ತಾಳಲಾರದೆ ಪುತ್ರ, ಪತ್ನಿಯನ್ನು ನದಿಗೆ ತಳ್ಳಿದ ಪತಿ: ತಾನೂ ಆತ್ಮಹತ್ಯೆಗೆ ಶರಣಾದ ಉದ್ಯಮಿ

ಸಾಲಬಾಧೆಯಿಂದ ತಾಳಲಾರದೆ ಪುತ್ರ ಮತ್ತು ಪತ್ನಿಯನ್ನು ನದಿಗೆ ತಳ್ಳಿ ಪತಿ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಚಿತ್ತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಾಲಬಾಧೆ ತಾಳಲಾರದೆ ಪುತ್ರ, ಪತ್ನಿಯನ್ನು ನದಿಗೆ ತಳ್ಳಿದ ಪತಿ: ತಾನೂ ಆತ್ಮಹತ್ಯೆಗೆ ಶರಣಾದ ಉದ್ಯಮಿ
ಮೃತ ದುರ್ದೈವಿಗಳು
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ಗಂಗಾಧರ​ ಬ. ಸಾಬೋಜಿ

Updated on:Jun 29, 2023 | 3:58 PM

ಕಾರವಾರ: ಪುತ್ರ ಮತ್ತು ಪತ್ನಿಯನ್ನು ನದಿಗೆ ತಳ್ಳಿ ಉದ್ಯಮಿ ಆತ್ಮಹತ್ಯೆ (suicide) ಗೆ ಶರಣಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಚಿತ್ತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾರವಾರದ ಗೋಪಶಿಟ್ಟಾ ಮೂಲದ ಶ್ಯಾಮ್​ ಪಾಟೀಲ್​​(40), ಜ್ಯೋತಿ ಪಾಟೀಲ್​​(35), ದಕ್ಷ​​(12) ಮೃತ ದುರ್ದೈವಿಗಳು. ಗೋವಾದ ಕುಕ್ಕಳ್ಳಿಯಲ್ಲಿ ವಾಸವಿದ್ದರು. ಸಾಲಬಾಧೆಯಿಂದ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾರವಾರ ಕಾಳಿ ನದಿ ಬ್ರಿಜ್​ನಿಂದ ಪತ್ನಿ, ಮಗನನ್ನು ದೂಡಿದ್ದಾರೆ ಎನ್ನಲಾಗುತ್ತಿದ್ದು, ಸದ್ಯ ದೇವಭಾಗ ಕಡಲ ತೀರದಲ್ಲಿ ಜ್ಯೋತಿ​​​ ಹಾಗೂ ದಕ್ಷನ​​ ಶವ ಪತ್ತೆಯಾಗಿದೆ.

ಉದ್ಯಮಿ ಶ್ಯಾಮ ಪಾಟೀಲ್​ ದೇಹ ಗೋವಾದ ಕುಕಳ್ಳಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗೋವಾ ವೆರ್ನಾದಲ್ಲಿ ಕಾರ್ಮಿಕರ ಪೂರೈಕೆ ಉದ್ಯಮ ಹೊಂದಿದ್ದರು. ಚಿತ್ತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Mangaluru News: ಮದುವೆಯಾಗುವುದಾಗಿ ನಂಬಿಸಿ ನಿರಂತರ ದೈಹಿಕ ಸಂಪರ್ಕ; ಮಂಗಳೂರು ಪೊಲೀಸರಿಂದ ಕಡಬದ ರೆಹಮಾನ್ ಬಂಧನ

ಲಾಡ್ಜ್​ನಲ್ಲಿ ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ

ಮಂಗಳೂರು: ಲಾಡ್ಜ್​ನಲ್ಲಿ ಫ್ಯಾನ್​ಗೆ ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ‌ ಉಜಿರೆಯಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ಕಾರ್ತಿಕ್(29) ಮೃತ ಯುವಕ. ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಡಿವೈಡರ್​ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಅಪ್ರಾಪ್ತರು ದುರ್ಮರಣ ಹೊಂದಿರುವಂತಹ ಘಟನೆ ಮಂಗಳೂರಿನ ಏರ್ಪೋರ್ಟ್ ರಸ್ತೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಪವನ್ (16) ಮತ್ತು ಚಿರಾಗ್ (15) ಮೃತರು. ಗಾಯಾಳುಗಳನ್ನು ಖಾಸಗಿ ಬಸ್​ನವರು ಆಸ್ಪತ್ರೆಗೆ ದಾಖಲಿಸಿದ್ದರು. ಕದ್ರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಪ್ರತ್ಯೇಕ ಘಟನೆ: ಡಿವೈಡರ್​ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಅಪ್ರಾಪ್ತರು ದುರ್ಮರಣ, ಲಾಡ್ಜ್​ನಲ್ಲಿ ನೇಣಿಗೆ ಶರಣಾದ ಯುವಕ

ಹಾಡಹಗಲೇ ರೌಡಿಶೀಟರ್​ ಬರ್ಬರ ಹತ್ಯೆ

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ಹಾಡಹಗಲೇ ನಡುರಸ್ತೆಯಲ್ಲೇ ಅಟ್ಟಾಡಿಸಿಕೊಂಡು ಲಾಂಗ್​ನಿಂದ ಹೊಡೆದು ರೌಡಿಶೀಟರ್​ನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಸುಧೀರ್ ಹತ್ಯೆಗೊಳಗಾದ ರೌಡಿಶೀಟರ್​. ಘಟನಾ ಸ್ಥಳಕ್ಕೆ ಕೃಷ್ಣರಾಜಸಾಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:45 pm, Thu, 29 June 23