ಕಾರವಾರ: ನೋಡು ನೋಡುತ್ತಿದ್ದಂತೆ ರಸ್ತೆಯಲ್ಲೇ ಹೊತ್ತಿ ಉರಿದ ಲಾರಿ: ಚಾಲಕ, ಕ್ಲೀನರ್ ಪಾರು

ಆಕಸ್ಮಿಕ ಬೆಂಕಿ ತಗುಲಿ ಸಿಮೆಂಟ್ ತುಂಬಿದ ಲಾರಿ ಹೊತ್ತಿ ಉರಿದ ಘಟನೆ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ.

ಕಾರವಾರ: ನೋಡು ನೋಡುತ್ತಿದ್ದಂತೆ ರಸ್ತೆಯಲ್ಲೇ ಹೊತ್ತಿ ಉರಿದ ಲಾರಿ: ಚಾಲಕ, ಕ್ಲೀನರ್ ಪಾರು
ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ ಲಾರಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Jan 17, 2023 | 11:25 AM

ಉತ್ತರ ಕನ್ನಡ: ಆಕಸ್ಮಿಕ ಬೆಂಕಿ ತಗುಲಿ ಸಿಮೆಂಟ್ ತುಂಬಿದ ಲಾರಿ ಹೊತ್ತಿ ಉರಿದ ಘಟನೆ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ. ಲಾರಿ ಸಿಮೆಂಟ್ ತುಂಬಿಕೊಂಡು ಹುಬ್ಬಳ್ಳಿಯಿಂದ ಮಂಗಳೂರು ಕಡೆ ರಾಷ್ಟ್ರೀಯ ಹೆದ್ದಾರಿ 66 ಅರಬೈಲ್ ಘಟ್ಟದ ಮೂಲಕ ಹೊರಟಿತ್ತು. ಈ ವೇಳೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದಿದ್ದು, ಬೆಂಕಿ ಕೆನ್ನಾಲಿಗೆ ಲಾರಿ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಚಾಲಕ ಮತ್ತು ಕ್ಲೀನರ್ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಲಾರಿಗೆ ಬೆಂಕಿ ಹೊತ್ತಿಕೊಳ್ಳಲು ಕಾರಣ

ಹುಬ್ಬಳ್ಳಿಯಿಂದ ಮಂಗಳೂರು ಕಡೆ ಲಾರಿ ರಾಷ್ಟ್ರೀಯ ಹೆದ್ದಾರಿ 66 ಹೊರಟಿತ್ತು. ಲಾರಿ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟ ಸಮೀಪಿಸುತ್ತಿದ್ದಂತೆ ಲಾರಿಯ ಬ್ರೆಕ್​ ಲೈನರ್​ ಸವೆದು ಹೀಟ್​ನಿಂದ ಟೈಯರ್​​ಗೆ ಬೆಂಕಿ ತಗುಲಿದೆ. ನೋಡು ನೋಡುತ್ತಿದ್ದಂತೆ ಬೆಂಕಿ, ಲಾರಿ ತುಂಬ ವ್ಯಾಪಿಸಿ, ಸಟ್ಟು ಕರಕಲಾಗಿದೆ.

ಇಟ್ಟಿಗೆ ತುಂಬಿದ ಲಾರಿ ಪಲ್ಟಿ:ಚಾಲಕನ ಸ್ಥಿತಿ ಗಂಭೀರ

ಹುಬ್ಬಳ್ಳಿ: ಇಟ್ಟಿಗೆ ತುಂಬಿದ ಲಾರಿ ಪಲ್ಟಿಯಾಗಿರುವ ಘಟನೆ ಹುಬ್ಬಳ್ಳಿ-ಗದಗ ರಸ್ತೆಯಲ್ಲಿರುವ ITC ಗೋಡೌನ್ ಬಳಿ ನಡೆದಿದೆ. ಹುಬ್ಬಳ್ಳಿಯಿಂದ ಗದಗ ಕಡೆ ಹೊರಟಿದ್ದ ಇಟ್ಟಿಗೆ ತುಂಬಿದ ಲಾರಿ ಬ್ರೇಕ್ ಫೇಲ್ ಆಗಿ ಲಾರಿ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಸಾವು ಬದುಕಿನ ಮದ್ಯೆ ಹೋರಾಡುತ್ತಿದ್ದಾನೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟ‌ನೆ ನಡೆದಿದೆ.

ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಕುರಿ ಹಾಗೂ ದನದ ಕೊಟ್ಟಿಗೆಗಳು

ಚಿಕ್ಕಬಳ್ಳಾಪುರ: ಬೆಂಕಿ ಹೊತ್ತಿಕೊಂಡು ಕುರಿ ಹಾಗೂ ದನದ ಕೊಟ್ಟಿಗೆಗಳು ಸುಟ್ಟು ಕರಕಲಾದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅನಗಟ್ಟನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಟ್ಟಿಗೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಜನರು ಹಸು ಹಾಗೂ ಕುರಿಗಳನ್ನು ಹೊರಗೆ ಓಡಿಸುತ್ತಿದ್ದಾರೆ.

ಬೆಂಗಳೂರಲ್ಲಿ ಕ್ಯಾಂಟರ್​​ ಡಿಕ್ಕಿಯಾಗಿ ​ಇಬ್ಬರು ಬೈಕ್ ಸವಾರರು ಸಾವು

ಬೆಂಗಳೂರು: ಬೈಕ್ ಹಾಗೂ ಕ್ಯಾಂಟರ್​​ ನಡುವೆ ಡಿಕ್ಕಿ ಸಂಭವಿಸಿ ​ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಬೆಂಗಳೂರಿನ ಅಂಜನಾನಗರ ಬಸ್​​ ನಿಲ್ದಾಣದ ಬಳಿ ನಡೆದಿದೆ. ರವಿ(22), ವಿಕಾಸ್(20) ಮೃತ ಬೈಕ್ ಸವಾರರು. ನಿನ್ನೆ ರಾತ್ರಿ 8 ಗಂಟೆಗೆ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಅಂಜನಾನಗರ ಬಸ್ ನಿಲ್ದಾಣ ಬಳಿ ಪಲ್ಸರ್ ಬೈಕ್​ನಲ್ಲಿ ಹೋಗುತ್ತಿದ್ದ ಯುವಕರು ಹಿಂಬದಿಯಿಂದ ಕ್ಯಾಂಟರ್​ಗೆ ಗುದ್ದಿದ್ದಾರೆ. ಡಿಕ್ಕಿಯ ರಭಸಕ್ಕೆ ಯುವಕರು ಕೆಳಗೆ ಬಿದ್ದಿದ್ದು ಯುವಕರ ಮೇಲೆ ಕ್ಯಾಂಟರ್​ ಹರಿದಿದೆ. ತಕ್ಷಣ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ತೀವ್ರ ರಕ್ತಸ್ರಾವವಾಗಿ ಯುವಕರು ಸಾವನ್ನಪ್ಪಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದ್ದು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:55 am, Tue, 17 January 23

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್