ಉತ್ತರ ಕನ್ನಡ: ಆಕಸ್ಮಿಕ ಬೆಂಕಿ ತಗುಲಿ ಸಿಮೆಂಟ್ ತುಂಬಿದ ಲಾರಿ ಹೊತ್ತಿ ಉರಿದ ಘಟನೆ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ. ಲಾರಿ ಸಿಮೆಂಟ್ ತುಂಬಿಕೊಂಡು ಹುಬ್ಬಳ್ಳಿಯಿಂದ ಮಂಗಳೂರು ಕಡೆ ರಾಷ್ಟ್ರೀಯ ಹೆದ್ದಾರಿ 66 ಅರಬೈಲ್ ಘಟ್ಟದ ಮೂಲಕ ಹೊರಟಿತ್ತು. ಈ ವೇಳೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದಿದ್ದು, ಬೆಂಕಿ ಕೆನ್ನಾಲಿಗೆ ಲಾರಿ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಚಾಲಕ ಮತ್ತು ಕ್ಲೀನರ್ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹುಬ್ಬಳ್ಳಿಯಿಂದ ಮಂಗಳೂರು ಕಡೆ ಲಾರಿ ರಾಷ್ಟ್ರೀಯ ಹೆದ್ದಾರಿ 66 ಹೊರಟಿತ್ತು. ಲಾರಿ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟ ಸಮೀಪಿಸುತ್ತಿದ್ದಂತೆ ಲಾರಿಯ ಬ್ರೆಕ್ ಲೈನರ್ ಸವೆದು ಹೀಟ್ನಿಂದ ಟೈಯರ್ಗೆ ಬೆಂಕಿ ತಗುಲಿದೆ. ನೋಡು ನೋಡುತ್ತಿದ್ದಂತೆ ಬೆಂಕಿ, ಲಾರಿ ತುಂಬ ವ್ಯಾಪಿಸಿ, ಸಟ್ಟು ಕರಕಲಾಗಿದೆ.
ಹುಬ್ಬಳ್ಳಿ: ಇಟ್ಟಿಗೆ ತುಂಬಿದ ಲಾರಿ ಪಲ್ಟಿಯಾಗಿರುವ ಘಟನೆ ಹುಬ್ಬಳ್ಳಿ-ಗದಗ ರಸ್ತೆಯಲ್ಲಿರುವ ITC ಗೋಡೌನ್ ಬಳಿ ನಡೆದಿದೆ. ಹುಬ್ಬಳ್ಳಿಯಿಂದ ಗದಗ ಕಡೆ ಹೊರಟಿದ್ದ ಇಟ್ಟಿಗೆ ತುಂಬಿದ ಲಾರಿ ಬ್ರೇಕ್ ಫೇಲ್ ಆಗಿ ಲಾರಿ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಸಾವು ಬದುಕಿನ ಮದ್ಯೆ ಹೋರಾಡುತ್ತಿದ್ದಾನೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ: ಬೆಂಕಿ ಹೊತ್ತಿಕೊಂಡು ಕುರಿ ಹಾಗೂ ದನದ ಕೊಟ್ಟಿಗೆಗಳು ಸುಟ್ಟು ಕರಕಲಾದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅನಗಟ್ಟನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಟ್ಟಿಗೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಜನರು ಹಸು ಹಾಗೂ ಕುರಿಗಳನ್ನು ಹೊರಗೆ ಓಡಿಸುತ್ತಿದ್ದಾರೆ.
ಬೆಂಗಳೂರು: ಬೈಕ್ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಬೆಂಗಳೂರಿನ ಅಂಜನಾನಗರ ಬಸ್ ನಿಲ್ದಾಣದ ಬಳಿ ನಡೆದಿದೆ. ರವಿ(22), ವಿಕಾಸ್(20) ಮೃತ ಬೈಕ್ ಸವಾರರು. ನಿನ್ನೆ ರಾತ್ರಿ 8 ಗಂಟೆಗೆ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಅಂಜನಾನಗರ ಬಸ್ ನಿಲ್ದಾಣ ಬಳಿ ಪಲ್ಸರ್ ಬೈಕ್ನಲ್ಲಿ ಹೋಗುತ್ತಿದ್ದ ಯುವಕರು ಹಿಂಬದಿಯಿಂದ ಕ್ಯಾಂಟರ್ಗೆ ಗುದ್ದಿದ್ದಾರೆ. ಡಿಕ್ಕಿಯ ರಭಸಕ್ಕೆ ಯುವಕರು ಕೆಳಗೆ ಬಿದ್ದಿದ್ದು ಯುವಕರ ಮೇಲೆ ಕ್ಯಾಂಟರ್ ಹರಿದಿದೆ. ತಕ್ಷಣ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ತೀವ್ರ ರಕ್ತಸ್ರಾವವಾಗಿ ಯುವಕರು ಸಾವನ್ನಪ್ಪಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದ್ದು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:55 am, Tue, 17 January 23