AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀನುಗಾರನೇ ಮೀನಿಗೆ ಬೇಟೆಯಾದ: ಮೀನು ಚುಚ್ಚಿದ ಏಟಿಗೆ ಯುವಕನ ಪ್ರಾಣ ಹೊಯ್ತು

ಅರಬ್ಬಿ ಸಮುದ್ರದಲ್ಲಿ ಮತ್ಸ್ಯ ಬೇಟೆಗೆ ತೆರಳಿದ್ದ ಮೀನುಗಾರನೇ ಮೀನಿಗೆ ಬೇಟೆಯಾಗಿದ್ದಾನೆ. ಸಮುದ್ರದಿಂದ ಜಿಗಿದು ಮೀನೊಂದು ಫಿಷರ್‌ಮ್ಯಾನ್‌ಗೆ ಚುಚ್ಚಿ ಆತನನ್ನೇ ಬಲಿ ಪಡೆದಿದೆ. ಮೀನಿನಿಂದಲೇ ಹೊಟ್ಟೆ ತುಂಬಿಸಿಕೊಂಡು ಜೀವನ ಮಾಡುತ್ತಿದ್ದ ಯುವಕ ಇದೀಗ ಇದೇ ಮೀನಿನಿಂದ್ಲೇ ಮೀನುಗಾರ ಪ್ರಾಣಬಿಟ್ಟಿದ್ದಾನೆ. ಮೀನು ಚುಚ್ಚಿ ಯುವಕ ಸಾವನ್ನಪ್ಪಿದ್ದಾನೆ ಎನ್ನುವುದು ಅಚ್ಚರಿ ಅನ್ನಿಸಿದರೂ ಸತ್ಯ.

ಮೀನುಗಾರನೇ ಮೀನಿಗೆ ಬೇಟೆಯಾದ: ಮೀನು ಚುಚ್ಚಿದ ಏಟಿಗೆ ಯುವಕನ ಪ್ರಾಣ ಹೊಯ್ತು
ಅಕ್ಷಯ್, ಮೃತ ಯುವಕ
ಸೂರಜ್​, ಮಹಾವೀರ್​ ಉತ್ತರೆ
| Updated By: ರಮೇಶ್ ಬಿ. ಜವಳಗೇರಾ|

Updated on: Oct 16, 2025 | 8:58 PM

Share

ಕಾರವಾರ, ಅಕ್ಟೋಬರ್ 16): ಮೀನು (Fish) ಕರಾವಳಿಗರ ಹೊಟ್ಟೆ ತುಂಬಿಸುತ್ತೆ, ಬದುಕು ಕೊಡುತ್ತೆ. ಆದ್ರೆ, ಇದೇ ಮೀನಿನಿಂದ್ಲೇ ಮೀನುಗಾರ (fisherman) ಪ್ರಾಣಬಿಟ್ಟಿದ್ದಾನೆ. ಹೌದು..ಅರಬ್ಬಿ ಸಮುದ್ರದಲ್ಲಿ ಮತ್ಸ್ಯ ಬೇಟೆಗೆ ತೆರಳಿದ್ದ ಮೀನುಗಾರನೇ ಮೀನಿಗೆ ಬೇಟೆಯಾಗಿದ್ದಾನೆ. ಕಾರವಾರದ (Karwar) ಮಾಜಾಳಿಯ ದಾಂಡೇಭಾಗದ ಅಕ್ಷಯ್ ಅನಿಲ್ ಮಾಜಾಳಿಕರ್‌ ಮೀನಿನಿಂದಲೇ ಬಲಿ ಆಗಿರುವ ನತದೃಷ್ಟ ಯುವಕ. ಅರಬ್ಬಿ ಸಮುದ್ರದಲ್ಲಿ ಮತ್ಸ್ಯ ಬೇಟೆಗೆ ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಇನ್ನು ಮೀನಿನ ದಾಳಿಗೆ ಒಳಗಾದ ಬಳಿಕ ಆಸ್ಪತ್ರೆಗೆ ಬಂದಿದ್ದ ಅಕ್ಷಯ್ ಗೆ ವೈದ್ಯರು ಸರಿಯಾದ ಚಿಕಿತ್ಸೆ ನೀಡಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.

ಅಕ್ಟೋಬರ್‌ 14ರಂದು ಅಕ್ಷಯ್‌, ಆಳ ಸಮುದ್ರದಲ್ಲಿ ಮತ್ಸ್ಯ ಶಿಕಾರಿಗೆ ತೆರಳಿದ್ದ. ದೋಣಿಯಲ್ಲಿದ್ದಾಗಲೇ 8ರಿಂದ 10 ಇಂಚು ಉದ್ದದ ಚೂಪು ಮೂತಿಯ ಕಾಂಡೆ ಮೀನು, ನೀರಿನಿಂದ ಜಿಗಿದು ಬಂದು ಅಕ್ಷಯ್ ಹೊಟ್ಟೆಗೆ ಚುಚ್ಚಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅಕ್ಷಯ್‌ನನ್ನ ಕೂಡ್ಲೇ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. 2ದಿನ ಚಿಕಿತ್ಸೆ ಪಡೆದ ಬಳಿಕ ಗಾಯಕ್ಕೆ ಹೊಲಿಗೆ ಹಾಕಿ ವೈದ್ಯರು ಡಿಸ್ಚಾರ್ಜ್ ಮಾಡಿದ್ದರು. ಆದ್ರೆ, ನೋವು ಮರುಕಳಿಸಿದ್ದರಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದ. ದುರದೃಷ್ಟವಶಾತ್ ಇಂದು (ಅಕ್ಟೋಬರ್ 16) ಬೆಳಗಿನ ಜಾವ 5 ಗಂಟೆಗೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಹಿರಿಯರ ಕಾಲದ ದೇವರ ತೆಂಗಿನಕಾಯಿಗಾಗಿ ತಮ್ಮನ ಹೆಂಡ್ತಿಯನ್ನೇ ಹತ್ಯೆಗೈದ: ಅಷ್ಟಕ್ಕೂ ತೆಂಗಿನಕಾಯಿಯ ಮಹತ್ವವೇನು?

ಅಕ್ಷಯ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಮೀನುಗಾರರು ಕಿಮ್ಸ್ ಆಸ್ಪತ್ರೆ ಬಳಿ ಜಮಾಯಿಸಿದ್ದು, ವೈದ್ಯರ ನಿರ್ಲಕ್ಷ್ಯದ ವಿರುದ್ಧ ಆಕ್ರೋಸ ಹೊರಹಾಕಿದರು.

ಉತ್ತರ ಕನ್ನಡ ಜಿಲ್ಲೆಗೆ ಹೈಟೆಕ್‌ ಆಸ್ಪತ್ರೆ ಬೇಕು ಎನ್ನುವುದು ದಶಕದಿಂದಲೂ ಹೋರಾಟ ನಡೆಯುತ್ತಿದೆ. ಇದರ ನಡುವೆ ಮೀನುಗಾರ ಸೂಕ್ತ ಚಿಕಿತ್ಸೆ ಸಿಗದೇ ಪ್ರಾಣ ಬಿಟ್ಟಿದ್ದು ನಿಜಕ್ಕೂ ದುರಂತ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ