ಹುಬ್ಬಳ್ಳಿಯಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ‌ ಕೊಲೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 27, 2023 | 2:15 PM

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮರಗಡಿ ಗ್ರಾಮದ ನಿವಾಸಿಯಾದ ಇತ, ಹುಬ್ಬಳ್ಳಿಗೆ ಗಾರೆ ಕೆಲಸ ಮಾಡಲು ಬಂದಿದ್ದ ಈ ವೇಳೆ ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿಯೇ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಹುಬ್ಬಳ್ಳಿಯಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ‌ ಕೊಲೆ
ಮೃತ ರ್ದುದೈವಿ
Follow us on

ಹುಬ್ಬಳ್ಳಿ, ಸೆ.27: ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ‌ನ್ನು ಕೊಲೆ ಮಾಡಿದ ಘಟನೆ ಹುಬ್ಬಳ್ಳಿ(hubballi)ಯ ಸಿಲ್ವರ್ ಟೌನ್‌ನಲ್ಲಿ ನಡೆದಿದೆ. ಮೌಲಾಲಿ(24) ಕೊಲೆಯಾದ ಯುವಕ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ(Mundgod) ತಾಲೂಕಿನ ಮರಗಡಿ ಗ್ರಾಮದ ನಿವಾಸಿಯಾದ ಇತ, ಹುಬ್ಬಳ್ಳಿಗೆ ಗಾರೆ ಕೆಲಸ ಮಾಡಲು ಬಂದಿದ್ದ ಈ ವೇಳೆ ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿಯೇ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಗೋಕುಲ ರೋಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅನುಮಾನಸ್ಪದವಾಗಿ ಸಾವನ್ನಪ್ಪಿದ ವ್ಯಕ್ತಿ

ಚಿಕ್ಕಬಳ್ಳಾಫುರ: ಶಿಡ್ಲಘಟ್ಟ ತಾಲೂಕಿನ ಕಾಚನಾಯ್ಕನಹಳ್ಳಿ ಗ್ರಾಮದ ಕ್ರಾಸ್ ಬಳಿ ದ್ಯಾವಪ್ಪ(40) ಎಂಬಾತ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ದ್ಯಾವಪ್ಪ ಪಿಲ್ಲಗುಂಡ್ಲಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಕೌಟುಂಬಿಕ ಕಲಹದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಕೆಲಸಕ್ಕಿಟ್ಟಿದ್ದ ಯುವಕರಿಂದಲೇ ಭೀಕರವಾಗಿ ಕೊಲೆಯಾದ ಮಾಲೀಕ; ಆರೋಪಿಗಳು ಮಾಡಿದ್ದ ಖತರ್ನಾಕ್​ ಪ್ಲ್ಯಾನ್​ ಹೇಗಿತ್ತು ಗೊತ್ತಾ?

ವೃದ್ಧನ‌ ಮೇಲೆ‌ ಕಾಡಾನೆ ದಾಳಿ

ಕೊಡಗು: ಇತ್ತೀಚೆಗೆ ಚಿಕ್ಕಮಗಳೂರು, ಮಡಿಕೇರಿ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದೆ. ಅದರಂತೆ ವೃದ್ಧನ‌ ಮೇಲೆ‌ ಕಾಡಾನೆ ದಾಳಿ ನಡೆಸಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕಡಂಗ ಮರೂರು ಗ್ರಾಮದಲ್ಲಿ ನಡೆದಿದೆ. ದಾಳಿಗೊಳಗಾದ ಅಮ್ಮಂಡ ಸುಬ್ರಹ್ಮಣಿಗೆ ತೀವ್ರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಸುಬ್ರಹ್ಮಣಿ ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆ ದಾಖಲಿಸಲಾಗಿದೆ.

ಸಾಲಭಾದೆ ತಾಳಲಾರದೆ ಯುವ ರೈತ ಆತ್ಮಹತ್ಯೆ

ಚಿಕ್ಕಮಗಳೂರು:  ಸಾಲಭಾದೆ ತಾಳಲಾರದೆ ಯುವ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಎನ್.ಆರ್.ಪುರ ತಾಲೂಕಿನ ಮೆಣಸೂರು ಗ್ರಾಮದಲ್ಲಿ ನಡೆದಿದೆ. ಸಂತೋಷ್ (32) ಎಂಬಾತ ಭದ್ರಾ ನದಿಯ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ. ಕಳೆದ ಸೋಮವಾರದಿಂದ ಸಂತೋಷ್ ನಾಪತ್ತೆಯಾಗಿದ್ದ. ಇದೀಗ ಸಂತೋಷ್ ಬೈಕ್ ಪತ್ತೆ ಹಿನ್ನೆಲೆ ಶೋಧ ಮಾಡಿದಾಗ, ಮೃತದೇಹ ಪತ್ತೆಯಾಗಿದೆ.  ಇನ್ನು ಇತ 4 ಲಕ್ಷ ಕೈ ಸಾಲ ಮಾಡಿದ್ದ. ಈ ಮೂಲಕ ಜಿಲ್ಲೆಯಲ್ಲಿ ಎಪ್ರಿಲ್ ನಿಂದ ಈವರೆಗೆ 26 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ