ಕಾಂಗ್ರೆಸ್ ಮುಖಂಡನೊಂದಿಗೆ ಮಹಿಳೆಯ ಹೆಸರು ಬಳಕೆ ಆರೋಪ: ಯುವಕನೋರ್ವನಿಗೆ ಹಿಗ್ಗಾಮುಗ್ಗಾ ಥಳಿತ

ಕಾಂಗ್ರೆಸ್ ಮುಖಂಡನೊಂದಿಗೆ ಮಹಿಳೆಯ ಹೆಸರು ಸೇರಿಸಿ ಕೆಟ್ಟ ಪದ ಬಳಕೆ ಆರೋಪ ಹಿನ್ನಲೆ, ಯುವಕನೋರ್ವನಿಗೆ ಮಹಿಳೆ ಚಪ್ಪಲಿಯಿಂದ ಹಿಗ್ಗಾಮುಗ್ಗಾ ತಳಿಸಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಅಳ್ವಕೋಡಿಯಲ್ಲಿ ನಡೆದಿದೆ. ಹಲ್ಲೆ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಲ್ಲೆ ನಡೆಸಿದವರ ವಿರುದ್ಧ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕಾಂಗ್ರೆಸ್ ಮುಖಂಡನೊಂದಿಗೆ ಮಹಿಳೆಯ ಹೆಸರು ಬಳಕೆ ಆರೋಪ: ಯುವಕನೋರ್ವನಿಗೆ ಹಿಗ್ಗಾಮುಗ್ಗಾ ಥಳಿತ
ಯುವಕನಿಗೆ ಥಳಿತ
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ಗಂಗಾಧರ​ ಬ. ಸಾಬೋಜಿ

Updated on:Oct 18, 2023 | 8:10 PM

ಕಾರವಾರ, ಅಕ್ಟೋಬರ್​​​​ 18: ಕಾಂಗ್ರೆಸ್ ಮುಖಂಡ (Congress leader) ನೊಂದಿಗೆ ಮಹಿಳೆಯ ಹೆಸರು ಸೇರಿಸಿ ಕೆಟ್ಟ ಪದ ಬಳಕೆ ಆರೋಪ ಹಿನ್ನಲೆ, ಯುವಕನೋರ್ವನಿಗೆ ಮಹಿಳೆ ಚಪ್ಪಲಿಯಿಂದ ಹಿಗ್ಗಾಮುಗ್ಗಾ ತಳಿಸಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಅಳ್ವಕೋಡಿಯಲ್ಲಿ ನಡೆದಿದೆ. ಕಾಂಗ್ರೆಸ್ ಮುಖಂಡ ಗಜೂ ನಾಯ್ಕ ಅವರ ಸ್ಟೇಪ್ನಿ ಎಂದು ಮಹಿಳೆ ಗಂಡನ ಮುಂದೆ ವ್ಯಕ್ತಿಯೋರ್ವ ನಿಂದಿಸಿದ ಆರೋಪದ ಮೇಲೆ ಇಬ್ಬರು ತಳಿಸಿ ಅದನ್ನ ವಿಡಿಯೋ ಮಾಡಿ ಸಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ.

ಕುಮಟಾದ ಕೃಷ್ಣ ನಾಯ್ಕ ಎಂಬ ವ್ಯಕ್ತಿಯೇ ಹಲ್ಲೆಗೊಳಗಾದವನಾಗಿದ್ದಾನೆ. ಕಾಂಗ್ರೆಸ್ ಮುಖಂಡ ಗಜೂ ನಾಯ್ಕ ಮತ್ತು ಅಳ್ವೆಕೋಡಿಯ ಸವಿತಾ ಪಟಗಾರ್ ಇಬ್ಬರ ನಡುವೆ ಸಂಬಂಧವಿದೆ ಎಂದು ಸವಿತಾ ಅವರ ಗಂಡನ ಮುಂದೆ ಈತ ಹೇಳಿ ನಿಂದಿಸಿದ್ದಾನೆ. ವಿಷಯ ತಿಳಿದ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಲ್ಲೆ ನಡೆಸಿದವರ ವಿರುದ್ಧ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಆರೋಪಿಯನ್ನ ಬಂಧಿಸಲು ಹೋಗಿದ್ದ ಪೊಲೀಸ್​ ಸಿಬ್ಬಂದಿಗೆ ಚಾಕು ಇರಿತ; ಮುಂದೆನಾಯ್ತು?

ಮತ್ತೊಂದು ಪ್ರಕರಣದಲ್ಲಿ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ಬಳಿಯಿರುವ ದುಬೈ ಮಾರ್ಕೆಟ್​ನಲ್ಲಿ ಮೊಬೈಲ್ ಅಂಗಡಿಗೆ ನುಗ್ಗಿದ ಯುವಕರ ಗುಂಪೊಂದು ಅಂಗಡಿ ಮಾಲೀಕನಿಗೆ ತಳಿಸಿದ ಘಟನೆ ಇತ್ತೀಚೆಗೆ ನಡೆದಿತ್ತು. ಗ್ರಾಹಕನೋರ್ವ ಪವರ್ ಬ್ಯಾಂಕ್ ರಿಪೇರಿಗೆಂದು ಅಂಗಡಿಗೆ ಬಂದಿದ್ದ. ಅಂಗಡಿ ಮಾಲೀಕ ನಾವು ಮೊಬೈಲ್ ಹೊರತು ಬೇರೆ ಯಾವುದನ್ನೂ ರಿಪೇರಿ ಮಾಡುವುದಿಲ್ಲ ಎಂದಿದ್ದ. ಈ ವೇಳೆ ಮಾತಿಗೆ ಮಾತು ಬೆಳೆದು ಬಂದಿದ್ದ ಯುವಕ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದ.

ಮಹಿಳೆಯಿಂದ ಮೊಬೈಲ್ ಕಿತ್ತು ಪರಾರಿಯಾದ ದುಷ್ಕರ್ಮಿಗಳು

ಬೆಂಗಳೂರು: ದುಷ್ಕರ್ಮಿಗಳು ಮಹಿಳೆಯಿಂದ ಮೊಬೈಲ್ ಕಿತ್ತು ಪರಾರಿಯಾಗಿರುವಂತಹ ಘಟನೆ ಬಾಣಸ್ವಾಡಿ ರೈಲ್ವೇ ನಿಲ್ದಾಣದ ಬಳಿ ನಡೆದಿತ್ತು. ಮಹಿಳೆಯೊಬ್ಬಳೇ ಹೋಗುತ್ತಿರುವುದನ್ನು ಒಂದು ಬಾರಿ ನೋಡಿ, ಮತ್ತೆ ವಾಪಾಸ್ ಬಂದು ಮೊಬೈಲ್ ಕಸಿದು ಪರಾರಿಯಾಗಿದ್ದರು.

ಇದನ್ನೂ ಓದಿ: ಕಾರವಾರ: ಕತ್ತು ಸೀಳಿ ಪತ್ನಿಯನ್ನೇ ಭೀಕರವಾಗಿ ಹತ್ಯೆಗೈದ ಪತಿ, ಎರಡು ಮಕ್ಕಳು ಅನಾಥ

ಬೈಕ್​ನಲ್ಲಿ ಬಂದ ಇಬ್ಬರಿಂದ ಕೃತ್ಯ ಎಸಗಲಾಗಿದ್ದು, ನಿನ್ನೆ ರಾತ್ರಿ ವೇಳೆ 7 ಗಂಟೆಯ ಸಂಧರ್ಭದಲ್ಲಿ ನಡೆದಿತ್ತು. ಈ ಕುರಿತು ಬಾಣಸ್ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:07 pm, Wed, 18 October 23

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ