AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಧನಿಂದ ಅತ್ಯಾಚಾರ ಪ್ರಯತ್ನ ಆರೋಪ; ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಬ್ಬಿನಹೊಳೆ ಬಳಿ ಸಿ.ಆರ್.ಪಿ.ಎಫ್​ ನಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ ಸಂಬಂಧದಲ್ಲಿ ಅಕ್ಕನ ಗಂಡನ ತಮ್ಮನಾಗಿರುವ  ಕೊಟ್ರೇಶ್ (46 ವರ್ಷ) ಎಂಬಾತ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಈ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯೋಧನಿಂದ ಅತ್ಯಾಚಾರ ಪ್ರಯತ್ನ ಆರೋಪ; ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಆರೋಪಿ ಯೋಧ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Jun 18, 2024 | 7:07 PM

Share

ಉತ್ತರ ಕನ್ನಡ, ಜೂ.18: ಸಿ.ಆರ್.ಪಿ.ಎಫ್​ ನಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ ಸಂಬಂಧದಲ್ಲಿ ಅಕ್ಕನ ಗಂಡನ ತಮ್ಮನಾಗಿರುವ  ಕೊಟ್ರೇಶ್ (46 ವರ್ಷ) ಎಂಬಾತ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ರೇಣುಕಾ ಪಟ್ಟೇದ (40 ವರ್ಷ) ಎಂಬುವವರು ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಧಾರವಾಡದ ಅಣ್ಣಿಗೇರಿ ಮೂಲದ ಯೋಧನಾದ ಕೊಟ್ರೇಶ್,  ಅಕ್ಕನ ಹತ್ತಿರ ಕರೆದುಕೊಂಡು ಹೋಗುತ್ತೇನೆ ಎಂದು ಕರೆದುಕೊಂಡು ಬಂದು ಸಿದ್ದಾಪುರ ತಾಲೂಕಿನ ಕಬ್ಬಿನಹೊಳೆ ಬಳಿ ಕೃತ್ಯಕ್ಕೆ ಯತ್ನಿಸಿದ್ದಾನೆ. ಇದಕ್ಕೆ ಮಹಿಳೆ ಒಪ್ಪದಿದ್ದಾಗ ಕಾರು ಹತ್ತಿಸಿ ಕೊಲೆಗೆ ಪ್ರಯತ್ನಪಟ್ಟಿದ್ದು, ಈ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಐಸ್​ ಕ್ರೀಮ್ ಕೊಡಿಸುವುದಾಗಿ ಬಾಲಕ ಕಿಡ್ನಾಪ್

ಬೆಂಗಳೂರು: ಐಸ್ ಕ್ರೀಮ್ ಕೊಡಿಸುವುದಾಗಿ ಆಮಿಷ ತೋರಿಸಿ ಸಿನಿಮಾ ಸ್ಟೈಲ್​ನಲ್ಲಿ ಬಾಲಕನನ್ನ ಕಿಡ್ನಾಪ್ ಮಾಡಿದ ಘಟನೆ ನಿನ್ನೆ(ಜೂ.17) ಸಂಜೆ 6 ಗಂಟೆ ಸುಮಾರಿಗೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡತೋಗೂರು ಬಳಿ ನಡೆದಿದೆ. ರಾಜಸ್ಥಾನ ಮೂಲದ ಮಾರ್ವಾಡಿ ದಂಪತಿಯ 9 ವರ್ಷದ ಬಾಲಕನನ್ನ ಮೊಹಮದ್ ಜಶಿಮುದ್ದೀನ್ ಶೇಕ್(24) ಎಂಬಾತ ಕಿಡ್ನಾಪ್ ಮಾಡಿದ್ದ.

ಇದನ್ನೂ ಓದಿ:ಇನ್​ಸ್ಟಾಗ್ರಾಂನಿಂದ ಹುಟ್ಟಿದ ಸ್ನೇಹ, ಮಹಿಳೆಗೆ ಕೆಲಸ ಕೊಡಿಸುವುದಾಗಿ ಕರೆದೊಯ್ದು ಹೋಟೆಲ್​ನಲ್ಲಿ ಸಾಮೂಹಿಕ ಅತ್ಯಾಚಾರ

ಪೋಷಕರಿಗೆ ಕರೆ ಮಾಡಿ ಹತ್ತು ಲಕ್ಷಕ್ಕೆ ಬೇಡಿಕೆ

ಮನೆ ಬಳಿಯಿದ್ದ ಬಾಲಕನಿಗೆ ಐಸ್ ಕ್ರೀಂ ಕೊಡಿಸುವುದಾಗಿ ಆಸೆ ತೋರಿಸಿ ಕೃತ್ಯ ಎಸಗಿದ್ದ. ಬಳಿಕ ಪೋಷಕರಿಗೆ ಕರೆ ಮಾಡಿ ಹತ್ತು ಲಕ್ಷಕ್ಕೆ ಬೇಡಿಕೆಯಿಟ್ಟಿದ್ದಾನೆ. ಈ ವೇಳೆ ಪೊಲೀಸರಿಗೆ ಕಣ್ಣು ತಪ್ಪಿಸಿ ವೀರಸಂದ್ರ, ಹುಸ್ಕೂರು ಸುತ್ತಮುತ್ತ ಬಾಲಕನ ಜೊತೆ ಓಡಾಟ ನಡೆಸಿದ್ದಾನೆ. ಈ ಮೂಲಕ ಪದೇ ಪದೇ ಲೋಕೇಶನ್ ಬದಲಿಸುತ್ತಿದ್ದ. ಕೊನೆಗೆ ಇಂದು(ಜೂ.18) ಮಧ್ಯಾಹ್ನ ಬಾಲಕ ಸಹಿತ ಆರೋಪಿಯನ್ನ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಅರೆಸ್ಟ್ ಮಾಡಿದ್ದು, ಬಾಲಕನ ಕಿಡ್ನಾಪ್ ಪ್ರಕರಣ ಸುಖಾಂತ್ಯಗೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ