Uttara Kannada news: ಪ್ಯಾರಲಿಸಿಸ್ ಬಾರದಂತೆ ಮುಂಜಾಗೃತವಾಗಿ ಇಂಜೆಕ್ಷನ್ ಪಡೆದ ಮಹಿಳೆ ಕ್ಷಣಾರ್ಧದಲ್ಲೇ ಸಾವು

ಆಕೆ ಕುಟುಂಬದ ಜೊತೆ ಪ್ರವಾಸಕ್ಕಾಗಿ ಬಂದ ಮಹಿಳೆ. ಪ್ರವಾಸದ ಜೊತೆ ತಂದೆಗೆ ಚಿಕಿತ್ಸೆ ಕೊಡುತ್ತಿದ್ದ ಆಸ್ಪತ್ರೆಗೆ ಸಹ ಭೇಟಿ ನೀಡಿದ್ದಳು. ಪ್ಯಾರಲಿಸಿಸ್ ಹಿನ್ನಲೆಯಲ್ಲಿ ಮುಂಜಾಗೃತೆ ವಹಿಸಲು ತಾನು ಇಂಜೆಕ್ಷನ್ ತೆಗೆದುಕೊಳ್ಳಲು ಮುಂದಾಗಿದ್ದಳು. ಆದರೆ, ಆಕೆಯ ತಪ್ಪು ನಿರ್ಧಾರವೇ ಜೀವವನ್ನ ಕಳೆದುಕೊಳ್ಳುವಂತೆ ಮಾಡಿತ್ತು. ಆಸ್ಪತ್ರೆಯ ವೈದ್ಯರ ನಿರ್ಲಕ್ಷದಿಂದ ಇಂಜೆಕ್ಷನ್ ಪಡೆಯುತ್ತಿದ್ದಂತೆ ಮಹಿಳೆ ಸಾವನ್ನಪ್ಪಿದ್ದಳು.

Uttara Kannada news: ಪ್ಯಾರಲಿಸಿಸ್ ಬಾರದಂತೆ ಮುಂಜಾಗೃತವಾಗಿ ಇಂಜೆಕ್ಷನ್ ಪಡೆದ ಮಹಿಳೆ ಕ್ಷಣಾರ್ಧದಲ್ಲೇ ಸಾವು
ಮೃತ ಮಹಿಳೆ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jun 20, 2023 | 8:07 AM

ಉತ್ತರ ಕನ್ನಡ: ಒಂದೆಡೆ ಆಸ್ಪತ್ರೆಯಲ್ಲಿ ಮೃತದೇಹದ ಮುಂದೆ ರೋದಿಸುತ್ತಿರುವ ಕುಟುಂಬ, ಇನ್ನೊಂದೆಡೆ ತಾಯಿಯ ಮುಖವನ್ನ ತೋರಿಸದೇ ಮಗುವಿನ ಜೊತೆ ಆಸ್ಪತ್ರೆ ಹೊರಗೆ ಪರದಾಡುತ್ತಿರುವ ತಂದೆ, ಮತ್ತೊಂದೆಡೆ ಆಸ್ಪತ್ರೆಗೆ ದೌಡಾಯಿಸಿರುವ ಪೊಲೀಸರು, ಈ ದೃಶ್ಯ ಕಂಡು ಬಂದಿದ್ದು ಉತ್ತರ ಕನ್ನಡ(Uttara Kannada) ಜಿಲ್ಲೆಯ ಕಾರವಾರದ ಜಿಲ್ಲಾ ಆಸ್ಪತ್ರೆಯಲ್ಲಿ. ಹೌದು ಕಾರವಾರದಲ್ಲಿ ಆಸ್ಪತ್ರೆಯೊಂದರ ನಿರ್ಲಕ್ಷಕ್ಕೆ ಮಹಿಳೆಯೋರ್ವಳು ಮೃತಪಟ್ಟ ಘಟನೆ ನಡೆದಿದೆ. ಮೂಲತ ಕೊಪ್ಪಳದ ಸ್ವಪ್ನ ರಾಯ್ಕರ್(32) ಎನ್ನುವ ಮಹಿಳೆ ಕುಟುಂಬದ ಜೊತೆ ಗೋವಾ ಹಾಗೂ ಉತ್ತರ ಕನ್ನಡ ಪ್ರವಾಸಕ್ಕಾಗಿ ಸೋಮವಾರ ಆಗಮಿಸಿದ್ದರು. ಗೋವಾದಲ್ಲಿ ದೇವಸ್ಥಾನವೊಂದಕ್ಕೆ ಭೇಟಿ ನೀಡಿ ನಂತರ ಆಕೆಯ ತಂದೆ ಪ್ಯಾರಲಿಸಿಸ್(Paralysis) ಚಿಕಿತ್ಸೆ ಪಡೆಯುತ್ತಿದ್ದು, ಕಾರವಾರ ತಾಲೂಕಿನ ಹಳಗಾ ಗ್ರಾಮದ ಸೆಂಟ್ ಮೇರಿಸ್ ಆಸ್ಪತ್ರೆಗೆ ಭೇಟಿ ನೀಡಿದ್ದಳು. ಈ ವೇಳೆ ಆಸ್ಪತ್ರೆಯಲ್ಲಿ ಪ್ಯಾರಲಿಸಿಸ್ ಬರದಂತೆ ಮುಂಚೆಯೇ ಚುಚ್ಚುಮದ್ದು ತೆಗೆದುಕೊಳ್ಳುವಂತೆ ವೈದ್ಯರು ಸೂಚನೆ ನೀಡಿದ್ದರು ಎನ್ನಲಾಗಿದೆ. ಇನ್ನು ಇಂಜೆಕ್ಷನ್ ತೆಗೆದುಕೊಳ್ಳುತ್ತಿದ್ದಂತೆ ಮಹಿಳೆ ಕುಸಿದು ಬಿದ್ದು ಮೃತಪಟ್ಟಿದ್ದಾಳೆ ಎಂದು ಮೃತಳ ಫೋಷಕರು ಆರೋಪಿಸಿದ್ದಾರೆ.

ಮಹಿಳೆ ಕುಸಿದು ಬೀಳುತ್ತಿದ್ದಂತೆ ತಕ್ಷಣ ಆಸ್ಪತ್ರೆಯವರೇ ಕಾರವಾರದ ಜಿಲ್ಲಾ ಆಸ್ಪತ್ರೆಗೆ ಮಹಿಳೆಯನ್ನ ರವಾನೆ ಮಾಡಿದ್ದರು. ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲೇ ಮಹಿಳೆ ಮೃತಪಟ್ಟಿದ್ದು, ವೈದ್ಯರು ಇವರು ಸಾವನ್ನಪ್ಪಿದ್ದಾರೆ ಎಂದು ಘೋಷಣೆ ಮಾಡಿದ್ದಾರೆ. ಇನ್ನು ಸೆಂಟ್ ಮೇರಿಸ್ ಆಸ್ಪತ್ರೆಯಲ್ಲಿ ಹಲವು ವರ್ಷದಿಂದ ಪ್ಯಾರಲಿಸಿಸ್​ಗೆ ಚುಚ್ಚುಮದ್ದು ಕೊಡುತ್ತಿದ್ದು, ಈ ಆಸ್ಪತ್ರೆ ಮೇಲೆ ಹಿಂದಿನಿಂದಲೂ ಆರೋಪವಿರುವುದು ಕೇಳಿಬಂದಿತ್ತು. ಈ ಆಸ್ಪತ್ರೆಯಲ್ಲಿ ಯಾವ ಇಂಜೆಕ್ಷನ್,ಯಾವ ಔಷದಿ ಕೊಡುತ್ತಾರೆ ಎಂದು ತಿಳಿಸುವುದಿಲ್ಲ. ಇದು ಸರಿಯಾದ ಕ್ರಮವಲ್ಲ ಎಂದು ಹಲವರು ವಿರೋಧಿಸಿದ್ದರು. ಇನ್ನು ಸದ್ಯ ಮಹಿಳೆ ಇದೇ ಇಂಜೆಕ್ಷನ್ ತೆಗೆದುಕೊಂಡು ಮೃತಪಟ್ಟಿದ್ದು ಆಸ್ಪತ್ರೆ ಮೇಲೆ ಕ್ರಮ ಕೈಗೊಳ್ಳಲೇ ಬೇಕು ಎಂದು ಸ್ಥಳೀಯರು ಸೇರಿದಂತೆ ಸಾಮಾಜಿಕ ಹೋರಾಟಗಾರರಾದ ಮಾದವ ನಾಯ್ಕ ಆಗ್ರಹಿಸಿದ್ದಾರೆ.

ಇದನ್ನೂ ಓದಿ:Koppal Contaminated Water: ಕಲುಷಿತ ನೀರು ಸೇವನೆಗೆ ಮತ್ತೊಂದು ಬಲಿ? ಆಸ್ಪತ್ರೆಗೆ ಕರೆದೊಯ್ಯುವ ದಾರಿ ಮಧ್ಯೆ ಪ್ರಾಣ ಬಿಟ್ಟ 10 ವರ್ಷದ ಬಾಲಕಿ

ಇನ್ನು ಈ ಕುರಿತು ಮಾತನಾಡಿದ ಕ್ರೀಮ್ಸ್ ಆಸ್ಪತ್ರೆ ವೈದ್ಯರಾದ ಡಾ. ರೋಷನ್ ‘ ಮೃತ ಸ್ವಪ್ನ ರಾಯ್ಕರ್ ಎಂಬುವವರನ್ನ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಜೀವವಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದೇವು. ಇನ್ನು ಸಾವಿಗೆ ನಿಖರವಾದ ಕಾರಣ ಶವ ಪರೀಕ್ಷೆಯ ರೀಪೋರ್ಟ್​ ಜೊತೆಗೆ ಪೊಲೀಸರ ತನಿಖೆ ಬಳಿಕ ಗೊತ್ತಾಗಲಿದೆ ಎಂದರು.

ಚೆನ್ನಾಗಿದ್ದ ಮಹಿಳೆ ಚುಚ್ಚುಮದ್ದು ತೆಗೆದುಕೊಳ್ಳುತ್ತಿದ್ದಂತೆ ಮೃತಪಟ್ಟಿದ್ದರಿಂದ ಇಡೀ ಕುಟುಂಬವೇ ಆತಂಕಕ್ಕೆ ಒಳಗಾಗಿತ್ತು. ಆಸ್ಪತ್ರೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದರೆ, ಇತ್ತ ಮೃತಳಿಗೆ ಪುಟ್ಟ ಮಗುವಿದ್ದು ತಾಯಿಯ ಮುಖವನ್ನ ತೋರಿಸದೇ ತಂದೆ ಆಸ್ಪತ್ರೆ ಹೊರಗೆ ಪರದಾಟ ನಡೆಸುತ್ತಿದ್ದ ದೃಶ್ಯ ಎಲ್ಲರ ಕಣ್ಣಲ್ಲಿ ನೀರು ತರೆಸುವಂತಿತ್ತು. ಒಟ್ಟಿನಲ್ಲಿ ಯಾವುದೇ ಕಾಯಿಲೆಯಿಲ್ಲದಿದ್ದರು ಸುಮ್ಮನೇ ಚುಚ್ಚುಮದ್ದು ತೆಗೆದುಕೊಳ್ಳಲು ಹೋಗಿ ಮಹಿಳೆ ಮೃತಪಟ್ಟಿದ್ದು ನಿಜಕ್ಕೂ ದುರಂತವೇ. ನಿರ್ಲಕ್ಷ ವಹಿಸಿದ ಆಸ್ಪತ್ರೆ ಮೇಲೆ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಮುಂದೆ ಇಂತಹ ತಪ್ಪು ಆಗದಂತೆ ಕ್ರಮ ಕೈಗೊಳ್ಳಬೇಕಾಗಿದೆ.

ವರದಿ: ವಿನಾಯಕ ಬಡಿಗೇರ ಟಿವಿ9 ಕಾರವಾರ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ