AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯಲ್ಲಿ ಎಲ್ಲರೂ ಜೇಬಿನಲ್ಲಿ ಟಿಕೆಟ್ ಇಟ್ಕೊಂಡು ಓಡ್ತಿದ್ದಾರೆ: ಸ್ವಪಕ್ಷದ ನಾಯಕರಿಗೆ ಹೆಗಡೆ ಟಾಂಗ್

ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯಲ್ಲಿ ಟಿಕೆಟ್​ಗಾಗಿ ಪೈಪೋಟಿ ಶುರುವಾಗಿದೆ. ಚಿಕ್ಕಬಳ್ಳಾಪುರ, ತುಮಕೂರು ಸೇರಿದಂತೆ ವಿವಿಧ ಕ್ಷೇತ್ರ ಟಿಕೆಟ್​ಗಾಗಿ ನಾಯಕರು ಕಸರತ್ತು ನಡೆಸಿದ್ದಾರೆ. ಅದರಂತೆ ಈ ಬಾರಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆಯವರಿಗೆ ಇಲ್ಲ ಎನ್ನುವ ಮಾತುಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಇಬ್ಬರು ನಾಯಕರು ಟಿಕೆಟ್​​ಗಾಗಿ ಪೈಪೋಟಿ ನಡೆಸಿದ್ದು, ಅವರಿಗೆ ಈಗ ಅನಂತ್ ಕುಮಾರ್ ಹೆಗಡೆ ಟಾಂಗ್ ಕೊಟ್ಟಿದ್ದಾರೆ.​

ಬಿಜೆಪಿಯಲ್ಲಿ ಎಲ್ಲರೂ ಜೇಬಿನಲ್ಲಿ ಟಿಕೆಟ್ ಇಟ್ಕೊಂಡು ಓಡ್ತಿದ್ದಾರೆ: ಸ್ವಪಕ್ಷದ ನಾಯಕರಿಗೆ ಹೆಗಡೆ ಟಾಂಗ್
ಸಂಸದ ಅನಂತಕುಮಾರ್​ ಹೆಗಡೆ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Mar 04, 2024 | 11:10 PM

Share

ಕಾರವಾರ, (ಮಾರ್ಚ್ 04): ಉತ್ತರ ಕನ್ನಡ (Uttara Kannada) ಲೋಕಸಭಾ ಬಿಜೆಪಿ ಟಿಕೆಟ್​ಗಾಗಿ ಮೂವರು ನಾಯಕರ ನಡುವೆ ಪೈಪೋಟಿ ನಡೆದಿದೆ. ಈ ಬಾರಿ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ ಅವರಿಗೆ ಟಿಕೆಟ್​ ಇಲ್ಲ ಎನ್ನುವ ಚರ್ಚೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಟಿಕೆಟ್​ಗಾಗಿ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಹರಿಪ್ರಕಾಶ್ ಕೋಣೆಮನೆ ಕಸರತ್ತು ನಡೆಸಿದ್ದಾರೆ. ಇನ್ನು ಈ ಬಗ್ಗೆ ಅನಂತ್ ಕುಮಾರ್ ಹೆಗಡೆ(Anant kumar hegde)  ಪ್ರತಿಕ್ರಿಯಿಸಿದ್ದು, ಎಷ್ಟೋ ಜನರು ನಮಗೆ ಟಿಕೆಟ್ ಸಿಕ್ಕಿದೆ ಎಂದು ಓಡಾಡುತ್ತಿದ್ದಾರೆ. ಬಿಜೆಪಿಯಷ್ಟು ಕಾಂಗ್ರೆಸ್​ನಲ್ಲಿಲ್ಲ, ಅವರಲ್ಲಿ ಸ್ವಲ್ಪ ಕನ್ಫ್ಯೂಸ್ ಇದೆ. ಆದರೆ ಬಿಜೆಪಿಯಲ್ಲಿ ಎಲ್ಲರೂ ಜೇಬಿನಲ್ಲಿ ಟಿಕೆಟ್ ಇಟ್ಟುಕೊಂಡು ಓಡಾಡುತ್ತಿದ್ದಾರೆ ಎಂದು ಟಾಂಗ್ ಕೊಟ್ಟಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮಾವಳ್ಳಿ ಗ್ರಾಮದಲ್ಲಿ ಮಾತನಾಡಿದ ಸಂಸದ ಅನಂತಕುಮಾರ ಹೆಗಡೆ, ಬಿಜೆಪಿಯಷ್ಟು ಕಾಂಗ್ರೆಸ್​ನಲ್ಲಿಲ್ಲ, ಅವರಲ್ಲಿ ಸ್ವಲ್ಪ ಕನ್ಫ್ಯೂಸ್ ಇದೆ. ಆದರೆ ಬಿಜೆಪಿಯಲ್ಲಿ ಎಲ್ಲರೂ ಜೇಬಿನಲ್ಲಿ ಟಿಕೆಟ್ ಇಟ್ಕೊಂಡು ಓಡ್ತಿದ್ದಾರೆ, ಎಲ್ಲರೂ ನನಗೆ ಟಿಕೆಟ್ ಸಿಕ್ಕಿದೆ, ನನಗೆ ಟಿಕೆಟ್ ಸಿಕ್ಕಿದೆ ಅಂತಿದ್ದಾರೆ. ನನ್ನ ಬಳಿ ಟಿಕೆಟ್ ಇಲ್ಲ, ನಮ್ಮ ಹೈಕಮಾಂಡ್ ಟಿಕೆಟ್ ಕೊಡುತ್ತದೆ. ಬಿಜೆಪಿ ಅಭ್ಯರ್ಥಿ ಯಾರಾಗುತ್ತಾರೆ ಎಂಬುದು ನನಗೂ ಕೂಡ ಗೊತ್ತಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್​ ಕಾಗೇರಿಗೆ ಫಿಕ್ಸ್ ಆಗಿದ್ಯಾ? ಅವರು ಕೊಟ್ಟ ಸುಳಿವು ಹೀಗಿದೆ

ನನ್ನನ್ನು 6 ಬಾರಿ ಗೆಲ್ಲಿಸಿದ್ದೀರಾ ಇದಕ್ಕಿಂತ ಜಾಸ್ತಿ ಇನ್ನೇನು ಬೇಕು? ಇಷ್ಟು ವರ್ಷಗಳ ಕಾಲ ನನ್ನನ್ನು ಗೆಲ್ಲಿಸಿದಕ್ಕೆ ನಿಮಗೆಲ್ಲ ಧನ್ಯವಾದಗಳು. ನನಗೆ ರಾಜಕೀಯ ಬೇಡ ಎಂದು ಸುಮ್ಮನಿದ್ದೆ. ಆದರೆ ಭಟ್ಕಳ, ಕಾರವಾರದಿಂದ ಬಂದು ನನಗೆ ಒತ್ತಾಯ ಮಾಡಿದ್ರು. ಯಾರೆ ಸ್ಪರ್ಧಿಸಿದ್ರೂ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಟಿಕೆಟ್ ಸಿಗುವ ವಿಶ್ವಾಸದಲ್ಲಿ ಮೂವರು ನಾಯಕರು

ಮಾಜಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri ) ಅವರು ಈ ಬಾರಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ (uttara kannada lok sabha) ಬಿಜೆಪಿ ಟಿಕೆಟ್ ತಮಗೆ ಸಿಗಲಿದೆ ಎನ್ನುವ ವಿಶ್ವಾಸದಲ್ಲಿದ್ದಾರೆ. ಮತ್ತೊಂದೆಡೆ ನನಗೆ ಸಿಗುತ್ತದೆ ಎಂದು ಹರೀಶ್ ಪ್ರಕಾಶ್ ಕೋಣೆಮನೆ ಅವರು ಪತ್ರಿಕಾ ರಂಗವನ್ನು ತೊರೆದು ಕ್ಷೇತ್ರದಲ್ಲಿ ಸುತ್ತಾಡುತ್ತಿದ್ದಾರೆ. ಇನ್ನು ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ ಸಹ ಇದೊಂದು ಬಾರಿ ತಮಗೆ ಟಿಕೆಟ್​ ಸಿಗುವ ವಿಶ್ವಾಸದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಸಾರ್ವಜನಿಕರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಆರೋಗ್ಯ, ಕೆಲ ಕಾರಣಾಂತರಗಳಿಂದ ರಾಜಕೀಯ ಚಟುವಟಿಕೆಗಳಿಂದ ದೂರ ಉಳಿದುಕೊಂಡಿದ್ದ ಅನಂತ್ ಕುಮಾರ್ ಹೆಗಡೆ ಇದೀಗ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಕ್ಷೇತ್ರದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆದ್ರೆ, ಈ ಬಾರಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್​​ ಅಂತಿಮವಾಗಿ ಹೈಕಮಾಂಡ್ ಯಾರಿಗೆ ಕೊಡಲಿದೆ ಎನ್ನುವುದು ಕುತೂಹಲ ಮೂಡಿಸಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ