ಎಲ್ಲಿಯವರೆಗೆ ಇಸ್ಲಾಂ ಇರುತ್ತೋ ಅಲ್ಲಿವರೆಗೆ ಜಗತ್ತಿಗೆ ನೆಮ್ಮದಿ ಇಲ್ಲ: ಅನಂತಕುಮಾರ್ ಹೆಗಡೆ
ಉತ್ತರ ಕನ್ನಡ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಅವರು ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಹೆಚ್ಚು ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ಪಳ್ಳಿ ಮಸೀದಿ ಧ್ವಂಸದ ಬಗ್ಗೆ ಹೇಳಿಕೆ ನೀಡಿದ್ದ ಅನಂತಕುಮಾರ್ ಹೆಗಡೆ, ಇದೀಗ ಎಲ್ಲಿಯವರೆಗೆ ಇಸ್ಲಾಂ ಇರುತ್ತೋ ಅಲ್ಲಿವರೆಗೆ ಜಗತ್ತಿಗೆ ನೆಮ್ಮದಿಯಿಲ್ಲ ಎಂದಿದ್ದಾರೆ. ಅಲ್ಲದೆ, ಬಿಜೆಪಿ, ಸಂಘಪರಿವಾರ ಇದ್ದಲ್ಲಿ ಮಾತ್ರ ನೆಮ್ಮದಿ ಎಂದಿದ್ದಾರೆ.
ಕಾರವಾರ, ಫೆ.16: ಉತ್ತರ ಕನ್ನಡ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ (Anantkumar Hegde) ಅವರು ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಹೆಚ್ಚು ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ಪಳ್ಳಿ ಮಸೀದಿ ಧ್ವಂಸದ ಬಗ್ಗೆ ಹೇಳಿಕೆ ನೀಡಿದ್ದ ಅನಂತಕುಮಾರ್ ಹೆಗಡೆ, ಇದೀಗ ಎಲ್ಲಿಯವರೆಗೆ ಇಸ್ಲಾಂ (Islam) ಇರುತ್ತೋ ಅಲ್ಲಿವರೆಗೆ ಜಗತ್ತಿಗೆ ನೆಮ್ಮದಿ ಇರುವುದಿಲ್ಲ ಎಂದಿದ್ದಾರೆ. ಅಲ್ಲದೆ, ಬಿಜೆಪಿ (BJP), ಸಂಘಪರಿವಾರ ಇದ್ದಲ್ಲಿ ಮಾತ್ರ ನೆಮ್ಮದಿ ಎಂದಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ಮಾತನಾಡಿದ ಅನಂತಕುಮಾರ್ ಹೆಗಡೆ, ಇಸ್ಲಾಂ ಇರುವವರೆಗೆ ಜಗತ್ತಿನಲ್ಲಿ ನೆಮ್ಮದಿ ಇರುವುದಿಲ್ಲ. ಇಂತಹ ಕಾಲಘಟ್ಟದಲ್ಲಿ ಹಿಂದೂ ಧರ್ಮ, ದೇಶ ಉಳಿಯಲು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗಬೇಕಾಗಿದೆ ಎಂದರು.
ಭಾರತೀಯ ಜನತಾ ಪಕ್ಷ, ಸಂಘ ಪರಿವಾರ ಇದ್ದಲ್ಲಿ ಜಗತ್ತಿಗೆ ನೆಮ್ಮದಿ ಇರಲಿದೆ. ನಾವಿಲ್ಲದಿದ್ದರೆ ಜಗತ್ತಿಗೆ ನೆಮ್ಮದಿ ಇಲ್ಲ, ಹಿಂದುತ್ವವೇ ದೇಶದ ಉಸಿರು ಎಂದ ಅನಂತಕುಮಾರ್ ಹೆಗಡೆ, ಬಿಜೆಪಿ ಉತ್ಸಾಹ ನೋಡಿ ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನವೇ ಕಾಂಗ್ರೆಸ್ನವರು ಶಸ್ತ್ರ ತ್ಯಜಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ವೈಚಾರಿಕವಾಗಿ ಗೆದ್ದು ತೋರಿಸಬೇಕಿದೆ ಎಂದರು.
ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಹಿಂದೂ ಫೈರ್ ಬ್ರ್ಯಾಂಡ್ಗೆ ಹಿನ್ನಡೆ: ಅನಂತ್ಕುಮಾರ್ ಹೆಗಡೆಗೆ ತಲೆನೋವಾದ ಸ್ವಪಕ್ಷದ ನಾಯಕರ ನಡೆ
ಈ ಹಿಂದೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಶ್ರೀರಾಮಮಂದಿರ ವಿಚಾರದಲ್ಲಿ ರಾಜಕೀಯ ಜಟಾಪಟಿ ಜ್ವಾಲೆಯಂತೆ ಹೊತ್ತಿ ಉರಿಯುತ್ತಿದ್ದ ನಡುವೆಯೇ “ಬಾಬ್ರಿ ಮಸೀದಿ ನಿರ್ನಾಮದಂತೆ ಭಟ್ಕಳದಲ್ಲಿಯೂ ಚಿನ್ನದ ಪಳ್ಳಿ ನೆಲಸಮವಾಗಲಿದೆ” ಎಂದು ಅನಂತಕುಮಾರ್ ಹೆಗಡೆ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಬಾಬ್ರಿ ಮಸೀದಿ ನಿರ್ನಾಮದಂತೆ ಭಟ್ಕಳದಲ್ಲಿಯೂ ಮಾಡ್ತೇವೆ, ಅದರ ಸಾಲಿಗೆ ಸಾಲಿಗೆ ಭಟ್ಕಳದ ಚಿನ್ನದ ಪಳ್ಳಿ ಸೇರಲಿದೆ. ಎಲ್ಲೆಲ್ಲಿ ದೇವಸ್ಥಾನ ಒಡೆದು ಮಸೀದಿಗಳನ್ನು ಕಟ್ಟಿದ್ದಾರೋ ಅಲ್ಲೆಲ್ಲ ಮತ್ತೆ ದೇವಸ್ಥಾನ ನಿರ್ಮಾಣವಾಗಲಿದೆ ಎಂದು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಪ್ರಚೋದನಾಕರಿ ಹೇಳಿಕೆ ನೀಡಿದ್ದರು. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ಗುಡುಗಿದ್ದರು.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ