AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಎಚ್ಚೆತ್ತ ಪುರಾತತ್ವ ಇಲಾಖೆ: ಸೋರುತ್ತಿದ್ದ ಬನವಾಸಿ ದೇಗುಲದ ದುರಸ್ತಿ ಕಾರ್ಯ ಆರಂಭ

ಸಾರ್ವಜನಿಕರ ತೀವ್ರ ಪ್ರತಿಭಟನೆಯ ಎಚ್ಚರಿಕೆಯ ಬೆನ್ನಲ್ಲೇ ಎಚ್ಚೆತ್ತ ಪುರಾತತ್ವ ಇಲಾಖೆಯು, ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಐತಿಹಾಸಿಕ 1500 ವರ್ಷ ಹಳೆಯ ಬನವಾಸಿ ಮಧುಕೇಶ್ವರ ದೇವಸ್ಥಾನದ ಮೇಲ್ಛಾವಣಿ ಸೋರಿಕೆ ದುರಸ್ತಿ ಕಾರ್ಯವನ್ನು ಆರಂಭಿಸಿದೆ. ಹೀಗಾಗಿ ಇನ್ನಾದರೂ ದೇಗುಲ ಸೋರುವುದು ನಿಲ್ಲಬಹುದೆಂಬ ನಿರೀಕ್ಷೆಯಲ್ಲಿ ಸ್ಥಳೀಯರಿದ್ದಾರೆ.

ಕೊನೆಗೂ ಎಚ್ಚೆತ್ತ ಪುರಾತತ್ವ ಇಲಾಖೆ: ಸೋರುತ್ತಿದ್ದ ಬನವಾಸಿ ದೇಗುಲದ ದುರಸ್ತಿ ಕಾರ್ಯ ಆರಂಭ
ಬನವಾಸಿ ದೇಗುಲ ದುರಸ್ತಿ ಕಾರ್ಯ ನಡೆಯುತ್ತಿರುವುದುImage Credit source: Tv9 Kannada
ಸೂರಜ್​, ಮಹಾವೀರ್​ ಉತ್ತುರೆ
| Edited By: |

Updated on: Jun 17, 2026 | 1:54 PM

Share

ಶಿರಸಿ, ಜೂನ್​​ 17: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯ ವರದಾ ನದಿ ದಡದಲ್ಲಿರುವ 1500 ವರ್ಷಗಳ ಇತಿಹಾಸಿರುವ ಮಧುಕೇಶ್ವರ ದೇವಸ್ಥಾನ ಕನ್ನಡಿಗರ ಅಸ್ಮಿತೆ ಹಾಗೂ ಸಾಂಸ್ಕೃತಿಕ ಪ್ರತೀಕ. ಹೀಗಾಗಿಯೇ ಇಲ್ಲಿಗೆ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಭಕ್ತರು ಭೇಟಿ ನೀಡುತ್ತಾರೆ. ಹೀಗಿದ್ದರೂ ಕಳೆದ ಕೆಲ ವರ್ಷಗಳಿಂದ ದೇವಸ್ಥಾನ ಸೋರುತ್ತಿತ್ತು. ಎಲ್ಲವನ್ನೂ ಕಂಡು ಕಾಣದಂತಿದ್ದ ಪುರಾತತ್ವ ಇಲಾಖೆಯ ವಿರುದ್ಧ ಸಿಡಿದೆದ್ದ ಸಾರ್ವಜನಿಕರು ಅರೆ ಬೆತ್ತಲೆ ಹೋರಾಟಕ್ಕೆ ಮುಂದಾಗಿದ್ದರು. ಈ ಬಗ್ಗೆ ಟಿವಿ9 ಕೂಡ ವರದಿ ಮಾಡಿತ್ತು. ಆ ಬೆನ್ನಲ್ಲೇ ಎಚ್ಚೆತ್ತ ಇಲಾಖೆ ಕೊನೆಗೂ ಕ್ರಮ ಕೈಗೊಂಡಿದೆ.

ಕಳೆದೆರಡು ವರ್ಷಗಳಿಂದ ದೇವಸ್ಥಾನ ನಿರಂತರ ಸೋರುತ್ತಿದ್ದ ಹಿನ್ನೆಲೆ ಟರ್ಪಾಲ್ ಹಾಕಿ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿತ್ತು. ಆದರಿಂದ ಇದರಿಂದ ದೇಗುಲದ ಅಂದವೇ ಹಾಳಾಗಿದೆ ಎಂದು ಭಕ್ತರು, ಸ್ಥಳೀಯರು ಆಕ್ರೊಶ ಹೊರಹಾಕಿದ್ದರು. ಸದ್ಯ ಇದರ ದುರಸ್ತಿಗೆ ಪುರಾತತ್ವ ಇಲಾಖೆ ಮುಂದಾಗಿದ್ದು, ವಾಟರ್​​ ಪ್ರೂಫ್​​ ಪೇಂಟಿಂಗ್​​ ಕಾರ್ಯಗಳು ನಡೆಯುತ್ತಿವೆ. ಹೀಗಾಗಿ ಇನ್ನಾದರೂ ದೇಗುಲ ಸೋರುವುದು ನಿಲ್ಲಬಹುದೆಂಬ ನಿರೀಕ್ಷೆಯಲ್ಲಿ ಸ್ಥಳೀಯರಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಕರಾವಳಿಯ ಸೌಂದರ್ಯಕ್ಕೆ ಮನಸೋತ ಆನಂದ್ ಮಹೀಂದ್ರಾ! ಶರಾವತಿ ಹಿನ್ನೀರಿನ ಸೌಂದರ್ಯ ಬಣ್ಣಿಸಿ ಪೋಸ್ಟ್

ದಕ್ಷಿಣ ಭಾರತದಲ್ಲಿಯೇ ಅತ್ಯಂತ ಹಳೆಯ ವಾಸ್ತು ಶಿಲ್ಪ ಹೊಂದಿರುವ ಈ ಮಧುಕೇಶ್ವರ ದೇವಸ್ಥಾನ ಸೋರುತ್ತಿದ್ದ ಹಿನ್ನೆಲೆ ಸೋರಿಕೆ ತಡೆಯಲು ಈ ಹಿಂದೆ ಕೆಮಿಕಲ್ ಹಾಕಲಾಗಿತ್ತು. ಆದರೂ ಸಮಸ್ಯೆ ಪರಿಹಾರವಾಗಿರಲಿಲ್ಲ. ಬಳಿಕ ತಗಡಿನ ಶೇಡ್ ಕೂಡ ಹಾಕಲಾಗಿತ್ತಾದರೂ ಅದು ಕೂಡ ಹೆಚ್ಚು ದಿನ ಉಳಿಯಲಿಲ್ಲ. ಹೀಗಾಗಿ 50 ಲಕ್ಷ ವೆಚ್ಚದಲ್ಲಿ ಇನ್ನೊಂದು ಹೊಸ ಪ್ರಯೋಗ ಮಾಡುವುದಾಗಿ ಕಳೆದ ಮೂರು ವರ್ಷಗಳಿಂದ ಪುರಾತತ್ವ ಇಲಾಖೆ ಹೇಳುತ್ತಲೇ ಬಂದಿತ್ತು. ಆದರೆ ದುರಸ್ತಿಗೆ ಮಾತ್ರ ಮುಂದಾಗಿರಲಿಲ್ಲ. ಹೀಗಾಗಿ ಇಲಾಖೆ ವಿರುದ್ಧ ಸಿಡಿದೆದ್ದಿದ್ದ ಸ್ಥಳೀಯರು ಬನವಾಸಿಯಲ್ಲಿ ಅರೆ ಬೆತ್ತಲೆ ಮೆರವಣಿಗೆ ಮಾಡುವುದಾಗಿ ಎಚ್ಚರಿಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಸೂರಜ್​, ಮಹಾವೀರ್​ ಉತ್ತುರೆ
ಸೂರಜ್​, ಮಹಾವೀರ್​ ಉತ್ತುರೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್