AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಲ್ಲಾಪುರ ಬಸ್​ ನಿಲ್ದಾಣದಲ್ಲಿ ಮಹಿಳೆಯ ಬಟ್ಟೆ ಹರಿದು ಹಲ್ಲೆ: ದೂರು ದಾಖಲಿಸಿಕೊಳ್ಳದ ಪೊಲೀಸರು

ಉತ್ತರ ಕನ್ನಡ(Uttara Kannada) ಜಿಲ್ಲೆಯ ಯಲ್ಲಾಪುರ ಬಸ್ ನಿಲ್ದಾಣದಲ್ಲಿ ಫೆಬ್ರವರಿ 5 ರಂದು ನಡುರಸ್ತೆಯಲ್ಲೇ ಮಹಿಳೆಯ ಬಟ್ಟೆ ಹರಿದು ನಾಲ್ವರ ಮಹಿಳೆಯರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ಕುರಿತು ಯಲ್ಲಾಪುರ ಪೊಲೀಸರು ಕೇಸ್​ ದಾಖಲು ಮಾಡಿಕೊಳ್ಳಲು ಹಿಂದೇಟು ಹಾಕಿದ್ದಾರೆ ಎಂದು ನೊಂದ ಮಹಿಳೆ ಟಿವಿ9 ಮುಂದೆ  ಕಣ್ಣೀರು ಹಾಕಿದ್ದಾರೆ.

ಯಲ್ಲಾಪುರ ಬಸ್​ ನಿಲ್ದಾಣದಲ್ಲಿ ಮಹಿಳೆಯ ಬಟ್ಟೆ ಹರಿದು ಹಲ್ಲೆ: ದೂರು ದಾಖಲಿಸಿಕೊಳ್ಳದ ಪೊಲೀಸರು
ಯಲ್ಲಾಪುರ
ಸೂರಜ್​, ಮಹಾವೀರ್​ ಉತ್ತುರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Feb 23, 2024 | 5:19 PM

Share

ಉತ್ತರ ಕನ್ನಡ, ಫೆ.23: ನಡುರಸ್ತೆಯಲ್ಲೇ ಮಹಿಳೆಯ ಬಟ್ಟೆ ಹರಿದು ನಾಲ್ವರ ಮಹಿಳೆಯರು ಹಲ್ಲೆ ನಡೆಸಿದ ಘಟನೆ ಉತ್ತರ ಕನ್ನಡ(Uttara Kannada) ಜಿಲ್ಲೆಯ ಯಲ್ಲಾಪುರ ಬಸ್ ನಿಲ್ದಾಣದಲ್ಲಿ ಫೆಬ್ರವರಿ 5 ರಂದು ನಡೆದಿದೆ. ಇನ್ನು ಹಲ್ಲೆ ಮಾಡಿದವರ ವಿರುದ್ದ ಪ್ರಕರಣ ದಾಖಲಿಸಲು ಮಹಿಳೆ ಹರಿದ ಬಟ್ಟೆಯಲ್ಲೇ ಠಾಣೆಗೆ ಹೋಗಿದ್ದಾರೆ. ಆದರೆ, ಇದು ಸಣ್ಣ ಕೇಸ್​ ಎಂದು ಯಲ್ಲಾಪುರ ಪೊಲೀಸರು ಕೇಸ್​ ದಾಖಲು ಮಾಡಿಕೊಳ್ಳಲು ಹಿಂದೇಟು ಹಾಕಿದ್ದಾರೆ ಎಂದು ನೊಂದ ಮಹಿಳೆ ರಾಜೇಶ್ವರಿ, ಟಿವಿ9 ಮುಂದೆ  ಕಣ್ಣೀರು ಹಾಕಿದ್ದಾರೆ.

ಪ್ರೆಬ್ರವರಿ 20 ರಂದು ಕಾರವಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಒತ್ತಾಯದಿಂದ ಕೇಸ್​ ದಾಖಲು

ಇನ್ನು ಕಾರವಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಒತ್ತಾಯದಿಂದ ಫೆಬ್ರವರಿ 20 ರಂದು ಕೇಸ್ ದಾಖಲು ಮಾಡಲಾಗಿದೆ. ಆದ್ರೆ, ಇದುವರೆಗೂ ಆರೋಪಿಗಳ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ನನಗೆ ರಕ್ಷಣೆ ಬೇಕು, ನನಗೆ ನ್ಯಾಯ ಬೇಕೆಂದು ಕೈ ಮುಗಿದು  ನೊಂದ ಮಹಿಳೆ ರಾಜೇಶ್ವರಿ ಕಣ್ಣಿರು ಹಾಕಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ: ಬಿಎಸ್​​ಪಿ ಮುಖಂಡನಿಂದ ಯುವಕನ ಮೇಲೆ ಹಲ್ಲೆ

ಸಿದ್ಧಿ ಸಮಾಜದ ದಮಾಮಿ ಹೋಮ್ ಸ್ಟೇ ಅವ್ಯವಹಾರ ಪ್ರಶ್ನಿಸಿದಕ್ಕೆ ಹಲ್ಲೆ

ಯಲ್ಲಾಪುರ ತಾಲೂಕಿನ ಇಡಗುಂದಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಲಿಂಗದಬೈಲ್​ ಗ್ರಾಮದಲ್ಲಿ ಸಿದ್ಧಿ ಸಮಾಜದ ದಮಾಮಿ ಹೋಮ್ ಸ್ಟೇ ರೂಪುಗೊಂಡಿದೆ. ಇದರ ಅವ್ಯವಹಾರವನ್ನು ರಾಜೇಶ್ವರಿ ಅವರು ಆರ್ ಟಿ ಐ ದಿಂದ ಮಾಹಿತಿ ಕೇಳಿದ್ದರು. ಇದನ್ನು ಪ್ರಶ್ನಿಸಿದಕ್ಕೆ ಸಿದ್ದಿ ಸಮಾಜದ ಸಾಮಾಜಿಕ ಕಾರ್ಯಕರ್ತೆ,  ಈ ಮಹಿಳೆಯ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾಗುತ್ತಿದೆ.  ಸದ್ಯ ಕಾರವಾರ ಜಿಲ್ಲಾಸ್ಪತ್ರೆಯಲ್ಲಿ ರಾಜೇಶ್ವರಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:16 pm, Fri, 23 February 24

Follow Us
ಸೂರಜ್​, ಮಹಾವೀರ್​ ಉತ್ತುರೆ
ಸೂರಜ್​, ಮಹಾವೀರ್​ ಉತ್ತುರೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ