AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಸ್​ ಜೊತೆ ಸಂಪರ್ಕ ಹೊಂದಿದ್ದ ಇಂಜಿನಿಯರ್​ ಮೇಲೆ ಭಟ್ಕಳ್​ ಮಹಿಳೆಯ ಲವ್​​: ಮನೆ ಹೊಕ್ಕು ವಿಚಾರಣೆ ನಡೆಸಿದ ಎಟಿಎಸ್​

ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ ಅಧಿಕಾರಿಗಳು ಕೆಲ ದಿನಗಳ ಹಿಂದೆ ನಾಸಿಕ್​ನಲ್ಲಿ ಐಸಿಸ್​​ ಸಂಘಟನೆಗೆ ಹಣ ವರ್ಗಾವಣೆ ಮಾಡುತ್ತಿದ್ದ ಇಂಜಿನಿಯರ್ ಹುಸೇನ್ ಅಬ್ದುಲ್ ಅಜೀಜ್ ಶೇಖ್ (32) ಎಂಬಾತನನ್ನು ಟಿಡ್ಕೆ ಕಾಲೋನಿಯಲ್ಲಿ ಬಂಧಿಸಿದ್ದರು. ಈತನನ್ನು ಪ್ರೀತಿ ಮಾಡುತ್ತಿದ್ದ ಭಟ್ಕಳ್​ ಮಹಿಳೆಯನ್ನು ಇದೀಗ ಎಟಿಎಸ್​ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಐಸಿಸ್​ ಜೊತೆ ಸಂಪರ್ಕ ಹೊಂದಿದ್ದ ಇಂಜಿನಿಯರ್​ ಮೇಲೆ ಭಟ್ಕಳ್​ ಮಹಿಳೆಯ ಲವ್​​: ಮನೆ ಹೊಕ್ಕು ವಿಚಾರಣೆ ನಡೆಸಿದ ಎಟಿಎಸ್​
ಭಯೋತ್ಪಾದನಾ ನಿಗ್ರಹ ದಳ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Jan 26, 2024 | 3:01 PM

Share

ಕಾರವಾರ, ಜನವರಿ 26: ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ATS) ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಆಜಾದ್ ನಗರದ ನಿವಾಸಿಯಾಗಿರುವ ಮಹಿಳೆಯೊಬ್ಬರನ್ನು ವಿಚಾರಣೆ ನಡೆಸಿದೆ. ಕಳೆದ ಎರಡು ದಿನಗಳ ಹಿಂದೆ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಐಸಿಸ್​​ (ISIS) ಸಂಘಟನೆಗೆ ಹಣ ವರ್ಗಾವಣೆ ಮಾಡುತ್ತಿದ್ದ ಇಂಜಿನಿಯರ್ ಹುಸೇನ್ ಅಬ್ದುಲ್ ಅಜೀಜ್ ಶೇಖ್ (32) ಎಂಬಾತನನ್ನು ನಾಸಿಕ್‌ನ ಟಿಡ್ಕೆ ಕಾಲೋನಿಯಲ್ಲಿ ಬಂಧಿಸಿದ್ದರು.

ಆರೋಪಿ ಹುಸೇನ್ ಅಬ್ದುಲ್ ಅಜೀಜ್ ಶೇಖ್ ಮನೆಯಲ್ಲಿ ಸಿಮ್ ಕಾರ್ಡ್ಸ್, ಮೊಬೈಲ್ ಫೋನ್‌ಗಳು, ಪೆನ್‌ಡ್ರೈವ್‌‌ಗಳು, ಲ್ಯಾಪ್‌ಟಾಪ್ ಪತ್ತೆಯಾಗಿತ್ತು. ಇವುಗಳನ್ನು ತಪಾಸಣೆ ನಡೆಸಿದಾಗ, ಹುಸೇನ್ ಅಬ್ದುಲ್ ಅಜೀಜ್ ಶೇಖ್ ಜೊತೆ ಭಟ್ಕಳದ ಮಹಿಳೆ ಸಂಪರ್ಕವಿರುವುದು ಪತ್ತೆಯಾಗಿದೆ. ಈ ಮಹಿಳೆ ಆರೋಪಿ ಹುಸೇನ್ ಅಬ್ದುಲ್ ಅಜೀಜ್ ಶೇಖ್​​ನನ್ನು ಪ್ರೀತಿ ಮಾಡುತ್ತಿದ್ದಳು ಎಂಬ ವಿಚಾರವು ತಿಳಿದುಬಂದಿದೆ.

ಬುಧವಾರ (ಜ.24) ಭಟ್ಕಳಕ್ಕೆ ಆಗಮಿಸಿದ್ದ ಭಯೋತ್ಪಾದನಾ ನಿಗ್ರಹ ದಳ ಅಧಿಕಾರಿಗಳು ಭಟ್ಕಳ ಪೊಲೀಸರ ಸಹಾಯ ಪಡೆದು, ಶಂಕಿತ ಉಗ್ರನ ಜೊತೆ ಸಂಪರ್ಕವಿದ್ದ ಮಹಿಳೆಯ ಮನೆಗೆ ತೆರಳಿ ಎರಡು ದಿನಗಳ ಕಾಲ ವಿಚಾರಣೆ ನಡೆಸಿದರು. ಅಧಿಕಾರಿಗಳು ಮಹಿಳೆಯಿಂದ ಸಾಕಷ್ಟು ಮಾಹಿತಿ ಕಲೆ ಹಾಕಿ, ಗುರುವಾರ ತೆರಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು: 8 ಶಂಕಿತ ಉಗ್ರರ ವಿರುದ್ಧ NIA ಚಾರ್ಜ್​​ಶೀಟ್

ಈ ಮಹಿಳೆ ಭಟ್ಕಳದಲ್ಲಿ ಆನ್‌ಲೈನ್ ಅರೇಬಿಕ್ ಕ್ಲಾಸ್ ನಡೆಸುತ್ತಿದ್ದಾಳೆ. ಈಕೆ ಜ.17ರಂದು ಆರೋಪಿ ಹುಸೇನ್ ಅಬ್ದುಲ್ ಅಜೀಜ್ ಶೇಖ್​ನನ್ನು ಭಟ್ಕಳದ ಲಾಡ್ಜ್‌ವೊಂದರಲ್ಲಿ ಭೇಟಿಯಾಗಿದ್ದಳು. ಅಲ್ಲದೇ, ಆರೋಪಿ ಹುಸೇನ್ ಅಬ್ದುಲ್ ಅಜೀಜ್ ಶೇಖ್​ಗೆ ವಿವಿಧ ಹಂತಗಳಲ್ಲಿ ಈವರೆಗೆ 4-5 ಲಕ್ಷ ರೂ. ನೀಡಿದ್ದಾಳೆ. ಆರೋಪಿ ಹುಸೇನ್ ಅಬ್ದುಲ್ ಅಜೀಜ್ ಶೇಖ್ ಜೊತೆ ಮಹಿಳೆ ನಿರಂತರ ಸಂಪರ್ಕದಲ್ಲಿದ್ದಳು ಎಂದು ಮೂಲಗಳಿಂದ ಮಾಹಿತಿ ದೊರೆತಿದೆ. ಈ ಹಿನ್ನೆಲೆಯಲ್ಲಿ ಭಟ್ಕಳದ ಮಹಿಳೆಯನ್ನು ತನಿಖೆ ಮಾಡಲಾಗಿದೆ.

ಯಾರು ಈ ಹುಸೇನ್ ಅಬ್ದುಲ್ ಅಜೀಜ್ ಶೇಖ್

ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್‌ಗೆ ಬೆಂಬಲ ಮತ್ತು ಧನಸಹಾಯ ಮಾಡಿದ ಆರೋಪ ಮೇಲೆ ಇಂಜಿನಿಯರ್​ ಹುಸೇನ್ ಅಬ್ದುಲ್ ಅಜೀಜ್ ಶೇಖ್​ನನ್ನ ಮುಂಬೈನ ಭಯೋತ್ಪಾದನಾ ನಿಗ್ರಹ ದಳ ಅಧಿಕಾರಿಗಳು ಬಂಧಿಸಿದ್ದರು. ಈತ ಐಸಿಸ್ ಭಯೋತ್ಪಾದಕ ಸಂಘಟನೆಗೆ ಮೂರು ಬಾರಿ ಹಣ ವರ್ಗಾವಣೆ ಮಾಡಿರುವುದು ತಮ್ಮ ತನಿಖೆಯಿಂದ ತಿಳಿದುಬಂದಿದೆ ಎಂದು ಎಟಿಎಸ್ ಅಧಿಕಾರಿಗಳು ತಿಳಿಸಿದ್ದರು. ಎಂಜಿನಿಯರ್ ಜೊತೆಗಿದ್ದವರು, ಸಂಪರ್ಕದಲ್ಲಿದ್ದವರನ್ನೂ ವಿಚಾರಣೆ ನಡೆಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:00 pm, Fri, 26 January 24

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್