ಕಾಂಗ್ರೆಸ್ ಮುಖಂಡನ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಉತ್ತರ ಕನ್ನಡ ಜಿಲ್ಲೆಯ ಅಂಕೋಲದಲ್ಲಿ ಕಾಂಗ್ರೆಸ್ ನಾಯಕ ಗೋಪಾಲಕೃಷ್ಣ ನಾಯ್ಕರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಕು ಮತ್ತು ರಾಡ್‌ನಿಂದ ಮನಬಂದಂತೆ ಇರಿದು ಪರಾರಿಯಾಗಿದ್ದಾರೆ. ಗೋವಾ ನೋಂದಣಿಯ ಕಾರಿನಲ್ಲಿ ಬಂದಿದ್ದ ಹಂತಕರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ರಾಜಕೀಯ ದ್ವೇಷದ ದಾಳಿಯ ಶಂಕೆ ವ್ಯಕ್ತವಾಗಿದೆ. ಘಟನೆಯ ಸಂಪೂರ್ಣ ವಿವರ ಇಲ್ಲಿದೆ.

ಕಾಂಗ್ರೆಸ್ ಮುಖಂಡನ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ
ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ
Image Credit source: tv9
Edited By:

Updated on: Mar 25, 2026 | 2:22 PM

ಕಾರವಾರ, ಮಾರ್ಚ್ 25: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕೇಣಿ ಬಳಿ ಕಾಂಗ್ರೆಸ್ (Congress) ಮುಖಂಡ ಗೋಪಾಲಕೃಷ್ಣ ನಾಯ್ಕ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಗೋಪಾಲಕೃಷ್ಣ ನಾಯ್ಕ ಅವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಗೋವಾ ನೋಂದಣಿಯ ಫೋರ್ಡ್ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿ ದಾಳಿ ನಡೆಸಿದ್ದಾರೆ. ಮೊದಲು ರಾಡ್‌ನಿಂದ ಹಲ್ಲೆ ನಡೆಸಿದ ಬಳಿಕ, ಚಾಕುವಿನಿಂದ ತಲೆ ಮತ್ತು ಕುತ್ತಿಗೆ ಭಾಗಕ್ಕೆ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾರೆ.

ಸದ್ಯ, ಗಂಭೀರ ಗಾಯಗೊಂಡಿರುವ ಗೋಪಾಲಕೃಷ್ಣ ನಾಯ್ಕರನ್ನು ಅಂಕೋಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಚಿಕಿತ್ಸೆ ಮುಂದುವರಿದಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ದಾಳಿ ನಡೆಸಿದ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದು, ಅವರ ಪತ್ತೆಗಾಗಿ ಅಂಕೋಲ ಠಾಣೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ದಾಳಿಯ ಹಿಂದಿನ ಕಾರಣಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆ ರಾಜಕೀಯ ವಲಯದಲ್ಲೂ ಆತಂಕ ಉಂಟುಮಾಡಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲೂ ಗ್ಯಾಸ್ ಸಿಲಿಂಡರ್ ಅಭಾವ: ಜನರ ಪರದಾಟ

ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಕಮರ್ಷಿಯಲ್ ಜತೆಗೆ ಗೃಹ ಬಳಕೆಯ ಎಲ್​ಪಿಜಿ ಸಿಲಿಂಡರ್ ಭಾವ ತಲೆದೋರಿದೆ. ವಿತರಣೆಯಲ್ಲಿ ಭಾರಿ ಕಡಿತ ಮಾಡಿರುವ ಹಿನ್ನಲೆ ಜಿಲ್ಲೆಯ ಹೊಟೇಲ್ , ರೆಸ್ಟೋರೆಂಟ್ ಹಾಗೂ ದೊಡ್ಡ ಪ್ರವಾಸಿತಾಣಗಳಿಗೂ ಭಾರಿ ಪೆಟ್ಟು ಬಿದ್ದಿದೆ. ಜಿಲ್ಲೆಯಲ್ಲಿ ಡೊಮೆಸ್ಟಿಕ್ ಸಿಲಿಂಡರ್ 4,23,000 ಕನೆಕ್ಷನ್ ಇದ್ದು, ಕಮರ್ಷಿಯಲ್ ಸಿಲಿಂಡರ್ 11,000 ಕನೆಕ್ಷನ್ ಇದೆ. ಪ್ರತಿ ದಿನ 9000 ಡೊಮೆಸ್ಟಿಕ್ ಸಿಲಿಂಡರ್ ವಿತರಿಸಲಾಗುತ್ತಿದೆ. ಇನ್ನು ಕೇಂದ್ರ ಸರ್ಕಾರದ ಆದೇಶದ ಪ್ರಕಾರ ಪ್ರತಿದಿನ 20 ಪ್ರತಿಶತ, ಅಂದರೆ 700 ಕಮರ್ಶಿಯಲ್ ಸಿಲಿಂಡರ್ ಮಾತ್ರ ಕೊಡಲಾಗುತ್ತಿದೆ. ಸದ್ಯ ಜಿಲ್ಲೆಯಲ್ಲಿ ಕಮರ್ಶಿಯಲ್ ಸಿಲಿಂಡರ್ ಕೊರತೆ ಹೆಚ್ಚಾಗಿ ಕಂಡು ಬರುತ್ತಿರುವ ಹಿನ್ನೆಲೆ, ಕೆಲವು ಹೊಟೇಲ್​​ಗಳಲ್ಲಿ ಡೊಮೆಸ್ಟಿಕ್ ಸಿಲಿಂಡರ್ ಬಳಸುತ್ತಿರುವುದನ್ನು ಅರಿತು ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಅಧಿಕಾರಿಗಳ ತಂಡ 300 ಕ್ಕೂ ಹೆಚ್ಚು ಕಡೆ ದಾಳಿ ಮಾಡಿದ್ದು, 14 ಪ್ರಕರಣ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:01 pm, Wed, 25 March 26

Follow Us