ನ.1ರಿಂದ ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧ: ಬದಲಿ ಮಾರ್ಗ ಇಲ್ಲಿದೆ

ಸಾಗರಮಾಲಾ ಯೋಜನೆಯಡಿ ಅಗಲೀಕರಣ ಕಾಮಗಾರಿ ಹಿನ್ನೆಲೆ ನ.1ರಿಂದ ಉತ್ತರ ಕನ್ನಡ ಜಿಲ್ಲೆ ಶಿರಸಿ-ಕುಮಟಾ ಮಾರ್ಗದ ರಾಷ್ಟ್ರೀಯ ಹೆದ್ದಾರಿ 766(E) ನಲ್ಲಿ ವಾಹನ ಸಂಚಾರ ಸಂಪೂರ್ಣ ನಿಷೇಧಿಸಿ ಉಪ ವಿಭಾಗಾಧಿಕಾರಿ ಆರ್.ದೇವರಾಜ್ ಬುಧವಾರ ಆದೇಶ ಹೊರಡಿಸಿದ್ದಾರೆ. ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗ ಹೀಗಿವೆ.

ನ.1ರಿಂದ ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧ: ಬದಲಿ ಮಾರ್ಗ ಇಲ್ಲಿದೆ
ಶಿರಸಿ-ಕುಮಟಾ ಹೆದ್ದಾರಿ
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ಗಂಗಾಧರ​ ಬ. ಸಾಬೋಜಿ

Updated on:Oct 18, 2023 | 8:54 PM

ಕಾರವಾರ, ಅಕ್ಟೋಬರ್​​​ 18: ಸಾಗರಮಾಲಾ ಯೋಜನೆಯಡಿ ಅಗಲೀಕರಣ ಕಾಮಗಾರಿ ಹಿನ್ನೆಲೆ ನ.1ರಿಂದ ಉತ್ತರ ಕನ್ನಡ ಜಿಲ್ಲೆ ಶಿರಸಿ-ಕುಮಟಾ ಮಾರ್ಗದ ರಾಷ್ಟ್ರೀಯ ಹೆದ್ದಾರಿ (national highway) 766(E) ನಲ್ಲಿ ವಾಹನ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ. ಸಂಚಾರಕ್ಕೆ ನಿರ್ಬಂಧ ವಿಧಿಸಿ, ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗ ಕಲ್ಪಿಸಿ ಉಪ ವಿಭಾಗಾಧಿಕಾರಿ ಆರ್.ದೇವರಾಜ್ ಬುಧವಾರ ಆದೇಶ ಹೊರಡಿಸಿದ್ದಾರೆ. ಶಿರಸಿ ಮಾರ್ಗದಲ್ಲಿ ಲಘುಗಾತ್ರದ ವಾಹನಗಳಿಗೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಬದಲಿ ಮಾರ್ಗಗಳು ಹೀಗಿವೆ

  • ಕುಮಟಾ ಮಾರ್ಗದಿಂದ ದೊಡ್ಮನೆ ಘಟ್ಟ ಭಾಗದಿಂದ ಸಿದ್ದಾಪುರ ಮಾರ್ಗವಾಗಿ ಶಿರಸಿ ಮಾರ್ಗದಲ್ಲಿ ಲಘು ಗಾತ್ರದ ವಾಹನಗಳಿಗೆ ಅವಕಾಶ.
  • ಹೊನ್ನಾವರ ಮೂಲಕ ಮಾವಿನಗುಂಡಿ ಘಟ್ಟ ಭಾಗದಿಂದ ಸಿದ್ದಾಪುರ ಮಾರ್ಗವಾಗಿ ಶಿರಸಿ ಮಾರ್ಗದಲ್ಲಿ ಎಲ್ಲಾ ತರದ ವಾಹನಗಳಿಗೆ ಅವಕಾಶ.
  • ಶಿರಸಿ ಮಾರ್ಗವಾಗಿ ಯಾಣದಿಂದ ವಡ್ಡಿ ಮಾರ್ಗವಾಗಿ ಕುಮಟಾಕ್ಕೆ ಸೇರುವ ಮಾರ್ಗದಲ್ಲಿ ಲಘು ಗಾತ್ರದ ವಾಹನಗಳಿಗೆ ಮಾತ್ರ ಅವಕಾಶ.
  • ಶಿರಸಿಯಿಂದ ಯಲ್ಲಾಪುರ ಮಾರ್ಗವಾಗಿ ಅಂಕೋಲಾ ಮಾರ್ಗದಲ್ಲಿ ಎಲ್ಲ ತರದ ವಾಹನಗಳ ಸಂಚಾರಕ್ಕೆ ಅವಕಾಶ.
  • ಯಾಣ ಮತ್ತು ದೊಡ್ಮನೆ ಮಾರ್ಗದಲ್ಲಿ ಲಘು ವಾಹನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಶಿರಸಿ ವಿಭಾಗದಲ್ಲಿ 33 ಕಿ.ಮೀ ಪೈಕಿ 25 ಕಿ.ಮೀ ರಸ್ತೆ ಕಾಮಗಾರಿ ಆಗಿದೆ. 2.84 ಕಿ.ಮಿ. ಒಂದು ಕಡೆ ರಸ್ತೆಯಾಗಿದೆ. ಉಳಿದಂತೆ 6.18 ಕಿ.ಮೀ ರಸ್ತೆ ಆಗಬೇಕಿದೆ. ದೇವಿಮನೆ ಘಟ್ಟ ಪ್ರದೇಶದಲ್ಲಿ ರಸ್ತೆ ವಿಸ್ತರಣೆ, 9 ಸೇತುವೆ ನಿರ್ಮಾಣ ಆಗಬೇಕಿದೆ.

ಇದನ್ನೂ ಓದಿ: ಕಾಂಗ್ರೆಸ್ ಮುಖಂಡನೊಂದಿಗೆ ಮಹಿಳೆಯ ಹೆಸರು ಬಳಕೆ ಆರೋಪ: ಯುವಕನೋರ್ವನಿಗೆ ಹಿಗ್ಗಾಮುಗ್ಗಾ ಥಳಿತ

ಶಿರಸಿ ಕುಮಟಾ ರಸ್ತೆ ಕಾಮಗಾರಿ ವೇಗವಾಗಿ ನಡೆಯುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಆರ್​ಎನ್​ಎಸ್​​ ಮೂಲಸೌಕರ್ಯ ಕೋರಿಕೆ ಮೇರೆಗೆ ಈ ಮಾರ್ಗದಲ್ಲಿ ವಾಹನಗಳಲ್ಲಿ ಸಂಚಾರ ನಿಷೇಧಿಸಲಾಗುತ್ತಿದೆ.

ಇದನ್ನೂ ಓದಿ: ಕಾರಿನಡಿಯಲ್ಲಿತ್ತು ಕಾಳಿಂಗ ಸರ್ಪ! 80 ಕಿಮೀ ಪ್ರಯಾಣಿಸಿ ಬೆಚ್ಚಿ ಬಿದ್ದ ಸವಾರರು ಆಮೇಲೆ ಮಾಡಿದ್ದೇನು?

ಶಿರಸಿ-ಕುಮಟಾ ರಸ್ತೆಗೆ ಈ ಹಿಂದೆ ಪರಿಸರ ವಿಚಾರವಾಗಿ ತಡೆಯಾಜ್ಞೆ ಇತ್ತು. ಸದ್ಯ ಅದು ತೆರವುಗೊಂಡಿದೆ. ಹೀಗಾಗಿ ಕಾಮಗಾರಿ ಕೈಗೊಳ್ಳಲು ಯಾವುದೆ ತೊಂದರೆಯಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:28 pm, Wed, 18 October 23

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ