AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಟ್ಕಳದ ಅರಣ್ಯದಲ್ಲಿ ದನಗಳ ರಾಶಿ ಅಸ್ಥಿಪಂಜರ ಸಿಕ್ಕಿದ್ದ ಪ್ರಕರಣಕ್ಕೆ ತಿರುವು: ಕೊನೆಗೂ ರಹಸ್ಯ ಬಯಲಿಗೆಳೆದ ಪೊಲೀಸರು

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಅರಣ್ಯದಲ್ಲಿ ನೂರಾರು ಗೋವುಗಳ ಅಸ್ಥಿಪಂಜರ ಸಿಕ್ಕ ಪ್ರಕರಣಕ್ಕೆ ಇದೀಗ ದೊಡ್ಡ ತಿರುವು ದೊರೆತಿದೆ. ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಹೆಡೆಮುರಿ ಕಟ್ಟಲಾಗಿದ್ದು ,ಇನ್ನಷ್ಟು ಗೋಕಳ್ಳರ ಹೆಡೆಮುರಿ ಕಟ್ಟಲು ಪೊಲೀಸರು ಸಿದ್ಧವಾಗಿದ್ದಾರೆ. ಇದರೊಂದಿಗೆ ದನಗಳ ರಾಶಿ ಅಸ್ಥಿಪಂಜರ ಸಿಕ್ಕಿದ್ದ ಪ್ರಕರಣದ ರಹಸ್ಯವನ್ನು ಕೊನೆಗೂ ಪೊಲೀಸರು ಬಯಲಿಗೆಳೆದಂತಾಗಿದೆ.

ಭಟ್ಕಳದ ಅರಣ್ಯದಲ್ಲಿ ದನಗಳ ರಾಶಿ ಅಸ್ಥಿಪಂಜರ ಸಿಕ್ಕಿದ್ದ ಪ್ರಕರಣಕ್ಕೆ ತಿರುವು: ಕೊನೆಗೂ ರಹಸ್ಯ ಬಯಲಿಗೆಳೆದ ಪೊಲೀಸರು
ದನಗಳ ರಾಶಿ ಅಸ್ಥಿಪಂಜರ ಸಿಕ್ಕಿದ್ದ ಜಾಗ ಹಾಗೂ ಒಳಚಿತ್ರದಲ್ಲಿ ಬಂಧಿತ ಆರೋಪಿಗಳು
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Sep 18, 2025 | 11:51 AM

Share

ಕಾರವಾರ, ಸೆಪ್ಟೆಂಬರ್ 18: ಉತ್ತರ ಕನ್ನಡ ಜಿಲ್ಲೆಯ (Uttara Kannada) ಭಟ್ಕಳದ ಅರಣ್ಯದಲ್ಲಿ ದನಗಳ ರಾಶಿ ಅಸ್ಥಿಪಂಜರ ಸಿಕ್ಕಿದ್ದ ಪ್ರಕರಣವನ್ನು ಬಯಲಿಗೆಳೆಯುವಲ್ಲಿ ಪೊಲೀಸರು ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಹಲವು ಊರುಗಳಲ್ಲಿ ಕದ್ದ ಗೋವುಗಳನ್ನು ಭಟ್ಕಳಕ್ಕೆ ತಂದು ಮಾಂಸಕ್ಕಾಗಿ ಕಡಿದ ನಂತರ ಉಳಿದ ಮೂಳೆಗಳನ್ನು ಅರಣ್ಯದಲ್ಲಿದಲ್ಲಿ ಹಾಕಿ ಪರಾರಿಯಾಗುತಿದ್ದರು ಎಂಬುದು ಇದೀಗ ಗೊತ್ತಾಗಿದೆ. ಈ ಸಂಬಂಧ ಇಬ್ಬರನ್ನು ಬಂಧಿಸಿರುವ ಪೊಲೀಸರು, ಇತರ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ಭಟ್ಕಳದ ಕಾಡಿನಲ್ಲಿ ದನಗಳ ಅಸ್ಥಿಪಂಜರ ಸಿಕ್ಕಿದ್ದ ಪ್ರಕರಣದ ಹಿನ್ನೆಲೆ

ಭಟ್ಕಳದ ಮಗ್ದೂಂ ಕಾಲೂನಿ ಬಳಿಯ ಬೆಳ್ನೆ ಗ್ರಾಮದ ಸರ್ವೆ ನಂಬರ್ 74 ರ ಭಾಗದಲ್ಲಿ ಸಿಕ್ಕ ರಾಶಿ ರಾಶಿ ಮೂಳೆಗಳು ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸಿತ್ತು. ಹಿಂದೂಪರ ಹೋರಾಟಗಾರರು ಸ್ಥಳಕ್ಕೆ ತೆರಳಿ ವಿಡಿಯೋ ಚಿತ್ರೀಕರಿಸಿ ಘಟನೆಯನ್ನು ಖಂಡಿಸಿದ್ದರು. ಆದರೆ, ಈ ವಿಡಿಯೋಗಳು ಸುಳ್ಳು. ಕೋಮು ಸಂಘರ್ಷ ನಡೆಸಲು ತಂತ್ರಜ್ಞಾನ ಬಳಸಿ ವಿಡಿಯೋ ಚಿತ್ರೀಕರಣ ಮಾಡಲಾಗಿದೆ ಎಂದು ಮಗ್ದೂಂ ಕಾಲೋನಿಯ ತಾಹೀರ್ ಮಸ್ತಾನ್ ಎಂಬಾತ ಕೆಲವರ ಮೇಲೆ ದೂರು ನೀಡಿದ್ದರು.

ಸ್ಥಳಕ್ಕೆ ತೆರಳಿದ್ದ ಪೊಲೀಸರು, ಪುರಸಭೆ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಗೋವುಗಳ ಮೂಳೆ ಇರುವುದನ್ನು ಪತ್ತೆ ಮಾಡಿದ್ದರು. ಬೆಳ್ನೆ ಭಾಗದ ಅರಣ್ಯಾಧಿಕಾರಿ ಭಟ್ಕಳ ಶಹರ ಠಾಣೆಯಲ್ಲಿ ದೂರು ನೀಡಿದ್ದು, ಇದರ ಬೆನ್ನಲ್ಲೇ ಈ ಪ್ರಕರಣ ಸಂಬಂಧ ಎರಡು ತಂಡಗಳನ್ನು ಮಾಡಿ ತನಿಖೆ ಕೈಗೊಳ್ಳಲಾಗಿತ್ತು. ಇದೀಗ ಭಟ್ಕಳದ ಮೊಹ್ಮದ್ ಸಮಾನ್, ಮಹಮ್ಮದ್ ರಾಹೀನ್ ಎಂಬ ಇಬ್ಬರನ್ನು ಬಂಧಿಸಲಾಗಿದೆ.

ಸದ್ಯ ಭಟ್ಕಳದ ಅರಣ್ಯದಲ್ಲಿ ಸಿಕ್ಕ ಗೋವುಗಳ ಅಸ್ತಿ ಪಂಚರದ ಬೆನ್ನುಬಿದ್ದ ಭಟ್ಕಳ ಶಹರ ಠಾಣೆಯ ಸಿಪಿಐ ದಿವಾಕರ್ ನೇತೃತ್ವದ ಪಿ.ಎಸ್.ಐ ನವೀನ್ ರವರ ತಂಡ ಇಬ್ಬರನ್ನು ಬಂಧಿಸಿ ಉಳಿದ ಗೋಕಳ್ಳರ ಬಂಧನಕ್ಕೆ ಬಲೆ ಬೀಸಿದೆ.

ಇದನ್ನೂ ಓದಿ: ಹಿರಿಯರ ಕಾಲದ ದೇವರ ತೆಂಗಿನಕಾಯಿಗಾಗಿ ತಮ್ಮನ ಹೆಂಡ್ತಿಯನ್ನೇ ಹತ್ಯೆಗೈದ: ಅಷ್ಟಕ್ಕೂ ತೆಂಗಿನಕಾಯಿಯ ಮಹತ್ವವೇನು?

ನಿರಂತರವಾಗಿ ಜಿಲ್ಲೆಯಲ್ಲಿ ಗೋ ಕಳ್ಳತನ ಹತ್ಯೆ ನಡೆಯುತ್ತಿದೆ. ಈ ಒಂದು ವರ್ಷದಲ್ಲಿ 41 ಪ್ರಕರಣ ದಾಖಲಿಸಲಾಗಿದ್ದು , 98 ಜನ ಅಪರಾಧಿಗಳನ್ನು ಜೈಲಿಗೆ ಕಳುಹಿಸಲಾಗಿದೆ. ಇದಲ್ಲದೇ 191 ಹಸುಗಳನ್ನ ರಕ್ಷಣೆ ಮಾಡಿ 2425 ಕೆಜಿ ಗೋ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:55 am, Thu, 18 September 25

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ