AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶೋತ್ಸವ ಮೆರವಣಿಗೆ ವೇಳೆ ಭಟ್ಕಳದಲ್ಲಿ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ ಆರೋಪ: ಬಿಗಿ ಬಂದೋಬಸ್ತ್

ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ ಹಾಗೂ ಮದರಸಾ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ಎರಡು ಕಿಟಕಿ ಗಾಜುಗಳು ಹಾನಿಗೊಳಗಾಗಿದ್ದು, ಪೊಲೀಸ್ ದೂರು ದಾಖಲಾಗಿದೆ. ಎಸ್ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನದ ಭರವಸೆ ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

ಗಣೇಶೋತ್ಸವ ಮೆರವಣಿಗೆ ವೇಳೆ ಭಟ್ಕಳದಲ್ಲಿ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ ಆರೋಪ: ಬಿಗಿ ಬಂದೋಬಸ್ತ್
ಭಟ್ಕಳದಲ್ಲಿ ಹೆಚ್ಚಿನ ಪೊಲೀಸರ ನಿಯೋಜನೆImage Credit source: tv9
ಅಶೋಕ್​ ಪೂಜಾರಿ
| Edited By: |

Updated on:Sep 17, 2026 | 10:25 AM

Share

ಮುಖ್ಯಾಂಶಗಳು

  • ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ ಆರೋಪ
  • ಎರಡು ಕಿಟಕಿ ಗಾಜುಗಳಿಗೆ ಹಾನಿ
  • ಭಟ್ಕಳದಲ್ಲಿ ಹೆಚ್ಚಿನ ಪೊಲೀಸರ ನಿಯೋಜನೆ

ಕಾರವಾರ, ಸೆಪ್ಟೆಂಬರ್ 17: ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ ಹಾಗೂ ಮದರಸಾ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪ ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕೇಳಿಬಂದಿದೆ. ಬುಧವಾರ ರಾತ್ರಿ ಭಟ್ಕಳ ತಾಲೂಕಿನ ಗುಳ್ಮಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಘಟನೆ ನಡೆದಿದೆ. ಭಟ್ಕಳದ ತಲಾಂದದಿಂದ ಸಾರ್ವಜನಿಕ ಗಣೇಶ ವಿಸರ್ಜನಾ ಮೆರವಣಿಗೆ ಆರಂಭವಾಗಿತ್ತು. ಮೆರವಣಿಗೆ ಗುಳ್ಮಿ ರೈಲ್ವೆ ಬ್ರಿಡ್ಜ್ ದಾಟಿ ರೈಲ್ವೆ ಸ್ಟೇಷನ್ ರಸ್ತೆಯ ಮೂಲಕ ಸಾಗುತ್ತಿದ್ದ ವೇಳೆ, ರಸ್ತೆಯ ಪಕ್ಕದಲ್ಲಿರುವ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿ ಹಾಗೂ ನೆಲಮಹಡಿಯಲ್ಲಿರುವ ತಾಜುಸುನ್ನಾ ಅರೇಬಿಕ್ ಮದರಸಾ ಮೇಲೆ ಅಪರಿಚಿತರು ಕಲ್ಲು ತೂರಿದ್ದಾರೆ ಎಂದು ಆರೋಪಿಸಲಾಗಿದೆ.

ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ಜನ

ಈ ಸಂಬಂಧ ಸ್ಥಳೀಯ ಅಬ್ದುಲ್ ಅಲಿಂ ಎಂಬವರು ಭಟ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಲ್ಲು ತೂರಾಟದಿಂದ ಕಟ್ಟಡದ ಎರಡು ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆಗೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಸ್ಥಳೀಯ ಮುಸ್ಲಿಮರು ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದರು.

ಕೃತ್ಯ ಎಸಗಿದವರ ಬಂಧಿಸುವುದಾಗಿ ಪೊಲೀಸರ ಭರವಸೆ

ವಿಷಯ ತಿಳಿದು ಸ್ಥಳಕ್ಕೆ ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೃತ್ಯ ಎಸಗಿದವರನ್ನು ಬಂಧಿಸುವುದಾಗಿ ಎಸ್ಪಿ ಭರವಸೆ ನೀಡಿದ ಬಳಿಕ ಸ್ಥಳೀಯರು ಪೊಲೀಸ್ ಠಾಣೆಯಿಂದ ತೆರಳಿದ್ದಾರೆ.

ಭಟ್ಕಳದಲ್ಲಿ ಬಿಗಿ ಬಂದೋಬಸ್ತ್: ಪೊಲೀಸರ ನಿಯೋಜನೆ ಹೆಚ್ಚಳ

ಘಟನೆ ಹಿನ್ನೆಲೆಯಲ್ಲಿ ಭಟ್ಕಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಕಲ್ಲು ತೂರಾಟದ ಆರೋಪದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಮೆರವಣಿಗೆಯ ಸಂದರ್ಭದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಗಳು ಹಾಗೂ ಇತರ ಮಾಹಿತಿಗಳನ್ನು ಪರಿಶೀಲಿಸಲಿದ್ದಾರೆ.

ಗಣಪತಿ ಉತ್ಸವ ಸಮಿತಿಯಿಂದಲೂ ಪ್ರತಿ ದೂರು

ಕಲ್ಲು ತೂರಾಟ ಘಟನೆ ಸಂಬಂಧ ತಲಾಂದ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಜು ಸಹ ಪ್ರತಿ ದೂರು ನೀಡಿದ್ದಾರೆ. ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಅಪರಿಚಿತ ಕಿಡಿಗೇಡಿಗಳು ಮೂರ್ತಿಯತ್ತ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಅವರು ಆರೋಪ ಮಾಡಿದ್ದಾರೆ. ಕಲ್ಲು ತೂರಾಟ ಮಾಡಿ ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುವ ಪ್ರಯತ್ನ ಮಾಡಲಾಗಿದೆ. ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬೇಡ್ತಿ-ಅಘನಾಶಿನಿ ನದಿ ತಿರುವು, ಜೋಡಣೆ ಯೋಜನೆಗೆ ವಿರೋಧ; ಸರ್ಕಾರದ ವಿರುದ್ಧ ಸಿಡಿದೆದ್ದ ಕರಾವಳಿ, ಮಲೆನಾಡಿಗರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:25 am, Thu, 17 September 26

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!