AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್- ಇಸ್ರೇಲ್ ಯುದ್ಧದಿಂದ ತೈಲ ಬೆಲೆ ಏರಿಕೆ ಸುದ್ದಿ: ಭಟ್ಕಳದಲ್ಲಿ ಡೀಸೆಲ್, ಪೆಟ್ರೋಲ್​​ಗೆ ಮುಗಿಬಿದ್ದ ಜನ

ಭಟ್ಕಳದಲ್ಲಿ ಇರಾನ್, ಇಸ್ರೇಲ್, ಅಮೆರಿಕ ಯುದ್ಧದ ವದಂತಿಯಿಂದ ಪೆಟ್ರೋಲ್ ಸಂಗ್ರಹಿಸಲು ಜನ ಮುಗಿಬಿದ್ದಿದ್ದಾರೆ. ಬೆಲೆ ಏರಿಕೆ ಅಥವಾ ಪೂರೈಕೆ ಸ್ಥಗಿತ ಭೀತಿಯಿಂದ ಪೆಟ್ರೋಲ್ ಬಂಕ್‌ಗಳಲ್ಲಿ ಭಾರಿ ನೂಕುನುಗ್ಗಲು ಉಂಟಾಗಿ, ಕೆಲವೆಡೆ ಖಾಲಿಯಾಗಿದೆ. ಅಧಿಕಾರಿಗಳು ಇದು ಕೇವಲ ವದಂತಿ ಎಂದು ಸ್ಪಷ್ಟಪಡಿಸಿದ್ದಾರೆ. ಅನಗತ್ಯ ಆತಂಕದಿಂದ ಕೃತಕ ಅಭಾವ ಸೃಷ್ಟಿಸಬೇಡಿ ಎಂದು ಮನವಿ ಮಾಡಿದ್ದಾರೆ. ಸದ್ಯ ತೈಲ ಪೂರೈಕೆ ಅಥವಾ ಬೆಲೆ ಏರಿಕೆಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ.

ಇರಾನ್- ಇಸ್ರೇಲ್ ಯುದ್ಧದಿಂದ ತೈಲ ಬೆಲೆ ಏರಿಕೆ ಸುದ್ದಿ: ಭಟ್ಕಳದಲ್ಲಿ ಡೀಸೆಲ್, ಪೆಟ್ರೋಲ್​​ಗೆ ಮುಗಿಬಿದ್ದ ಜನ
ಭಟ್ಕಳದಲ್ಲಿ ಡೀಸೆಲ್, ಪೆಟ್ರೋಲ್​​ಗೆ ಮುಗಿಬಿದ್ದ ಜನ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Mar 04, 2026 | 7:09 PM

Share

ಭಟ್ಕಳ, ಮಾ.4 : ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಯುದ್ಧದ ಕಾರ್ಮೋಡಗಳು ತೈಲ ಬೆಲೆಯ ಮೇಲೆ ಭಾರಿ ಹೊಡೆತ ನೀಡಲಿವೆ ಎಂಬ ವದಂತಿ ಭಟ್ಕಳದಲ್ಲಿ ಸಂಚಲನ (Bhatkal Petrol Panic) ಮೂಡಿಸಿದೆ. ಸುಳ್ಳು ಸುದ್ದಿಯನ್ನು ನಂಬಿದ ಜನರು ಆತಂಕಗೊಂಡು ಇದೀಗ ಪೆಟ್ರೋಲ್ ಬಂಕ್‌ಗಳಿಗೆ ನೂಕುನುಗ್ಗಲು ಮಾಡುತ್ತಿದ್ದಾರೆ. ಯುದ್ಧದ ಹಿನ್ನೆಲೆಯಲ್ಲಿ ಪೆಟ್ರೋಲ್ ಬೆಲೆ ಏಕಾಏಕಿ ಹೆಚ್ಚಾಗಬಹುದು ಅಥವಾ ಪೂರೈಕೆ ಸ್ಥಗಿತಗೊಳ್ಳಬಹುದು ಎಂಬ ತಪ್ಪು ಗ್ರಹಿಕೆಯಿಂದ ಜನರು ಪೆಟ್ರೋಲ್ ಸಂಗ್ರಹಕ್ಕೆ ಮುಂದಾಗಿದ್ದಾರೆ.

ಭಟ್ಕಳ ಪಟ್ಟಣದ ಪ್ರಮುಖ ಪೆಟ್ರೋಲ್ ಪಂಪ್‌ಗಳಲ್ಲಿ ವಾಹನ ಸವಾರರು ಸಾಲುಗಟ್ಟಿ ನಿಂತಿದ್ದು, ಕೆಲವೇ ಗಂಟೆಗಳಲ್ಲಿ ಮೂರಕ್ಕೂ ಹೆಚ್ಚು ಬಂಕ್‌ಗಳಲ್ಲಿ ಪೆಟ್ರೋಲ್ ಸಂಪೂರ್ಣ ಖಾಲಿಯಾಗಿದೆ. ಕೇವಲ ವಾಹನಗಳಿಗೆ ಮಾತ್ರವಲ್ಲದೆ, ಪ್ಲಾಸ್ಟಿಕ್ ಕ್ಯಾನ್‌ಗಳಲ್ಲಿಯೂ ಲೀಟರ್‌ಗಟ್ಟಲೆ ಪೆಟ್ರೋಲ್ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯಗಳು ಕಂಡುಬಂದಿವೆ.

ಇದನ್ನೂ ಓದಿ: ಎಲ್ಲೇ ಅಡಗಿದ್ದರೂ ಬಿಡೋದಿಲ್ಲ; ಖಮೇನಿಯ ಉತ್ತರಾಧಿಕಾರಿಯನ್ನು ಕೊಲ್ಲುತ್ತೇವೆಂದ ಇಸ್ರೇಲ್

ಇಲ್ಲಿದೆ ನೋಡಿ ವಿಡಿಯೋ:

ಭಟ್ಕಳದಲ್ಲಿ ಪೆಟ್ರೋಲ್ ಸಿಗದ ಕಾರಣ ಜನರು ಅನಿವಾರ್ಯವಾಗಿ ನೆರೆಯ ಹೊನ್ನಾವರ ಮತ್ತು ಉಡುಪಿ ಜಿಲ್ಲೆಯ ಕುಂದಾಪುರ ಭಾಗದ ಬಂಕ್‌ಗಳಿಗೆ ತೆರಳಿ ಪೆಟ್ರೋಲ್ ಸಂಗ್ರಹಿಸುತ್ತಿದ್ದಾರೆ. ತೈಲ ಪೂರೈಕೆಯಲ್ಲಿ ಸದ್ಯಕ್ಕೆ ಯಾವುದೇ ವ್ಯತ್ಯಯವಾಗಿಲ್ಲ ಮತ್ತು ಬೆಲೆ ಏರಿಕೆಯ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ಜನರು ಅನಗತ್ಯವಾಗಿ ಆತಂಕಕ್ಕೊಳಗಾಗಿ ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಅತಿಯಾದ ಸಂಗ್ರಹಣೆಯಿಂದಾಗಿ ಕೃತಕ ಅಭಾವ ಸೃಷ್ಟಿಯಾಗುತ್ತಿದೆ ಎಂದು ಅವರು ಎಚ್ಚರಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:24 pm, Wed, 4 March 26

Follow Us
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ