ಭಟ್ಕಳ: ಗ್ಯಾಸ್ ಏಜೆನ್ಸಿಗೆ ನುಗ್ಗಿ 5 ಲಕ್ಷ ರೂ. ಕಳ್ಳತನ; ದೃಶ್ಯ ಸಿಸಿಟಿಯಲ್ಲಿ ಸೆರೆ
ಭಟ್ಕಳ(Bhatkal) ದ ರಾಷ್ಟ್ರೀಯ ಹೆದ್ದಾರಿ 66ರ ಮಣ್ಕುಳಿ ಪುಷ್ಪಾಂಜಲಿ ಕ್ರಾಸ್ ಸಮೀಪದಲ್ಲಿರುವ ಗ್ಯಾಸ್ ಏಜೆನ್ಸಿಯಲ್ಲಿ ಈ ಘಟನೆ ನಡೆದಿದ್ದು, ಬಾಗಿಲು ಒಡೆದು 5 ಲಕ್ಷ ರೂಪಾಯಿಗೂ ಅಧಿಕ ನಗದನ್ನು ದೋಚಿ ಪರಾರಿ ಆಗಿದ್ದಾರೆ. ಗ್ಯಾಸ್ ಏಜೆನ್ಸಿಯನ್ನು ದೋಚಿದ ಕಳ್ಳರ ಕೈಚಳಕದ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.
ಉತ್ತರ ಕನ್ನಡ, ಜ.03: ಶ್ರೀ ಮೂಕಾಂಬಿಕಾ ಭಾರತ್ ಗ್ಯಾಸ್ ಏಜೆನ್ಸಿ(Bharatgas Agencies)ಗೆ ಮೂವರು ಮುಸುಕುಧಾರಿಗಳು ನುಗ್ಗಿ ಕಳ್ಳತನ ಮಾಡಿದ್ದಾರೆ. ಭಟ್ಕಳ(Bhatkal) ದ ರಾಷ್ಟ್ರೀಯ ಹೆದ್ದಾರಿ 66ರ ಮಣ್ಕುಳಿ ಪುಷ್ಪಾಂಜಲಿ ಕ್ರಾಸ್ ಸಮೀಪದಲ್ಲಿರುವ ಗ್ಯಾಸ್ ಏಜೆನ್ಸಿಯಲ್ಲಿ ಈ ಘಟನೆ ನಡೆದಿದ್ದು, ಬಾಗಿಲು ಒಡೆದು 5 ಲಕ್ಷ ರೂಪಾಯಿಗೂ ಅಧಿಕ ನಗದನ್ನು ದೋಚಿ ಪರಾರಿ ಆಗಿದ್ದಾರೆ. ಗ್ಯಾಸ್ ಏಜೆನ್ಸಿಯನ್ನು ದೋಚಿದ ಕಳ್ಳರ ಕೈಚಳಕದ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ಕಳೆದ ತಿಂಗಳು ಇದೇ ಭಾಗದಲ್ಲಿ ಗ್ಯಾರೇಜ್ ಒಂದರಲ್ಲಿ ಕಳ್ಳತನವಾಗಿತ್ತು. ಇದೀಗ ಮತ್ತೊಂದು ಘಟನೆ ನಡೆದಿದ್ದು, ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಎಂದಿನಂತೆ ಏಜೆನ್ಸಿ ಮಾಲೀಕರು ತಮ್ಮ ದಿನನಿತ್ಯದ ವ್ಯವಹಾರದ ಹಣವನ್ನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದರು. ಆದರೆ, ನಿನ್ನೆ ಕೆಲಸದ ಒತ್ತಡದಿಂದ ಹಣವನ್ನು ತಮ್ಮ ಗ್ಯಾಸ್ ಏಜೆನ್ಸಿ ಅಂಗಡಿಯಲ್ಲೇ ಇಟ್ಟು ಬಾಗಿಲು ಹಾಕಿ ತೆರಳಿದ್ದರು. ಇಂದು ನಸುಕಿನ ಜಾವ ಮೂವರು ಕಳ್ಳರು ಮುಸುಕು ಹಾಗೂ ಕೈಗೆ ಗ್ಲೌಸ್ ಧರಿಸಿ ಗ್ಯಾಸ್ ಏಜೆನ್ಸಿಯ ಬೀಗ ಮುರಿದು ಒಳ ನುಗ್ಗಿದ್ದರು. ಓರ್ವ ಹೊರಗಡೆ ನಿಂತು ಕಾಯುತ್ತಿದ್ದರೆ, ಇನ್ನಿಬ್ಬರು ಏಜೆನ್ಸಿ ಒಳಗೆ ನುಗ್ಗಿದ್ದರು.
ಇದನ್ನೂ ಓದಿ:ಬೈಕ್ ವ್ಹೀಲಿಂಗ್ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್; ವಿಚಾರಣೆ ವೇಳೆ ಕಳ್ಳತನ, ಗಾಂಜಾ ಕೇಸ್ ಪತ್ತೆ
ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಭೇಟಿ
ಗ್ಲಾಸ್ ಒಡೆದು ಚೇಂಬರ‌್‌ನಲ್ಲಿದ್ದ ಸುಮಾರು 5 ಲಕ್ಷಕ್ಕೂ ನಗದು ದೋಚಿ ಪರಾರಿಯಾಗಿದ್ದು, ಮುಂಜಾನೆ ಗ್ಯಾಸ್ ಏಜೆನ್ಸಿಗೆ ಬಂದ ಮಾಲೀಕರಿಗೆ ಕಳ್ಳತನವಾಗಿರುವುದು ತಿಳಿದುಬಂದಿದೆ. ಕೂಡಲೇ ಭಟ್ಕಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದು, ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಭೇಟಿ ನೀಡಿದ್ದಾರೆ. ಈ ಕುರಿತು ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ