AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Biporjoy Cyclone: ಜೋರಾದ ಚಂಡಮಾರುತ ಅಬ್ಬರ: ಕಾರವಾರ ಕಡಲತೀರದಲ್ಲಿ ತೀವ್ರವಾದ ಕಡಲ್ಕೊರೆತ

ಅರಬ್ಬೀ ಸಮುದ್ರದಲ್ಲಿ ಬಿಪೋರ್‌ಜಾಯ್ ಚಂಡಮಾರುತ ಅಬ್ಬರ ಜೋರಾದ ಹಿನ್ನೆಲೆ ಕಾರವಾರದ ರವೀಂದ್ರನಾಥ ಟ್ಯಾಗೋರ್ ಸಮುದ್ರದಲ್ಲಿ ಕಡಲ್ಕೊರೆತ ಉಂಟಾಗಿದೆ.

Biporjoy Cyclone: ಜೋರಾದ ಚಂಡಮಾರುತ ಅಬ್ಬರ: ಕಾರವಾರ ಕಡಲತೀರದಲ್ಲಿ ತೀವ್ರವಾದ ಕಡಲ್ಕೊರೆತ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 12, 2023 | 9:51 AM

Share

ಕಾರವಾರ: ಅರಬ್ಬೀ ಸಮುದ್ರದಲ್ಲಿ ಬಿಪೋರ್‌ಜಾಯ್ ಚಂಡಮಾರುತ (Biporjoy Cyclone) ಅಬ್ಬರ ಜೋರಾದ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯ (Uttar Kannada) ರವೀಂದ್ರನಾಥ ಟ್ಯಾಗೋರ್ ಬೀಚ್​​  (Rabindranath Tagore Beach) ಕಡಲ್ಕೊರೆತ (Sea Erosion) ಉಂಟಾಗಿದೆ. ಗಾಳಿಯ ರಭಸಕ್ಕೆ 3 ರಿಂದ 4 ಮೀಟರ್ ಎತ್ತರದಷ್ಟು ಅಲೆಗಳು ಏಳುತ್ತಿದ್ದು, ಕಡಲತೀರಕ್ಕೆ ಅಪ್ಪಳಿಸುತ್ತಿವೆ. ಅಲೆಗಳ ಹೊಡೆತಕ್ಕೆ ತೀರಪ್ರದೇಶದ ಮರಳು ಕೊಚ್ಚಿ ಹೋಗುತ್ತಿದೆ. ಚಂಡಮಾರುತದಿಂದ ಅರಬ್ಬೀ ಸಮುದ್ರ ಪ್ರಕ್ಷುಬ್ಧಗೊಂಡಿದೆ. ಇನ್ನು ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಇನ್ನು ಚಂಡಮಾರುತ ಪರಿಣಾಮ ಕರಾವಳಿಯಲ್ಲಿ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಕಡಲಕೊರೆತ ಹಿನ್ನಲೆ ಮೀನುಗಾರರು ದೋಣಿಗಳನ್ನ ಎತ್ತರದ ಪ್ರದೇಶಕ್ಕೆ ಸ್ಥಳಾಂತರಿಸಿದ್ದಾರೆ. ಅಲೆಗಳ ಹೊಡೆತಕ್ಕೆ ಬೋಟ್‌ಗಳು ಸಿಲುಕದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೇ ಜಿಲ್ಲಾಡಳಿತ ಕಡಲತೀರದ ಸಮುದ್ರಕ್ಕಿಳಿಯದಂತೆ ಪ್ರವಾಸಿಗರಿಗೆ ಸೂಚಿಸಿದೆ.

ಇದನ್ನೂ ಓದಿ: Karnataka News Highlights: ಬಿಪರ್​​ಜಾಯ್​​ ಚಂಡಮಾರುತ ಅಬ್ಬರ, ಧರೆಗುರುಳಿದ ತೆಂಗಿನಮರ

ಚಂಡಮಾರುತದ ತೀವ್ರತೆ ತುಸು ಕಂಡು ಬರಲಿದೆ. ಕೆಲವೊಮ್ಮೆ ಗಾಳಿಯ ವೇಳೆಗೆ ಗಾಳಿಯ ವೇಗ 55 ಕಿಲೋ ಮೀಟರ್‌ ನಷ್ಟಕ್ಕೆ ಬದಲಾಗುವ ಸಾಧ್ಯತೆ ಯೂ ಇದೆ. ಆದ್ದರಿಂದ ರಾಜ್ಯದ ಕರಾವಳಿಯ ಮೀನುಗಾರರು ಮೀನುಗಾರಿಕೆಗೆ ಇಳಿಯದಂತೆ ಐಎಂಡಿ ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿತ್ರದುರ್ಗ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಪ್ರದೇಶದ ಉಳಿದ ಜಿಲ್ಲೆಗಳಲ್ಲಿ ಅತಿ ಹಗುರದಿಂದ ಕೆಲವೊಮ್ಮೆ ಲಘು ಮಳೆಯಾಗಲಿದೆ.

ಬಿಪರ್‌ಜಾಯ್ ಚಂಡಮಾರುತವು ತೀವ್ರತೆ ಪಡೆದುಕೊಂಡಿದೆ. ಆದರೆ ಕರ್ನಾಟಕದಲ್ಲಿ ಅದರ ಪ್ರಭಾವ ಅಷ್ಟಾಗಿ ಇರುವುದಿಲ್ಲ, ಬದಲಾಗಿ ಗುಜರಾತ್‌, ಪಾಕಿಸ್ತಾನ ಕರಾವಳಿ ಭಾಗದತ್ತ ಸಾಗಿದೆ. ಗಾಳಿ ತೀವ್ರತೆ ಹೆಚ್ಚಿಸಿಕೊಂಡಿರುವ ಸೈಕ್ಲೋನ್ ಆ ಭಾಗದಲ್ಲಿ ಅಧಿಕ ಹಾನಿ ಉಂಟು ಮಾಡುವ ನಿರೀಕ್ಷೆ ಇದ್ದು, ಹೈ ಅಲರ್ಟ್ ಘೋಷಿಸಲಾಗಿದೆ. ಜೂನ್ 15ರವರೆಗೆ ಈ ಚಂಡಮಾರುತದ ಅಬ್ಬರ ಕಂಡು ಬರಲಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಗಬ್ಬೂರು, ಗೋಕರ್ಣ, ಅಂಕೋಲಾ, ಕುಂದಾಪುರ, ಕೋಟ, ಮಂಕಿ, ಭಾಲ್ಕಿ, ಮಂಗಳೂರು, ಸಿದ್ದಾಪುರ, ಕ್ಯಾಸಲ್ ರಾಕ್, ಕದ್ರಾ, ಪಣಂಬೂರು, ಮಂಗಳೂರು ವಿಮಾನ ನಿಲ್ದಾಣ, ಬೆಳ್ತಂಗಡಿ, ಯಲ್ಲಾಪುರ, ಕುಮಟಾ, ಶಿರಾಲಿ, ಉಪ್ಪಿನಂಗಡಿ, ಭಾಗಮಂಡಲ, ಶಿರಹಟ್ಟಿ, ಗಂಗಾವತಿ, ಚಿಂಚೋಳಿ, ಕುಕನೂರು, ಕಾರವಾರ, ಶಿಗ್ಗಾಂವ್, ಮುಂಡರಗಿ, ಧಾರವಾಡ, ಬರಗೂರು, ಕೊಟ್ಟಿಗೆಹಾರ, ಹುಂಚದಕಟ್ಟೆ, ವಿರಾಜಪೇಟೆಯಲ್ಲಿ ಮಳೆಯಾಗಿದೆ.

ಕಲಬುರಗಿಯಲ್ಲಿ 39.1 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸಲಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:43 am, Mon, 12 June 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ