ಬಾಬ್ರಿ ಮಸೀದಿಯಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಿರ್ನಾಮವಾಗಲಿದೆ: ಸಂಸದ ಅನಂತಕುಮಾರ್ ಹೆಗಡೆ

ಬಾಬ್ರಿ ಮಸೀದಿ ನಿರ್ನಾಮ ಮಾಡಿದಂತೆ ಭಟ್ಕಳದಲ್ಲಿ ಮಾಡುವುದು ಖಂಡಿತ. ಇದು ಹಿಂದೂ ಸಮಾಜದ ತೀರ್ಮಾನವೇ ವಿನಃ ಅನಂತಕುಮಾರ್ ಹೆಗಡೆ ತೀರ್ಮಾನ ಅಲ್ಲ ಎಂದು ಸಂಸದ ಅನಂತಕುಮಾರ್ ಹೆಗಡೆ ಕುಮಟಾದಲ್ಲಿ ಹೇಳಿದ್ದಾರೆ.

ಬಾಬ್ರಿ ಮಸೀದಿಯಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಿರ್ನಾಮವಾಗಲಿದೆ: ಸಂಸದ ಅನಂತಕುಮಾರ್ ಹೆಗಡೆ
ಅನಂತಕುಮಾರ್ ಹೆಗಡೆ
Follow us
TV9 Web
| Updated By: Ganapathi Sharma

Updated on:Jan 13, 2024 | 3:17 PM

ಕುಮಟಾ, ಜನವರಿ 13: ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆಗೆ ಕೆಲವೇ ದಿನ ಬಾಕಿ ಇರುವ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ (Anantkumar Hegde) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕುಮಟಾದಲ್ಲಿ (Kumta) ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ನಿರ್ನಾಮ ಆದಂತೆ ಭಟ್ಕಳದ (Bhatkal) ಚಿನ್ನದ ಪಳ್ಳಿಯೂ ಆಗಲಿದೆ. ಇದನ್ನು ಬೇಕಾದರೆ ಬೆದರಿಕೆ ಎಂದು ಬೇಕಾದರೂ ತಿಳಿಯಿರಿ ಎಂದು ಹೇಳಿದರು.

ಬಾಬ್ರಿ ಮಸೀದಿ ನಿರ್ನಾಮ ಮಾಡಿದಂತೆ ಭಟ್ಕಳದಲ್ಲಿ ಮಾಡುವುದು ಖಂಡಿತ. ಇದು ಹಿಂದೂ ಸಮಾಜದ ತೀರ್ಮಾನವೇ ವಿನಃ ಅನಂತಕುಮಾರ್ ಹೆಗಡೆ ತೀರ್ಮಾನ ಅಲ್ಲ. ಶಿರ್ಸಿಯ ಸಿಪಿ ಬಜಾರ್​​ನಲ್ಲಿಯೂ ಮಸೀದಿ ಇದೆ. ಅದು ಈ ಹಿಂದೆ ವಿಜಯ ವಿಠ್ಠಲ ದೇವಸ್ಥಾನ ಆಗಿತ್ತು. ಶ್ರೀರಂಗಪಟ್ಟಣದಲ್ಲಿರುವ ದೊಡ್ಡ ಮಸೀದಿ ಮಾರುತಿ ದೇವಸ್ಥಾನವಾಗಿತ್ತು. ಇವತ್ತೂ ಅಲ್ಲಿಗೆ ಹೋದರೆ ಮಾರುತಿ ದೇವಸ್ತಾನ ಕಾಣುತ್ತದೆ ಎಂದು ಅವರು ಹೇಳಿದರು.

ದೇಶದ ಹಳ್ಳಿಯ ಮೂಲೆ ಮೂಲೆಗಳಲ್ಲಿ ಅಪಮಾನಗೊಂಡಿರುವ ಅನೇಕ ಸಂಕೇತಗಳಿವೆ. ಅದನ್ನು ಕಿತ್ತುಹಾಕೋ ತನಕ ಈ ಹಿಂದೂ ಸಮಾಜ ಸುಮ್ಮನಿರಲ್ಲ. ಈಗ ರಣಭೈರವ ಎದ್ದಾಗಿದೆ, ಮತ್ತೆ ಕೂರುವ ಪ್ರಶ್ನೆಯೇ ಇಲ್ಲ. ಸಾವಿರ ವರ್ಷಗಳ ಸೇಡನ್ನು ತೀರಿಸಿಕೊಳ್ಳದೇ ಇದ್ರೆ ಇದು ಹಿಂದೂ ರಕ್ತವೇ ಅಲ್ಲ. ಹಿಂದೂ ಧರ್ಮ ಋಣ ಇಟ್ಟಿಕೊಳ್ಳುವ ಧರ್ಮ ಅಲ್ಲವೇ ಅಲ್ಲ. ಜಾತಿಯ ಹೆಸರಿನಲ್ಲಿ ಹಿಂದೂ ಸಮಾಜ ಓಡೆದರು. ಇಂದಿಗೂ ಮೂರ್ಖ ಸಿದ್ದರಾಮಯ್ಯನಂತವರು ಹಿಂದೂ ಸಮಾಜ ಒಡೆಯುತ್ತಿದ್ದಾರೆ ಎಂದು ಅವರು ಟೀಕಿಸಿದರು.

ಹಿಂದೂ ಸಮಾಜ ಒಡೆದು ಒಡೆದು ಹಾಕಿದರೂ ಈಗ ನಾವು ಹಿಂದೆ ಸರಿಯುವ ಪ್ರಶ್ನೆಯೆ ಇಲ್ಲ. ಶತಮಾನಗಳು ಕಳೆದ ಬಳಿಕವೂ ಹಿಂದೂ ಸಮಾಜ ಒಡೆಯುವ ಕೆಲಸ ಆಗಬಾರದು. ನಾವೇ ಒಡೆಯುವ ಕೆಲಸ ಮಾಡಿದರೂ ಅದು ಆಹಬಾರದು, ಆ ರೀತಿ ಮಾಡಬೇಕು. ಕಾಂಗ್ರೆಸ್ ನಮ್ಮ ವಿರೋಧಿ ಅಲ್ಲವೇ ಅಲ್ಲ. ಹಿಂದೂ ವಿರೋಧಿಗಳು, ಸನಾತನ ಧರ್ಮ ವಿರೋಧಿಗಳು ನಮ್ಮ ವಿರೋಧಿಗಳು. ಕಾಂಗ್ರೆಸ್ ನಮ್ಮ ವಿರೋಧಿ ಅಲ್ಲ, ಸಿಎಂ ಸಿದ್ದರಾಮಯ್ಯ ನಮ್ಮ ವಿರೋಧಿ. ಅಲ್ಪಸಂಖ್ಯಾತರ ಓಟಿಗೆ ಹರಾಜಾಗಿ ಹೊದವರು ನಮ್ಮ ವಿರೋಧಿಗಳು. ಅಹಿಂದೂ ಮಾನಸಿಕತೆ ನಮ್ಮ ವಿರೋಧ. ಗತಿಗೆಟ್ಟ ಅಹಿಂದೂ ಮಾನಸಿಕತೆ ನಮ್ಮ ವಿರೋಧ ಎಂದು ಹೆಗಡೆ ಆಕ್ರೋಶ ವ್ಯಕ್ತಪಡಿಸಿದರು.

ಮೊದಲು ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆಯ ಆಹ್ವಾನ ಬಂದಿಲ್ಲ ಎಂದರು. ಆಹ್ವಾನ ಬಂದ ಮೇಲೆ ನಾನು ಹೋಗುವುದಿಲ್ಲ ಎಂದರು ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದರು.

ಇದನ್ನೂ ಓದಿ: ಅಮಿತ್ ಶಾ ಭೇಟಿಯಾದ ವಿ ಸೋಮಣ್ಣ: ಏನೇನು ನಡೆಯಿತು ಚರ್ಚೆ?

ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಹೆಗಡೆ ಆಕ್ರೋಶ

ಅಯೋಧ್ಯೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಅನಂತಕುಮಾರ್ ಹೆಗಡೆ, ‘ನೀನು ಬರ್ಲಿ, ಇಲ್ಲ ಬಿಡಲಿ, ರಾಮ ಜನ್ಮಭೂಮಿ ಏನೂ ನಿಲ್ಲೋದಿಲ್ಲ ಮಗನೇ’ ಎಂದು ನಿಂದಿಸಿದರು. ನಾನು ಅಯೋಧ್ಯೆಗೆ ಹೋಗುತ್ತೇನೆ, ಆದರೆ 22 ಕ್ಕೆ ಹೋಗಲ್ಲ ಆಮೇಲೆ ಹೊಗುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಮೊದಲು ಹೋಗಲ್ಲ ಅಂದಿದ್ದವರು ಈಗ ಹೋಗುತ್ತೇನೆ ಎನ್ನುತ್ತಿದ್ದಾರೆ. ಇದು ಹಿಂದೂ ಸಮಾಜದ ತಾಕತ್ತು, ದಮ್ ಎಂದು ಹೆಗಡೆ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:08 pm, Sat, 13 January 24

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ