AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂವಿಧಾನ ತಿದ್ದುಪಡಿ ಮಾಡಲು ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬೇಕು: ಅನಂತ್ ಕುಮಾರ್ ಹೆಗಡೆ

ಸಂವಿಧಾನ ತಿದ್ದುಪಡಿ ಬಗ್ಗೆ ಮತ್ತೆ ಹೇಳಿಕೆ ನೀಡಿದ ಉತ್ತರ ಕನ್ನಡ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ, ಲೋಕಸಭೆಯಲ್ಲಿ ಬಹುಮತ ಇದೆ, ರಾಜ್ಯಸಭೆಯಲ್ಲಿ ಇಲ್ಲ. ಸಂವಿಧಾನಕ್ಕೆ ತಿದ್ದುಪಡಿ ಮಾಡುವುದಾದರೆ ಬಹುಮತ ಅಗತ್ಯವಿದೆ. ಹೀಗಾಗಿ ಈ ಸಲ ಮೋದಿಯವರು 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಹೇಳಿದ್ದಾರೆ.

ಸಂವಿಧಾನ ತಿದ್ದುಪಡಿ ಮಾಡಲು ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬೇಕು: ಅನಂತ್ ಕುಮಾರ್ ಹೆಗಡೆ
ಸಂವಿಧಾನ ತಿದ್ದುಪಡಿ ಮಾಡಲು ಮೋದಿ 400 ಸ್ಥಾನಗಳನ್ನು ಗೆಲ್ಲಬೇಕು ಎಂದ ಅನಂತ್ ಕುಮಾರ್ ಹೆಗಡೆ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Mar 14, 2024 | 10:21 AM

Share

ಕಾರವಾರ, ಮಾ.9: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಹೇಳಿದ್ದಾರೆ. ಯಾಕೆಂದರೆ, ಕಾಂಗ್ರೆಸ್​ನವರು ಅನಗತ್ಯವಾಗಿ ಹೇರಿದ ವಿಚಾರಗಳನ್ನು ಸಂವಿಧಾನದಿಂದ ತೆಗೆದು ಹಾಕಲು ಬಹುಮತದ ಅಗತ್ಯವಿದೆ. ಲೋಕಸಭೆಯಲ್ಲಿ ಬಹುಮತ ಇದೆ. ಆದರೆ, ರಾಜ್ಯಸಭೆಯಲ್ಲಿ 2/3 ರಷ್ಟು ಇಲ್ಲ.  ಹೀಗಾಗಿ ಈ ಸಲ ಮೋದಿಯವರು 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ (Anantkumar Hegde) ಹೇಳಿದರು. ಸಿದ್ದಾಪುರ ತಾಲೂಕಿನ ಹಲಗೇರಿ ಗ್ರಾಮದಲ್ಲಿ ಮಾತನಾಡಿದ ಅವರು, ಸಂವಿಧಾನಕ್ಕೆ ತಿದ್ದುಪಡಿ ಮಾಡುವುದಾದರೆ ಬಹುಮತ ಅಗತ್ಯವಿದೆ ಎಂದರು.

ಕಾಂಗ್ರೆಸ್‌ನವರು ಸಂವಿಧಾನದ ಮೂಲರೂಪವನ್ನೇ ತಿರುಚಿದ್ದಾರೆ. ಸಂವಿಧಾನದಲ್ಲಿ ಬೇಡದೇ ಇರುವುದನ್ನೆಲ್ಲ ಸೇರಿಸಿದ್ದಾರೆ. ಇಡೀ ಹಿಂದೂ ಸಮಾಜವನ್ನು ದಮನಿಸುವ ರೀತಿ ಕಾನೂನು ತಂದಿದ್ದಾರೆ. ಇದೆಲ್ಲವೂ ಬದಲಾಗಬೇಕಿದ್ದರೆ ಬಹುಮತ ಇಲ್ಲದಿದ್ದರೆ ಆಗುವುದಿಲ್ಲ. ರಾಜ್ಯಸಭೆಯಲ್ಲೂ ನಮಗೆ ಬಹುಮತ ಬೇಕಾಗುತ್ತದೆ. ಎರಡೂ ಕಡೆ 2/3 ರಷ್ಟು ಬಹುಮತ ಬೇಕಾಗುತ್ತದೆ ಎಂದರು.

ಆಮೇಲೆ ನೋಡಿ ಮಾರಿಜಾತ್ರೆ

ಕಾಂಗ್ರೆಸ್‌ನವರು ಹೆಚ್ಚು ಇದ್ದರೆ ಏನೇ ತಿದ್ದುಪಡಿ ತಂದರೂ ಪಾಸ್ ಆಗಲ್ಲ. ಸಿಎಎ ಜಾರಿಗೆ ರಾಜ್ಯಗಳಿಂದ ಒಪ್ಪಿಗೆ ಬಂದಿಲ್ಲ. ಸಿಎಎ ತರದಿದ್ದರೆ ದೇಶದಲ್ಲಿ ಕಾನೂನು ಸುವ್ಯವಸ್ಥೆ ನಮ್ಮ ಕೈಯಲ್ಲಿ ಇರಲ್ಲ. ಇದು ದೇಶದ್ರೋಹಿಗಳ ಆಡಂಬರ ಆಗುತ್ತದೆ. ಎಲ್ಲೆಡೆ ಬಹುಮತ ಬರಲಿ, ಆಮೇಲೆ ನೋಡಿ ಮಾರಿಜಾತ್ರೆ ಹೇಗಿರುತ್ತೆ ಅಂತಾ. ಜಾತ್ರೆಗೆ ಒಂದು ಕಳೆ ಬರೋದು ಇದಾದ ನಂತರವೇ ಎಂದರು.

ಇದನ್ನೂ ಓದಿ: ನನ್ನ ಕ್ಷೇತ್ರದಲ್ಲಿ ಕಾಂಗ್ರೆಸ್​ ನಾಯಕರು ಕರಿಮಣಿ ಮಾಲೀಕ ನಾನಲ್ಲ ಅಂತಿದ್ದಾರೆ: ಅನಂತ್ ಕುಮಾರ್ ಹೆಗಡೆ ವ್ಯಂಗ್ಯ

ನಾನೇ ದೇವರು ಅನ್ನೋ ಭಾವನೆ ಬರುತ್ತದೆ, ಪತನ ಶುರುವಾಗೋದೇ ಅಲ್ಲಿಂದ. ದೇಶ ಸರಿ ಆಗಬೇಕೆಂದರೆ ನಮ್ಮವರಿಂದಲೇ ಹೊರತು ಬೇರೆ ಅವರಿಂದ ಆಗಲ್ಲ. ಕಾಂಗ್ರೆಸ್‌ನ ದೇಶದ್ರೋಹಿ ಸರ್ಕಾರ ಹೋಗಬೇಕು. ಜಾತ್ಯತೀತರು ಇದನ್ನ ನಿರ್ಧರಿಸಿಲ್ಲ, ತೀರ್ಮಾನ ಮಾಡಿದವರು ಹಿಂದೂಗಳೇ ಎಂದರು.

ಹಿಂದಿನ ಬಾರಿ ಶೇಕಡಾ 68 ರಷ್ಟು ವೋಟು ನಮಗೆ ಬಂದಿತ್ತು. ಒಟ್ಟೂ ಹಿಂದೂಗಳ ಶೇ.85 ರಷ್ಟು ವೋಟು ಈ ಕ್ಷೇತ್ರದಲ್ಲಿ ಬಂದಿತ್ತು. ಒಂದು 15, 10 ಪರ್ಸೆಂಟ್ ಸೋಡಾಬಾಟ್ಲಿ ಇರುತ್ತವೆ, ಅದಕ್ಕೆ ನಾವು ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಯಾರೂ ಇಲ್ಲ ಅಂದರೆ ಕುಸ್ತಿ ಯಾರ್ ಹತ್ರ ಆಡೋದು? ನಮ್ಮ ದೇಶ ಸರಿ ಆಗಬೇಕು ಅಂದರೆ ನಮ್ಮವರಿಂದಲೇ ಹೊರತು ಬೇರೆ ಅವರಿಂದ ಸಾಧ್ಯವಿಲ್ಲ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:47 pm, Sat, 9 March 24

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್