Paresh Mesta Case: ಪರೇಶ್​ ಮೇಸ್ತಾ ಪ್ರಕರಣ; ಕಾಗೇರಿ, ಬಿಜೆಪಿ ಕಾರ್ಯಕರ್ತರು ಸೇರಿ 122 ಜನರ ಮೇಲೆ ಹಾಕಲಾಗಿದ್ದ ಕೇಸ್ ವಾಪಸ್

ಶಿರಸಿಯಲ್ಲಿ ನಡೆದಿದ್ದ ಗಲಭೆಯಲ್ಲಿ 122 ಜನರ ಮೇಲಿದ್ದ ಮೂರು ಪ್ರಕರಣವನ್ನು ಹಿಂಪಡೆದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.

Paresh Mesta Case: ಪರೇಶ್​ ಮೇಸ್ತಾ ಪ್ರಕರಣ; ಕಾಗೇರಿ, ಬಿಜೆಪಿ ಕಾರ್ಯಕರ್ತರು ಸೇರಿ 122 ಜನರ ಮೇಲೆ ಹಾಕಲಾಗಿದ್ದ ಕೇಸ್ ವಾಪಸ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪರೇಶ್ ಮೇಸ್ತಾ
Follow us
ಆಯೇಷಾ ಬಾನು
| Updated By: Ganapathi Sharma

Updated on:Feb 21, 2023 | 8:00 AM

ಕಾರವಾರ: ಕೋಮು ಸಂಘರ್ಷಕ್ಕೆ ಕಾರಣವಾಗಿದ್ದ ಪರೇಶ್ ಮೇಸ್ತಾ ಕೊಲೆ (Paresh Mesta) ಗಲಭೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. 2017ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮೀನುಗಾರ ಕುಟುಂಬದ ಪರೇಶ್ ಮೇಸ್ತಾ ಅನುಮಾನಾಸ್ಪದವಾಗಿ ಸಾವು ಕಂಡಿದ್ದ. ಈ ಸಾವಿನ ಬಳಿಕ ಇಡೀ ಜಿಲ್ಲೆಯಲ್ಲಿ ಈ ಹತ್ಯೆ ಕೋಮು ಸಂಘರ್ಷಕ್ಕೆ ಕಾರಣವಾಗಿತ್ತು. ಇದೊಂದು ಕೊಲೆ ಎಂದು ಬಿಜೆಪಿ ಸೇರಿದಂತೆ ಬಲಪಂಥೀಯ ಸಂಘಟನೆಗಳು ಆರೋಪಿಸಿದ್ದವು. ಹತ್ಯೆ ಖಂಡಿಸಿ ಆಗಿನ ಸಿದ್ದರಾಮಯ್ಯ ಸರ್ಕಾರದ(Siddaramaiah Government) ವಿರುದ್ಧ ಬೃಹತ್ ಪ್ರತಿಭಟನೆಗಳನ್ನು ನಡೆಸಲಾಗಿತ್ತು. ಸದ್ಯ ಈಗ ಶಿರಸಿಯಲ್ಲಿ ನಡೆದಿದ್ದ ಗಲಭೆಯಲ್ಲಿ 122 ಜನರ ಮೇಲಿದ್ದ ಮೂರು ಪ್ರಕರಣವನ್ನು ಹಿಂಪಡೆದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಆದೇಶ ಹೊರಡಿಸಿದ್ದಾರೆ.

ಈ ಹಿಂದೆ 26 ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿತ್ತು. ಈಗ ಮತ್ತೆ 112 ಜನರ ಮೇಲೆ ಉಳಿದಿದ್ದ ಮೂರು ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಅಂದಿನ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ಕಾರ್ಯಕರ್ತರು, ಬಜರಂಗದಳ ಕಾರ್ಯಕರ್ತರು ಸೇರಿದಂತೆ ಹಲವರ ಮೇಲೆ ಪ್ರಕರಣ ದಾಖಲಾಗಿತ್ತು. ಈಗ 112 ಜನರ ಪ್ರಕರಣ ಹಿಂಪಡೆದು ಆದೇಶ ಹೊರಡಿಸಲಾಗಿದ್ದು ಸರ್ಕಾರಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಪರೇಶ್ ಮೇಸ್ತಾ ಪ್ರಕರಣ ಇಟ್ಟುಕೊಂಡು ರಾಜ್ಯದಲ್ಲಿ ಬೆಂಕಿ ಹಾಕಿದ್ರು: ಬಿಜೆಪಿ ವಿರುದ್ಧ ಬೇಳೂರು ಗೋಪಾಲಕೃಷ್ಣ ಕೆಂಡ

ಪರೇಶ್ ಮೇಸ್ತಾ ಯಾರು?

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಮಲಾಕರ ಮೇಸ್ತ ಎಂಬ ಮೀನುಗಾರರ ಕುಟುಂಬದಲ್ಲಿ ಜನಿಸಿದ ಪರೇಶ್ ಮೇಸ್ತಾ ಎಂಬ 21 ವರ್ಷದ ಯುವಕ ಏಕಾಏಕಿ ನಾಪತ್ತೆಯಾಗಿದ್ದ. 2017ರ ಡಿಸೆಂಬರ್​ನಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ಹೊನ್ನಾವರದ ಗುಡ್ ಲಕ್ ವೃತ್ತದಲ್ಲಿ ಕೋಮ ಗಲಭೆ ನಡೆದಿತ್ತು. ಈ ವೇಳೆ ಪಟ್ಟಣದ ತುಳುಸಿ ನಗರದ ಪರೇಶ್ ಮೇಸ್ತಾ ಎನ್ನುವ ಮೀನುಗಾರ ಯುವಕ ನಾಪತ್ತೆಯಾಗಿದ್ದ. ಎರಡು ದಿನಗಳ ನಂತರ ಹೊನ್ನಾವರದ ಶೆಟ್ಟಿಕೆರೆಯಲ್ಲಿ ಪರೇಶ್ ಮೇಸ್ತಾನ ಶವ ಪತ್ತೆಯಾಗಿತ್ತು.

2017ರ ಡಿಸೆಂಬರ್ 6ಕ್ಕೆ ಪರೇಶ್ ಏಕಾಏಕಿ ಕಾಣೆಯಾಗಿದ್ದ. ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉತ್ತರಕನ್ನಡ ಜಿಲ್ಲೆಯ ಪ್ರವಾಸ ಮುಗಿಸಿ ತೆರಳಿದ ಬಳಿಕ, ಅಂದರೆ ಡಿ.8ರಂದು ಪರೇಶ್ ಮೇಸ್ತ ಶವವಾಗಿ ಪತ್ತೆಯಾಗಿದ್ದ. ಆತನ ದೇಹ ಹೊನ್ನಾವರ ಪಟ್ಟಣದ ಬಸ್ ನಿಲ್ದಾಣದ ಮುಂದಿರುವ ಶೆಟ್ಟಿಕೆರೆಯಲ್ಲಿ ಸಿಕ್ಕಿತ್ತು. ಇದಾದ ಬಳಿಕ ಪರೇಶ್ ಹತ್ಯೆಯ ಪ್ರಕರಣ ಇಡೀ ರಾಜ್ಯದಲ್ಲಿ ಭಾರೀ ಸದ್ದು ಮಾಡಿತ್ತು. ಇಡೀ ಜಿಲ್ಲೆಯಲ್ಲಿ ಕೋಮು ಗಲಭೆಯ ಬೆಂಕಿ ಹತ್ತಿಕೊಂಡಿತ್ತು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:46 am, Tue, 21 February 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ