ಸೊಳ್ಳೆನಾಶಕ ಲಿಕ್ವಿಡ್ ಕುಡಿದು ಎರಡು ವರ್ಷದ ಮಗು ಸಾವು

ಮನೆಯ ನೆಲದ ಮೇಲೆ ಇಟ್ಟಿದ್ದ ಸೊಳ್ಳೆನಾಶಕ ಲಿಕ್ವಿಡ್ ಕುಡಿದ ಮಗು ಅಸ್ವಸ್ಥವಾಯಿತು. ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಜೀವ ಉಳಿಯಲಿಲ್ಲ.

ಸೊಳ್ಳೆನಾಶಕ ಲಿಕ್ವಿಡ್ ಕುಡಿದು ಎರಡು ವರ್ಷದ ಮಗು ಸಾವು
ಮೃತ ಮಗು
Edited By:

Updated on: Aug 19, 2022 | 2:13 PM

ಕಾರವಾರ: ಸೊಳ್ಳೆಗಳನ್ನು ದೂರ ಇಡಲೆಂದು ಬಳಸುವ ‘ಗುಡ್​ನೈಟ್’ ದ್ರವ ಕುಡಿದು ಎರಡು ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ಹೊನ್ನಾವರ ತಾಲ್ಲೂಕು ಕಾವೂರಿನಲ್ಲಿ ಶುಕ್ರವಾರ ನಡೆದಿದೆ. ಆರವ್ ಮಹೇಶ್ ಮೃತ ಮಗು. ಮನೆಯ ನೆಲದ ಮೇಲೆ ಇಟ್ಟಿದ್ದ ಲಿಕ್ವಿಡ್ ಕುಡಿದ ಮಗು ಅಸ್ವಸ್ಥವಾಯಿತು. ತಕ್ಷಣ ಮಣಿಪಾಲ ಆಸ್ಪತ್ರೆಗೆ ಕರೆದೊಯ್ದರೂ ಜೀವ ಉಳಿಯಲಿಲ್ಲ ಎಂದು ಪೋಷಕರು ತಿಳಿಸಿದ್ದಾರೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೋಲಾರ ಬಿಜೆಪಿ ಜಿಲ್ಲಾಧ್ಯಕ್ಷ ಕಾರು ಅಪಘಾತ: ಓರ್ವ ಸ್ಥಳದಲ್ಲೇ ಸಾವು

ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ತೆರಳುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿಯಾದ ಹಿನ್ನೆಲೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರದಿಂದ ಚಿಂತಾಮಣಿ ಮುಖ್ಯ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಪಾತಪಲ್ಲಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಪಾತಪಲ್ಲಿ ಗ್ರಾಮದ 50 ವರ್ಷದ ರಾಜಣ್ಣ ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಕೋಲಾರ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷರಾಗಿರುವ ಡಾಕ್ಟರ್ ವೇಣುಗೋಪಾಲ್ ಅವರು ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಧಿಕೃತ ಅಭ್ಯರ್ಥಿ ಸಹ ಆಗಿದ್ರು. ಅಪಘಾತಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರು ಕಾರು ಅತಿವೇಗವಾಗಿ ಚಲಿಸುತ್ತಿದದ್ದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದು, ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಮೃತ ದೇಹವನ್ನು ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ. ಘಟನೆ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:13 pm, Fri, 19 August 22