ಕಾರವಾರ ಬಳಿ ಮಧ್ಯ ರಾತ್ರಿ ಏಕಾಏಕಿ ಕುಸಿದ ಸೇತುವೆ, ನದಿಗೆ ಬಿದ್ದ ಲಾರಿ ಚಾಲಕನ ಜೀವ ಉಳಿಸಿದ ಖಾಕಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗ್ ಬಳಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ 66ರ ಬಳಿ ನಿರ್ಮಿಸಿದ್ದ ಸೇತುವೆ ಕುಸಿದಿದೆ. ಸೇತುವೆ ಮೇಲೆ ತಮಿಳುನಾಡು ಮೂಲದ ಲಾರಿ ಚಲಿಸುವಾಗ ಘಟನೆ ಸಂಭವಿಸಿದ್ದು ಲಾರಿ ಸಮೇತ ಚಾಲಕ ಕಾಳಿ ನದಿಗೆ ಬಿದ್ದಿದ್ದಾನೆ. ವಿಚಾರ ತಿಳಿದ ತಕ್ಷಣವೇ ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ಚಾಲಕನನ್ನು ರಕ್ಷಿಸಿದ್ದಾರೆ.

ಕಾರವಾರ ಬಳಿ ಮಧ್ಯ ರಾತ್ರಿ ಏಕಾಏಕಿ ಕುಸಿದ ಸೇತುವೆ, ನದಿಗೆ ಬಿದ್ದ ಲಾರಿ ಚಾಲಕನ ಜೀವ ಉಳಿಸಿದ ಖಾಕಿ
ರಾಷ್ಟ್ರೀಯ ಹೆದ್ದಾರಿ 66 ಬಳಿ ಮಧ್ಯ ರಾತ್ರಿ ಏಕಾಏಕಿ ಕುಸಿದ ಸೇತುವೆ
Edited By: ಆಯೇಷಾ ಬಾನು

Updated on: Aug 07, 2024 | 7:08 AM

ಬೆಳಗಾವಿ, ಆಗಸ್ಟ್.07: ಮಧ್ಯ ರಾತ್ರಿ 1 ಗಂಟೆ ಸುಮಾರಿಗೆ ಕಾರವಾರ (Karwar) ನಗರದ ಕೋಡಿಭಾಗ್ ನಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ 41 ವರ್ಷಗಳ ಹಳೆ ಸೇತುವೆ (Bridge) ಒಮ್ಮಿಂದ ಒಮ್ಮೆಲೆ ಕುಸಿದು ಬಿದ್ದ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗ್ ಬಳಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಮಿಸಿದ್ದ ಸೇತುವೆ ಕುಸಿದಿದೆ.

ರಾಷ್ಟ್ರೀಯ ಹೆದ್ದಾರಿ 66ರ ನಿರ್ಮಾಣದ ವೇಳೆ ಒಂದೇ ಒಂದು ಹೊಸ ಸೇತುವೆ ನಿರ್ಮಾಣ ಮಾಡಲಾಗಿತ್ತು. ಇನ್ನೊಂದು ಮಾರ್ಗಕ್ಕೆ ಹಳೆ ಸೇತುವೆಯನ್ನೇ ಬಳಸಲಾಗುತ್ತಿತ್ತು. ಐಆರ್​ಬಿ ಹೊಸ ಸೇತುವೆ ನಿರ್ಮಾಣ ಮಾಡಿರಲಿಲ್ಲ. 41 ವರ್ಷ ಹಳೆಯ ಸೇತುವೆಯನ್ನೇ ಬಳಸಲಾಗಿತ್ತು. ಆದರೆ ಮಧ್ಯ ರಾತ್ರಿ ಏಕಾಏಕಿ ಸೇತುವೆ ಕುಸಿದಿದೆ. ಈ ವೇಳೆ ಸೇತುವೆ ಮೇಲೆ ಲಾರಿ ಚಾಲನೆ ಮಾಡ್ತಿದ್ದ ತಮಿಳುನಾಡು ಮೂಲದ ಲಾರಿ ಚಾಲಕ ಬಾಲ್ ಮುರುಗನ್(37) ಸಮೇತ ತಮಿಳುನಾಡು ಮೂಲದ SSM ಟ್ರಾನ್ಸಪೋರ್ಟ ಕಂಪನಿಯ TN-52 AC -6880 ನೊಂದಣಿಯ ಖಾಲಿ ಟ್ರಕ್ ನದಿಗೆ ಬಿದ್ದಿದೆ. ಕಾಳಿ ನದಿಯಲ್ಲಿ ಬಿದ್ದ ಲಾರಿಯ ಮುಂಭಾಗದ ಗ್ಲಾಸ್ ಒಡೆದು ಕ್ಯಾಬಿನ್ ಮೇಲೆ ನಿಂತು ಚಾಲಕ ಬಾಲ ಮುರುಗನ್ ರಕ್ಷಣೆಗೆ ಕೂಗಿದ್ದರು. ಸದ್ಯ ಬೀಟ್ ಪೊಲೀಸರ ಮುಂಜಾಗೃತೆಯಿಂದ ಲಾರಿ ಚಾಲಕನ ಪ್ರಾಣ ಉಳಿದಿದೆ.

ಇದನ್ನೂ ಓದಿ: ಬೆಳಗಾವಿಯ ಇನ್ಸುಲೆನ್ ಟೇಪ್ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ: ಅಗ್ನಿಶಾಮಕ, ಪೊಲೀಸ್, ಆ್ಯಂಬುಲೆನ್ಸ್ ದೌಡು

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಎಸ್​ಪ ಪಿ ನಾರಾಯಣ ಹಾಗೂ ಪೊಲೀಸರ ತಂಡ ನದಿಗೆ ಇಳಿದು ಚಾಲಕನನ್ನು ರಕ್ಷಿಸಿದ್ದಾರೆ. ಸ್ಥಳೀಯ ಮೀನುಗಾರರು ಹಾಗೂ ಪೊಲೀಸ್ ಸಿಬ್ಬಂದಿ ಸೇರಿ ಬೋಟ್ ಮೂಲಕ ಲಾರಿ ಚಾಲಕನನ್ನ ರಕ್ಷಿಸಿದ್ದಾರೆ. ಗೋವಾದಿಂದ ಹುಬ್ಬಳ್ಳಿ ಕಡೆ ಮಧ್ಯರಾತ್ರಿ ತೆರಳುತಿದ್ದ ತಮಿಳುನಾಡು ಮೂಲದ ಟ್ರಕ್ ಸೇತುವೆ ಮೇಲೆ ತೆರಳುತಿದ್ದಂತೆ ಮೊದಲ ಭಾಗ ಕುಸಿದಿದೆ ನಂತರ ಮೂರು ಕಡೆ ಕುಸಿದಿದೆ. ಸದ್ಯ ಟ್ರಕ್ ಚಾಲಕನ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನದಿಗೆ ನಿರ್ಮಿಸಿರುವ ಇನ್ನೊಂದು ಸೇತುವೆಯಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಸೇತುವೆ ಕುಸಿತದಲ್ಲಿ ಇನ್ನಷ್ಟು ವಾಹನ ಬಿದ್ದಿರುವ ಶಂಕೆ ಹಿನ್ನೆಲೆ ನದಿಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಸ್ಥಳದಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

ಇನ್ನು ಯಮನ್ ಇಂಡಿಯಾ ಎಂಬ ಕಂಪನಿಯಿಂದ 41 ವರ್ಷದ ಹಿಂದೆ ಈ ಸೇತುವೆಯನ್ನು ನಿರ್ಮಾಣ ಮಾಡಲಾಗಿತ್ತು. ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿತ್ತು. ಕಾರವಾರ ನಗರ ಠಾಣೆಯಲ್ಲಿ NHAI ಹಾಗೂ IRB ಕಂಪನಿ ವಿರುದ್ಧ ಪ್ರಕರಣ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:48 am, Wed, 7 August 24

TV9 Web

TV9 Kannada

Read More
Loading...
Unable to load recommendations.
Follow Us