AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಘಟನೆ: ಬಸ್​​ ಅಪಘಾತದಲ್ಲಿ ಹಲವರಿಗೆ ಗಾಯ; ಓರ್ವ ವಿದ್ಯಾರ್ಥಿ ಸ್ಥಿತಿ ಗಂಭೀರ

ರಾಜ್ಯದ ವಿವಿಧೆಡೆ ಬಸ್ ಅಪಘಾತಗಳು ಸಂಭವಿಸಿದ್ದು, ಪ್ರತ್ಯೇಕ ಘಟನೆಗಳಲ್ಲಿ 22ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಉತ್ತರ ಕನ್ನಡದಲ್ಲಿ ಮರಕ್ಕೆ ಬಸ್​​ ಡಿಕ್ಕಿಯಾಗಿ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದರೆ, ಕಲಬುರಗಿಯಲ್ಲಿ ವಿದ್ಯಾರ್ಥಿಯ ಕೈ ಛಿದ್ರವಾಗಿದೆ. ಹಾವೇರಿಯಲ್ಲಿಯೂ ಓರ್ವ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದಾನೆ. ಈ ಪೈಕಿ ಓರ್ವ ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದೆ.

ಪ್ರತ್ಯೇಕ ಘಟನೆ: ಬಸ್​​ ಅಪಘಾತದಲ್ಲಿ ಹಲವರಿಗೆ  ಗಾಯ; ಓರ್ವ ವಿದ್ಯಾರ್ಥಿ ಸ್ಥಿತಿ ಗಂಭೀರ
ಅಪಘಾತದಲ್ಲಿ ವಿದ್ಯಾರ್ಥಿ ಕೈ ಛಿದ್ರ.
ಪ್ರಸನ್ನ ಹೆಗಡೆ
|

Updated on:Jan 08, 2026 | 1:44 PM

Share

ಉತ್ತರ ಕನ್ನಡ, ಜನವರಿ 08: ರಾಜ್ಯದ ವಿವಿಧೆಡೆ ಸಂಭವಿಸಿದ ಬಸ್​​ ಅಪಘಾತದಲ್ಲಿ ಒಟ್ಟು 22 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಉತ್ತರ ಕನ್ನಡದಲ್ಲಿ ಮರಕ್ಕೆ ಬಸ್​​ ಡಿಕ್ಕಿಯಾಗಿ 20 ಜನ ಗಾಯಗೊಂಡಿದ್ದರೆ, ಸೈಕಲ್​​ನಲ್ಲಿ ತೆರಳುತ್ತಿದ್ದ ವೇಳೆ ಬಸ್​​ ಗುದ್ದಿದ ಪರಿಣಾಮ ಕಲಬುರಗಿಯಲ್ಲಿ ವಿದ್ಯಾರ್ಥಿಯ ಕೈ ಸಂಪೂರ್ಣ ಛಿದ್ರವಾಗಿದೆ. ಬಸ್​​ ಡಿಕ್ಕಿಯಾಗಿ ಹಾವೇರಿಯಲ್ಲೂ ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ.

ಓವರ್‌ಟೇಕ್ ವೇಳೆ ಮರಕ್ಕೆ ಬಸ್​ ಡಿಕ್ಕಿ

Kwr Accident

ಮರಕ್ಕೆ ಗುದ್ದಿದ ಬಸ್​​

ಓವರ್‌ಟೇಕ್ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಬಸ್​ ಗುದ್ದಿದ ಪರಿಣಾಮ 20ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬಾನಸಗೇರಿ ಗ್ರಾಮದ ಮೊರಾರ್ಜಿ ಹಾಸ್ಟೆಲ್ ಬಳಿ ನಡೆದಿದೆ. ಕೆಎಸ್​ಆರ್​ಟಿಸಿ ಬಸ್ ಚಾಲಕ, 8 ವಿದ್ಯಾರ್ಥಿನಿಯರು, ಇಬ್ಬರು ಶಾಲಾ ಮಕ್ಕಳು, ಇಬ್ಬರು ಮಹಿಳೆಯರು ಮತ್ತು ನಿರ್ವಾಹಕ ಸೇರಿ ಹಲವರು ಘಟನೆಯಲ್ಲಿ ಗಾಯಗೊಂಡಿದ್ದಾರೆ. ಓವರ್‌ಟೇಕ್ ಮಾಡುವ ಸಂದರ್ಭ ಮುಂದಿನಿಂದ ಕಾರು ಬಂದ ಹಿನ್ನೆಲೆ ಅಪಘಾತ ತಪ್ಪಿಸಲು ಚಾಲಕ ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ಬಸ್​​ ಮರಕ್ಕೆ ಹೋಗಿ ಗುದ್ದಿದೆ. ಗಾಯಾಳುಗಳನ್ನು ಹಳಿಯಾಳ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.

ಇದನ್ನೂ ಓದಿ: ಊಟಿ ಬಳಿ 120 ಅಡಿ ಆಳಕ್ಕೆ ಬಿದ್ದ ಮಿನಿಬಸ್; 32 ಜನರಿಗೆ ಗಾಯ

ವಿದ್ಯಾರ್ಥಿ ಬಲಗೈ ಛಿದ್ರ

ಸೈಕಲ್​​ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಗೆ ಕೆಕೆಆರ್​ಟಿಸಿ ಬಸ್​ ಡಿಕ್ಕಿಯಾಗಿರುವ ಘಟನೆ ಕಲಬುರಗಿಯ ಜೇವರ್ಗಿ ಪಟ್ಟಣದ ವಿಜಯಪುರ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ವಿದ್ಯಾರ್ಥಿ ಇರ್ಫಾನ್ ದವಲಸಾಬ್(15)ಗೆ ಗಂಭೀರ ಗಾಯಗೊಂಡಿದ್ದು, ವಿದ್ಯಾರ್ಥಿ ಅಬ್ದುಲ್ ಕಲಾಂ ಆಜಾದ್ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ. ಘಟನೆ ಬಗ್ಗೆ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರೀಕ್ಷೆಗೆ ಹೊರಟ್ಟಿದ್ದವನಿಗೆ ಗುದ್ದಿದ ಬಸ್​

ಬಸ್​​ ಗುದ್ದಿದ ಪರಿಣಾಮ ಪರೀಕ್ಷೆ ಬರೆಯಲು ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ನಗರ ಬಸ್ ನಿಲ್ದಾಣದಲ್ಲಿ ನಡೆದಿದೆ. ಹಾವೇರಿ ತಾಲ್ಲೂಕಿನ ಕೊಣನತಂಬಿಗಿ ಗ್ರಾಮದ ವಿಧ್ಯಾರ್ಥಿ ರೋಹಿತ್ ಕೆಸರಳ್ಳಿ ಬೆನ್ನಿಗೆ ಮತ್ತು ತಲೆಗೆ ಘಟನೆಯಲ್ಲಿ ಗಂಭೀರ ಗಾಯಗಳಾಗಿವೆ. ನಗರದ ಹಾಸ್ಟೆಲ್​​ನಲ್ಲಿ ವಾಸವಿದ್ದು, ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈತ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ. ಗಾಯಾಳುವಿಗೆ ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:43 pm, Thu, 8 January 26

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ