ಸಿಬಿಐ ‘ಬಿ’ ರಿಪೋರ್ಟ್: ಪರೇಶ್ ಮೇಸ್ತಾ ಕುಟುಂಬದ ಪರವಾಗಿ ಕಾನೂನು ಹೋರಾಟಕ್ಕೆ ನಿಂತ ವಕೀಲ ನಾಗರಾಜ ನಾಯಕ್

ಪರೇಶ್ ಮೇಸ್ತಾ ಕುಟುಂಬದ ಪರವಾಗಿ ಕಾನೂನು ಹೋರಾಟ ನಡೆಸುವುದಾಗಿ ವಕೀಲ ನಾಗರಾಜ ನಾಯಕ್ ನ್ಯಾಯಾಲಯದಲ್ಲಿ ತಿಳಿಸಿದ್ದಾರೆ.

ಸಿಬಿಐ 'ಬಿ' ರಿಪೋರ್ಟ್: ಪರೇಶ್ ಮೇಸ್ತಾ ಕುಟುಂಬದ ಪರವಾಗಿ ಕಾನೂನು ಹೋರಾಟಕ್ಕೆ ನಿಂತ ವಕೀಲ ನಾಗರಾಜ ನಾಯಕ್
ದಿವಂಗತ ಪರೇಶ್ ಮೇಸ್ತಾ (ಸಂಗ್ರಹ ಚಿತ್ರ)
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Nov 16, 2022 | 4:31 PM

ಕಾರವಾರ: ಪರೇಶ್ ಮೇಸ್ತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಬಿ.ಐ (CBI) ನಿಂದ ‘ಬಿ’ ರಿಪೋರ್ಟ್ ಸಲ್ಲಿಕೆ ಬಳಿಕ ನ್ಯಾಯಾಲಯದಿಂದ ಪರೇಶ್ ಮೇಸ್ತಾ (Paresh Mesta) ತಂದೆ ಕಮಲಾಕರ ಮೇಸ್ತಾ ಅವರಿಗೆ ನೋಟೀಸ್ ನೀಡಲಾಗಿತ್ತು. ಈ ಹಿನ್ನೆಲೆ ಪರೇಶ್ ಮೇಸ್ತಾ ಕುಟುಂಬದ ಪರವಾಗಿ ಕಾನೂನು ಹೋರಾಟಕ್ಕೆ ವಕೀಲ ನಾಗರಾಜ ನಾಯಕ್ (Advocate Nagaraj Nayak)​ ನಿಂತಿದ್ದಾರೆ. ಅವರ ಪರವಾಗಿ ವಕಾಲತ್ತು ನಡೆಸುವುದಾಗಿ ನ್ಯಾಯಾಲಯದಲ್ಲಿ ವಕೀಲ ನಾಗರಾಜ ನಾಯಕ್ ತಿಳಿಸಿದ್ದಾರೆ. ಸದ್ಯ ಸಿ.ಬಿ.ಐ.ನಿಂದ ನೀಡಲಾದ ‘ಬಿ’ ರಿಪೋರ್ಟ್‌ಗೆ ವಕೀಲರು ಆಕ್ಷೇಪ ಮಂಡಿಸಿದ್ದಾರೆ. ಈ ಕಾರಣದಿಂದ ಪ್ರಕರಣವನ್ನು ಡಿ. 21ಕ್ಕೆ ಹೊನ್ನಾವರ ಜೆಎಂಎಫ್‌ಸಿ ನ್ಯಾಯಾಲಯ ಮುಂದೂಡಿದೆ. ಸಿಬಿಐ ‘ಬಿ’ ರಿಪೋರ್ಟ್ ವಿರುದ್ಧ ಡಿ. 21ರಂದು ತಕರಾರು ಅರ್ಜಿಯನ್ನು ವಕೀಲ ನಾಗರಾಜ‌ ನಾಯಕ್ ಸಲ್ಲಿಸಲಿದ್ದಾರೆ.

ಸಹಜ ಸಾವು ಎಂಬಂತೆ ಬಿಂಬಿಸಲು ನಾನಾ ಕಸರತ್ತು

ಈ ಹಿಂದಿನ ಸಿದ್ಧರಾಮಯ್ಯ ಸರಕಾರ ಪ್ರಕರಣವನ್ನು ಸಹಜ ಸಾವು ಎಂಬಂತೆ ಬಿಂಬಿಸಲು ನಾನಾ ಪ್ರಯತ್ನ ಮಾಡಿದೆ. ಪ್ರಕರಣವನ್ನು ಹಳ್ಳ ಹಿಡಿಸಲು ಎಷ್ಟು ಸಾಧ್ಯವೋ ಅಷ್ಟು ಹಳ್ಳ ಹಿಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಪ್ರಕರಣ ‘ಬಿ’ ರಿಪೋರ್ಟ್ ಕಾಣಬೇಕೆಂದು ಸಿಬಿಐ ವಹಿಸುವ ಮೊದಲೇ ಸಾಕಷ್ಟು ಡ್ಯಾಮೇಜ್ ಮಾಡಲಾಗಿದೆ ಎಂದು ಪ್ರಾಥಮಿಕ ನೋಟದಿಂದ ಈ ವಿಚಾರಗಳು ಕಂಡು ಬಂದಿವೆ ಎನ್ನಲಾಗುತ್ತಿದೆ. ಪ್ರಕರಣ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ನ್ಯಾಯ ದೊರೆಯುವ ಭರವಸೆ ಇದೆ ಎಂದು ವಕೀಲ ನಾಗರಾಜ ನಾಯಕ್​ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾನೂನು ಹೋರಾಟಕ್ಕೆ ಸಿದ್ಧರಾದ ಕಮಲಾಕರ ಮೇಸ್ತಾ

2017ರ ಡಿ. 6ರಂದು ನಡೆದ ಕೋಮುಗಲಭೆಯಲ್ಲಿ ಪರೇಶ್ ಮೇಸ್ತಾ ನಾಪತ್ತೆಯಾಗಿದ್ದ. ಎರಡು ದಿನಗಳ ಬಳಿಕ ಆತನ ಮೃತದೇಹ ಹೊನ್ನಾವರದ ಕೆರೆಯೊಂದರಲ್ಲಿ ಪತ್ತೆಯಾಗಿತ್ತು. ವಿಪಕ್ಷ ಹಾಗೂ ಜನರ ಒತ್ತಾಯದ ಮೇರೆಗೆ ಅಂದಿನ ಕಾಂಗ್ರೆಸ್ ಸರಕಾರ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿತ್ತು. ಆದರೆ, ಕಳೆದ ಅಕ್ಟೋಬರ್ 6 ರಂದು ನ್ಯಾಯಾಲಯಕ್ಕೆ ಸಿಬಿಐ ‘ಬಿ’ ರಿಪೋರ್ಟ್ ಸಲ್ಲಿಸಿತ್ತು. ಪರೇಶ್ ಮೇಸ್ತಾ ಕೊಲೆ ನಡೆದಿಲ್ಲ, ಸಹಜ ಸಾವೆಂದು ಸಿಬಿಐ ‘ಬಿ’ ರಿಪೋರ್ಟ್ ಸಲ್ಲಿಸಿತ್ತು. ಆರೋಪಿಗಳನ್ನು ದೋಷಮುಕ್ತ ಮಾಡಬಹುದೆಂದು ಸಿಬಿಐ ತನಿಖಾ ತಂಡ ‘ಬಿ’ ರಿಪೋರ್ಟ್ ಸಲ್ಲಿಸಿತ್ತು. ಈ ಹಿನ್ನೆಲೆ ಸಿಬಿಐ ರಿಪೋರ್ಟ್ ವಿರುದ್ಧ ಕಾನೂನು ಹೋರಾಟ ನಡೆಸಲು ಕಮಲಾಕರ ಮೇಸ್ತಾ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಇದನ್ನೂ ಓದಿ: ಪರೇಶ್ ಮೇಸ್ತ ಸಾಯುವ ಮುನ್ನ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿ: ಸಿಬಿಐ ವರದಿಯಲ್ಲಿ ಉಲ್ಲೇಖ

ಮರು ತನಿಖೆಗೆ ಕಮಲಾಕರ ಮೇಸ್ತಾ ಒತ್ತಾಯ

ಇನ್ನು ಪ್ರಕರಣದ ಮರು ತನಿಖೆ ಮಾಡಿ ಎಂದು ಪರೇಶ್ ಮೇಸ್ತಾ ತಂದೆ ಕಮಲಾಕರ ಮೇಸ್ತಾ ಹಿಂದೆ ಒತ್ತಾಯ ಮಾಡಿದ್ದರು. ಪರೇಶ್ ಮೇಸ್ತಾ ಸಾವು ಆಕಸ್ಮಿಕ ಎಂದು ಸಿಬಿಐ ಬಿ ರಿಪೋರ್ಟ್​ನಲ್ಲಿ ಬಹಿರಂಗಗೊಂಡಿತ್ತು. ಈ ಹಿನ್ನೆಲೆ ಕಮಲಾಕರ ಮೆಸ್ತಾ ಪ್ರಕರಣದ ಮರು ತನಿಖೆ ನಡೆಸುವಂತೆ ಅ. 20 ರಂದು ಬೆಂಗಳೂರಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಈ ಸಂಬಂಧ ಪ್ರಕರಣವನ್ನು ಮರು ತನಿಖೆ ನಡೆಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೂಡ ಭರವಸೆ ನೀಡಿದ್ದರು. ಘಟನೆ ನಡೆದು 4 ತಿಂಗಳ ಬಳಿಕ ಸಿಬಿಐ ತನಿಖೆಗೆ ನೀಡಲಾಗಿತ್ತು. ಇದರಿಂದ ಕಮಲಾಕರ ಮೇಸ್ತಾ ಅಸಮಾಧಾನ ವ್ಯಕ್ತಪಡಿಸಿದ್ದರು. ಪರೇಶ್​ ಮೇಸ್ತಾ ಕುಟುಂಬದ ಪರವಾಗಿ ನಮ್ಮ ಸರ್ಕಾರ ಇರುತ್ತೆ. ಶೀಘ್ರದಲ್ಲೇ ಮೇಸ್ತಾ ಪ್ರಕರಣ ಮರು ತನಿಖೆಗೆ ನೀಡಲಾಗುವುದು ಎಂದು ಕಾರವಾರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:21 pm, Wed, 16 November 22

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!