AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttara Kannada Flood: ಭೂಕುಸಿತಕ್ಕೊಳಗಾದ ಕಳಚೆ ಗ್ರಾಮದ ಸಂಪೂರ್ಣ ಸ್ಥಳಾಂತರ, ನೊಂದವರಿಗೆ ಶೀಘ್ರ ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ಈ ಸಂದರ್ಭದಲ್ಲಿ ಸರಿಯಾಗಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. 100 ಕೋಟಿ ಅನುದಾನವನ್ನು ಲೋಕೋಪಯೋಗಿ ಇಲಾಖೆ ರಸ್ತೆಗಳಿಗೆ ಬಿಡುಗಡೆ ಮಾಡಲಾಗಿದೆ: ಸಿಎಂ ಬಸವರಾಜ ಬೊಮ್ಮಾಯಿ

Uttara Kannada Flood: ಭೂಕುಸಿತಕ್ಕೊಳಗಾದ ಕಳಚೆ ಗ್ರಾಮದ ಸಂಪೂರ್ಣ ಸ್ಥಳಾಂತರ, ನೊಂದವರಿಗೆ ಶೀಘ್ರ ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ
ಪ್ರವಾಹ ಪೀಡಿತ ಸ್ಥಳಗಳ ಪರಿಶೀಲನೆ ನಡೆಸಿದ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Jul 29, 2021 | 7:00 PM

Share

ಅಂಕೋಲಾ: ಉತ್ತರ ಕನ್ನಡದ ಯಲ್ಲಾಪುರ ತಾಲೂಕಿನ ಭೂಕುಸಿತಕ್ಕೊಳಗಾದ ಕಳಚೆ‌ ಗ್ರಾಮದಲ್ಲಿ ಪರಿಹಾರ ನೀಡಿದರೂ ಮನೆ ಕಟ್ಟಲು ಅಸಾಧ್ಯವಾಗಿದೆ. ಹೀಗಾಗಿ ಗ್ರಾಮವನ್ನು ಸಂಪೂರ್ಣ ಸ್ಥಳಾಂತರಿಸಿ. ನಾಳೆಯಿಂದಲೇ ಕೆಲಸ ಮಾಡಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ. ಈ ಸ್ಥಳಾಂತರಕ್ಕೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಘೋಷಿಸಿದರು.

ಪೂರ್ಣ ಬಿದ್ದ ಮನೆಗಳಿಗೆ 5 ಲಕ್ಷ , ಭಾಗಶಃ ಬಿದ್ದ ಮನೆಗಳಿಗೆ ಲಕ್ಷ, ಸ್ವಲ್ಪ ಹಾನಿಯಾಗಿದ್ದರೆ 50 ಸಾವಿರ ಪರಿಹಾರವನ್ನು ಸಿಎಂ ಘೋಷಿಸಿದರು. ಎಂದು ಸಿಎಂ ಆದೇಶಿಸಿದರು. ಜತೆಗೆ ಕಳಚೆ ಗ್ರಾಮಸ್ಥರ ಪುರ್ವಸತಿಗೆ 15 ಎಕರೆ ಜಮೀನು ಹುಡುಕಲು ಜಿಲ್ಲಾಧಿಕಾರಿಗೆ ಸೂಚಿಸಿದರು. ಅರಬೈಲ್ ಘಾಟ್ ರಸ್ತೆ , ಕಳಚೆ ರಸ್ತೆ , ಘಟ್ಟ ಕುಸಿದ ಸ್ಥಳ ರಿಪೇರಿಗೆ 10 ಕೋಟಿ‌ ಘೋಷಿಸಿದರು.

ಎನ್​ಡಿಆರ್​ಎಫ್ ನಿಯಮದಂತೆ ಆರೈಕೆ ಕೇಂದ್ರದಲ್ಲಿನ ಜನರಿಗೆ 3800 ಪರಿಹಾರವನ್ನು ಕಳೆದ ವರ್ಷ ನೀಡಲಾಗಿತ್ತು. ಇದೀಗ ರಾಜ್ಯ ಸರಕಾರದಿಂದ ತಲಾ 10 ಸಾವಿರ ಪರಿಹಾರ ನೀಡಲು ನಿರ್ಧರಿಸಲಾಗಿದ್ದು, ಉಳಿದ 6200 ರೂ. ಹಣವನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬಿದ್ದ ಮನೆಗಳ ಸರ್ವೆ ನಡೆಸಿ ಕಳೆದ ವರ್ಷದ ಮಾದರಿಯಲ್ಲಿಯೇ ಪರಿಹಾರ ನೀಡಲು ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಬವರಾಜ ಬೊಮ್ಮಾಯಿ ತಿಳಿಸಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ನಷ್ಟವಾಗಿದೆ. ಅನೇಕ ಕಡೆ ಭೂಕುಸಿತ ಉಂಟಾಗಿದೆ. ಅನೇಕ ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಇಂಥ ಸಂದರ್ಭದಲ್ಲಿ ಸರಿಯಾಗಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. 100 ಕೋಟಿ ಅನುದಾನವನ್ನು ಲೋಕೋಪಯೋಗಿ ಇಲಾಖೆ ರಸ್ತೆಗಳಿಗೆ ಬಿಡುಗಡೆ ಮಾಡಲಾಗಿದೆ. ಕಳೆದ ವರ್ಷ ಅರಣ್ಯದಲ್ಲಿ ಮನೆ ಕಟ್ಟಿಕೊಂಡವರಿಗೆ ಪರಿಹಾರ ನೀಡಿದ್ದೇವೆ. ಈ ವರ್ಷವೂ ಮನೆ ಕಳೆದುಕೊಂಡವರಿಗೂ ಪರಿಹಾರ ಒದಗಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇದನ್ನೂ ಓದಿ: 

Uttara Kannada Flood: ಚಿತ್ರನೋಟ: ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಕೊಟ್ಟ ಭೂಕುಸಿತಕ್ಕೊಳಗಾದ ಕಳಚೆ ಗ್ರಾಮ ಹೇಗಿದೆ?

Uttara Kannada: ಮನೆ, ಗುಡ್ಡ ಕುಸಿತ, ರಸ್ತೆ, ಸೇತುವೆ ನೀರುಪಾಲು, ಸಂಪರ್ಕ ಕಡಿತ; ಉತ್ತರ ಕನ್ನಡವಲ್ಲ ಇದು ತತ್ತರ ಕನ್ನಡ ಎಂದ ಜನ

(CM Basavaraj Bommai Notice to Complete Relocation of Uttara Kannada Yellapur Kalache village for landslide)

Published On - 6:39 pm, Thu, 29 July 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?