ಅಂಕೋಲಾ: ಉತ್ತರ ಕನ್ನಡದ ಯಲ್ಲಾಪುರ ತಾಲೂಕಿನ ಭೂಕುಸಿತಕ್ಕೊಳಗಾದ ಕಳಚೆ ಗ್ರಾಮದಲ್ಲಿ ಪರಿಹಾರ ನೀಡಿದರೂ ಮನೆ ಕಟ್ಟಲು ಅಸಾಧ್ಯವಾಗಿದೆ. ಹೀಗಾಗಿ ಗ್ರಾಮವನ್ನು ಸಂಪೂರ್ಣ ಸ್ಥಳಾಂತರಿಸಿ. ನಾಳೆಯಿಂದಲೇ ಕೆಲಸ ಮಾಡಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ. ಈ ಸ್ಥಳಾಂತರಕ್ಕೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಘೋಷಿಸಿದರು.
ಪೂರ್ಣ ಬಿದ್ದ ಮನೆಗಳಿಗೆ 5 ಲಕ್ಷ , ಭಾಗಶಃ ಬಿದ್ದ ಮನೆಗಳಿಗೆ ಲಕ್ಷ, ಸ್ವಲ್ಪ ಹಾನಿಯಾಗಿದ್ದರೆ 50 ಸಾವಿರ ಪರಿಹಾರವನ್ನು ಸಿಎಂ ಘೋಷಿಸಿದರು. ಎಂದು ಸಿಎಂ ಆದೇಶಿಸಿದರು. ಜತೆಗೆ ಕಳಚೆ ಗ್ರಾಮಸ್ಥರ ಪುರ್ವಸತಿಗೆ 15 ಎಕರೆ ಜಮೀನು ಹುಡುಕಲು ಜಿಲ್ಲಾಧಿಕಾರಿಗೆ ಸೂಚಿಸಿದರು. ಅರಬೈಲ್ ಘಾಟ್ ರಸ್ತೆ , ಕಳಚೆ ರಸ್ತೆ , ಘಟ್ಟ ಕುಸಿದ ಸ್ಥಳ ರಿಪೇರಿಗೆ 10 ಕೋಟಿ ಘೋಷಿಸಿದರು.
ಎನ್ಡಿಆರ್ಎಫ್ ನಿಯಮದಂತೆ ಆರೈಕೆ ಕೇಂದ್ರದಲ್ಲಿನ ಜನರಿಗೆ 3800 ಪರಿಹಾರವನ್ನು ಕಳೆದ ವರ್ಷ ನೀಡಲಾಗಿತ್ತು. ಇದೀಗ ರಾಜ್ಯ ಸರಕಾರದಿಂದ ತಲಾ 10 ಸಾವಿರ ಪರಿಹಾರ ನೀಡಲು ನಿರ್ಧರಿಸಲಾಗಿದ್ದು, ಉಳಿದ 6200 ರೂ. ಹಣವನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬಿದ್ದ ಮನೆಗಳ ಸರ್ವೆ ನಡೆಸಿ ಕಳೆದ ವರ್ಷದ ಮಾದರಿಯಲ್ಲಿಯೇ ಪರಿಹಾರ ನೀಡಲು ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಬವರಾಜ ಬೊಮ್ಮಾಯಿ ತಿಳಿಸಿದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ನಷ್ಟವಾಗಿದೆ. ಅನೇಕ ಕಡೆ ಭೂಕುಸಿತ ಉಂಟಾಗಿದೆ. ಅನೇಕ ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಇಂಥ ಸಂದರ್ಭದಲ್ಲಿ ಸರಿಯಾಗಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. 100 ಕೋಟಿ ಅನುದಾನವನ್ನು ಲೋಕೋಪಯೋಗಿ ಇಲಾಖೆ ರಸ್ತೆಗಳಿಗೆ ಬಿಡುಗಡೆ ಮಾಡಲಾಗಿದೆ. ಕಳೆದ ವರ್ಷ ಅರಣ್ಯದಲ್ಲಿ ಮನೆ ಕಟ್ಟಿಕೊಂಡವರಿಗೆ ಪರಿಹಾರ ನೀಡಿದ್ದೇವೆ. ಈ ವರ್ಷವೂ ಮನೆ ಕಳೆದುಕೊಂಡವರಿಗೂ ಪರಿಹಾರ ಒದಗಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇದನ್ನೂ ಓದಿ:
Uttara Kannada Flood: ಚಿತ್ರನೋಟ: ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಕೊಟ್ಟ ಭೂಕುಸಿತಕ್ಕೊಳಗಾದ ಕಳಚೆ ಗ್ರಾಮ ಹೇಗಿದೆ?
(CM Basavaraj Bommai Notice to Complete Relocation of Uttara Kannada Yellapur Kalache village for landslide)
Published On - 6:39 pm, Thu, 29 July 21