2 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ, ಮಂಗನ ಕಾಯಿಲೆ ತಡೆಗೆ ಕ್ರಮ: ಶಿರಸಿಯಲ್ಲಿ ಇನ್ನೂ ಏನೇನಂದ್ರು ಸಿಎಂ ಸಿದ್ದರಾಮಯ್ಯ?

CM Siddaramaiah in Sirsi: ಉತ್ತರ ಕನ್ನಡ ಜಿಲ್ಲೆಯ ಶಿರಸಿ ಭೇಟಿಯಲ್ಲಿರುವ ಸಿಎಂ ಸಿದ್ದರಾಮಯ್ಯ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ, ಮಂಗನ ಕಾಯಿಲೆ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು, ಯಲ್ಲಾಪುರ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ ವದಂತಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು.

2 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ, ಮಂಗನ ಕಾಯಿಲೆ ತಡೆಗೆ ಕ್ರಮ: ಶಿರಸಿಯಲ್ಲಿ ಇನ್ನೂ ಏನೇನಂದ್ರು ಸಿಎಂ ಸಿದ್ದರಾಮಯ್ಯ?
ಸಿಎಂ ಸಿದ್ದರಾಮಯ್ಯ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: Ganapathi Sharma

Updated on: Mar 06, 2024 | 11:19 AM

ಕಾರವಾರ, ಮಾರ್ಚ್​ 6: ಮುಂದಿನ ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆಗೆ (Lok Sabha Elections) ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ (Congress Candidate List) ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರದ ಸಿದ್ಧತೆ ಆರಂಭಿಸಿದೆ. ಎರಡು ದಿನದಲ್ಲಿ ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಈ ಬಾರಿ ಅಭ್ಯರ್ಥಿಗಳ ಆಯ್ಕೆ ಅಷ್ಟೊಂದು ಸಮಸ್ಯೆ ಆಗಿಲ್ಲ. ಆದಷ್ಟು ಬೇಗ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು.

ಮಾರ್ಚ್​ 7ರಂದು ಕಾಂಗ್ರೆಸ್​​ ಸಿಇಸಿ ಸಭೆ ನಡೆಯಲಿದ್ದು, ಆ ಬಳಿಕ ಅಭ್ಯರ್ಥಿಗಳ ಪಟ್ಟಿಯ ಮಾಹಿತಿ ದೊರೆಯಲಿದೆ ಎಂದು ಡಿಸಿಎಂ ಸಹ ಈಗಾಗಲೇ ತಿಳಿಸಿದ್ದಾರೆ. ಈ ಮಧ್ಯೆ, ಸಿಎಂ ಕೂಡ ಹೇಳಿಕೆ ನೀಡಿರುವುದರಿಂದ ಕೆಲವೇ ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಹುತೇಕ ಖಚಿತವಾಗಿದೆ.

ಇನ್ನು, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಆತಂಕಕ್ಕೆ ಕಾರಣವಾಗಿರುವ ಮಂಗನ ಕಾಯಿಲೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಕಾಯಿಲೆ ತಡೆಗಟ್ಟಲು ಆದಷ್ಟು ಬೇಗ ಕ್ರಮವಹಿಸುತ್ತೇವೆ. ಕಾಯಿಲೆಯಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಕೊಡಲಾಗುವುದು ಎಂದು ಹೇಳಿದರು.

ಶಿವರಾಂ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನಂದ್ರು ಸಿಎಂ?

ಬಿಜೆಪಿ ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್​​ ಕಾಂಗ್ರೆಸ್​ ಸೇರ್ಪಡೆ ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜಕೀಯ ನಿಂತ ನೀರಲ್ಲ ಎಂದರು. ಅಲ್ಲದೆ, ಹೆಬ್ಬಾರ್ ಪಕ್ಷ ಸೇರ್ಪಡೆ ಬಗ್ಗೆ ನನ್ನ ಜೊತೆ ಮಾತನಾಡಿಲ್ಲ. ಅವರು ಪಕ್ಷಕ್ಕೆ ಸೇರುವ ಬಗ್ಗೆ ಮಾತನಾಡಿದರೆ ಮೊದಲು ಸ್ಥಳೀಯರ ಅಭಿಪ್ರಾಯ ಕೇಳುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ಐತಿಹಾಸಿಕ ಕದಂಬೋತ್ಸವಕ್ಕೆ ಮಂಗಳವಾರ ಚಾಲನೆ ನೀಡಿದ್ದ ಸಿದ್ದರಾಮಯ್ಯ, ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್​​ಗೂ ಗ್ಯಾರಂಟಿ ಕೊಟ್ಟಿದ್ದೇನೆ ಎಂದು ಹೇಳಿದ್ದರು. ಇದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿತ್ತು.

ಇದನ್ನೂ ಓದಿ: ಶಿವರಾಮ್​ ಹೆಬ್ಬಾರ್​ಗೂ ಗ್ಯಾರಂಟಿ ಕೊಟ್ಟಿದ್ದೇನೆ: ಸಿದ್ದರಾಮಯ್ಯ ಹೇಳಿಕೆ ಹಿಂದಿನ ಗೂಢಾರ್ಥ ಏನು?

ಬಿಜೆಪಿಯಿಂದ ಅಂತರಕಾಯ್ದುಕೊಂಡಿರುವ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ. ಅಲ್ಲದೆ, ರಾಜ್ಯಸಭೆ ಚುನಾವಣೆಗೆ ಗೈರಾಗುವ ಮೂಲಕ ಅವರು ಕಾಂಗ್ರೆಸ್ ಸೇರುತ್ತಾರೆ ಎನ್ನುವ ಮಾತುಗಳು ಬಲವಾಗಿದ್ದವು.

ಬಿಜೆಪಿ ವಿರುದ್ಧ ವಾಗ್ದಾಳಿ

ಬಿಜೆಪಿಯವರು ಕಾಂಗ್ರೆಸ್ ನಾಯಕರನ್ನು ಸೆಳೆಯಲು ಪ್ರಯತ್ನಿಸಿದಾರೆ ಎಂಬ ಬಿ.ಆರ್ ಪಾಟೀಲ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವರು ಯಾವತ್ತೂ ಜನರ ಆಶಿರ್ವಾದಿಂದ ಅಧಿಕಾರಕ್ಕೆ ಬಂದಿಲ್ಲ. ಬಿಜೆಪಿಯವರು ಆಪರೇಷನ್ ಕಮಲ ಮಾಡುವುದರಲ್ಲಿ ನಿಸ್ಸೀಮರು. ಈಗ ಮತ್ತೆ ಅದೆ ಚಾಳಿಯನ್ನು ಮುಂದುವರಿಸುತ್ತಿದ್ದಾರೆ. ಅವರು ದೇಶದ ಅನೇಕ ರಾಜ್ಯಗಳಲ್ಲಿ ಆಪರೇಷನ್ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ