ಮುರುಡೇಶ್ವರ ಕ್ಷೇತ್ರದಲ್ಲಿ ಸಂಭ್ರಮದ ಜಾತ್ರಾ ಮಹೋತ್ಸವ; ಕೊವಿಡ್ ನಿಯಮ ಉಲ್ಲಂಘಿಸಿ ಸಾವಿರಾರು ಮಂದಿ ಜಾತ್ರೆಯಲ್ಲಿ ಭಾಗಿ

ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಪಾಲಿಸದೇ ಮುರುಡೇಶ್ವರನ ಜಾತ್ರೆಯಲ್ಲಿ ಸಾವಿರಾರು ಭಕ್ತರು ಭಾಗಿಯಾಗಿದ್ದಾರೆ. ಜಾತ್ರೆಯಲ್ಲಿ ಭಾಗವಹಿಸಲು ಸುಮಾರು 200 ಮಂದಿಗೆ ಮುರುಡೇಶ್ವರ ಕ್ಷೇತ್ರಾಡಳಿತ ಪಾಸ್ ನೀಡಿತ್ತು. ಆದರೆ ಜಾತ್ರೆಯಲ್ಲಿ ಸುಮಾರು 5000ಕ್ಕೂ ಹೆಚ್ಚು ಭಕ್ತರು ಭಾಗಿಯಾಗಿದ್ದಾರೆ.

ಮುರುಡೇಶ್ವರ ಕ್ಷೇತ್ರದಲ್ಲಿ ಸಂಭ್ರಮದ ಜಾತ್ರಾ ಮಹೋತ್ಸವ; ಕೊವಿಡ್ ನಿಯಮ ಉಲ್ಲಂಘಿಸಿ ಸಾವಿರಾರು ಮಂದಿ ಜಾತ್ರೆಯಲ್ಲಿ ಭಾಗಿ
ನೂತನ ಬ್ರಹ್ಮರಥಾರೂಢನಾಗಿ ರಥಬೀದಿಯಲ್ಲಿ ಮುರುಡೇಶ್ವರ
Follow us
TV9 Web
| Updated By: preethi shettigar

Updated on:Jan 20, 2022 | 9:03 PM

ಉತ್ತರ ಕನ್ನಡ: ನೂತನ ಬ್ರಹ್ಮರಥಾರೂಢನಾಗಿ ರಥಬೀದಿಯಲ್ಲಿ ಮುರುಡೇಶ್ವರ (Murudeshwar shiva) ಸಾಗಿದ್ದು, ಉತ್ತರ ಕನ್ನಡ (Uttara kannada) ಜಿಲ್ಲೆಯ ಮುರುಡೇಶ್ವರ ಕ್ಷೇತ್ರದಲ್ಲಿ ಸಂಭ್ರಮದ ಜಾತ್ರಾ ಮಹೋತ್ಸವ ನಡೆಸಲಾಗಿದೆ. ಆದರೆ ಈ ಜಾತ್ರಾ ಮಹೋತ್ಸವದಲ್ಲಿ ಕೊವಿಡ್ ನಿಯಮ (Covid rules) ಉಲ್ಲಂಘಿಸಿ ಸಾವಿರಾರು ಮಂದಿ ಭಾಗಿಯಾಗಿದ್ದಾರೆ. ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಪಾಲಿಸದೇ ಮುರುಡೇಶ್ವರನ ಜಾತ್ರೆಯಲ್ಲಿ ಸಾವಿರಾರು ಭಕ್ತರು ಭಾಗಿಯಾಗಿದ್ದಾರೆ. ಜಾತ್ರೆಯಲ್ಲಿ ಭಾಗವಹಿಸಲು ಸುಮಾರು 200 ಮಂದಿಗೆ ಮುರುಡೇಶ್ವರ ಕ್ಷೇತ್ರಾಡಳಿತ ಪಾಸ್ ನೀಡಿತ್ತು. ಆದರೆ ಜಾತ್ರೆಯಲ್ಲಿ ಸುಮಾರು 5000ಕ್ಕೂ ಹೆಚ್ಚು ಭಕ್ತರು ಭಾಗಿಯಾಗಿದ್ದಾರೆ.

ಪೊಲೀಸರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲೇ ಸಾವಿರಾರು ಮಂದಿ ಭಕ್ತರು ಸಂಭ್ರಮಿಸಿದ್ದಾರೆ. ಮುರುಡೇಶ್ವರನ ಬ್ರಹ್ಮರಥವನ್ನು ಎಳೆದು ನೂರಾರು ಮಂದಿ ಭಕ್ತರು ಪುನೀತರಾಗಿದ್ದಾರೆ.

ಶಬರಿಮಲೆಗೆ ಹೋಗಿ ಬಂದಿದ್ದ 31 ಜನರಿಗೆ ಕೊವಿಡ್ ಪಾಸಿಟಿವ್

ದಾವಣಗೆರೆ ತಾಲೂಕಿನ ಕುಕ್ಕವಾಡ ಬಳಿ ಇರುವ ಆಂಜನೇಯನಗರದ ನಿವಾಸಿಗಳು ಶಬರಿಮಲೆಗೆ ಹೋಗಿದ್ದರು. ಇವರಲ್ಲಿ 31 ಜನರಿಗೆ ಕೊವಿಡ್ ಪಾಸಿಟಿವ್ ಆಗಿದೆ. ಶಬರಿಮಲೆಗೆ ಹೋಗಿದ್ದ 65 ಜನರ ಪೈಕಿ 31 ಜನರಿಗೆ ಕೊವಿಡ್ ಸೋಂಕು ಪತ್ತೆಯಾಗಿದೆ. ಶಬರಿಮಲೆಯಿಂದ ವಾಪಸ್ಸು ಬಂದ ತಕ್ಷಣ ಆರೋಗ್ಯ ಇಲಾಖೆ ಸಿಬ್ಬಂದಿಗಳು ಸ್ವಾಬ್ ಟೆಸ್ಟ್ ಮಾಡಿದ್ದರು. ಈ ವೇಳೆ ಕೊರೊನಾ ಪತ್ತೆಯಾಗಿದೆ. ಸದ್ಯ 31 ಜನರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಹೋಮ್ ಐಸುಲೇಷನ್​ನಲ್ಲಿಟ್ಟಿದ್ದಾರೆ.

ಶಿವಮೊಗ್ಗ: ಗೃಹ ಸಚಿವರ ತವರು ಜಿಲ್ಲೆಯಲ್ಲೇ ಕೊವಿಡ್ ರೂಲ್ಸ್‌ ಬ್ರೇಕ್‌

ಗೃಹ ಸಚಿವ ಆರಗ ಜ್ಞಾನೇಂದ್ರ ತವರು ಜಿಲ್ಲೆಯಲ್ಲಿ ಕೊವಿಡ್ ನಿಯಮ ಉಲ್ಲಂಘನೆಯಾಗಿದೆ. ಶಿವಮೊಗ್ಗ  ಗ್ರಾಮಾಂತರ ಬಿಜೆಪಿಯ ಗ್ರಾಮಾಂತರ ಶಾಸಕ ಅಶೋಕ ನಾಯ್ಕ ಒಡೆತನದ ಅಕ್ಷರ ಶಾಲೆಯಲ್ಲಿ  ಕೊರೊನಾ ನಿಯಮ ಉಲ್ಲಂಘನೆ ಮಾಡಲಾಗಿದೆ. ನಿನ್ನೆಯಿಂದ ಮೂರು ದಿನ ಕೊರೊನಾ ಹೆಚ್ಚಳ ಹಿನ್ನಲೆ  ಶಿವಮೊಗ್ಗ ನಗರದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ನಡುವೆ ಇಂದು ಶಾಲೆಯಲ್ಲಿ ಅಶೋಕ  ನಾಯ್ಕ ಹುಟ್ಟುಹಬ್ಬದ ಹಿನ್ನಲೆ ಶಾಲೆಯ ಸಂಸ್ಥಾಪಕರ ದಿನ ಆಚರಣೆ ಮಾಡಲಾಗಿದೆ. ವಿದ್ಯಾರ್ಥಿಗಳು ರಜೆ ನಡುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಶಾಲಾ ವಿದ್ಯಾರ್ಥಿಗಳಿಂದ ಭರ್ಜರಿ ನೃತ್ಯ ಕಾರ್ಯಕ್ರಮ ಆಯೋಜಿಸಲಾಗಿತ್ತು. ನೃತ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಪಾದಯಾತ್ರೆ ಮಾಡಿದ್ದಕ್ಕೆ ಕಾಂಗ್ರೆಸ್ ನಾಯಕರ ಮೇಲೆ ಕೇಸ್, ಕೊರೊನಾ ನಿಯಮ ಉಲ್ಲಂಘಿಸಿದ ಬಿಜೆಪಿ ಮುಖಂಡರಿಗೆ ಮಾಫಿ: ಸಿಎಸ್​ಗೆ ಕಾಂಗ್ರೆಸ್ ದೂರು

ಆರೋಗ್ಯ ಸಚಿವರ ಬಾಮೈದನಿಂದಲೇ ಕೊರೊನಾ ನಿಯಮ ಉಲ್ಲಂಘನೆ; 500 ಮಹಿಳೆಯರನ್ನು ಸೇರಿಸಿ ಓಂಶಕ್ತಿ ಯಾತ್ರೆ ಆಯೋಜನೆ

Published On - 8:48 pm, Thu, 20 January 22

ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ