ಕಾರವಾರ, ಏಪ್ರಿಲ್ 21: ಕಾಳಿ ನದಿಯಲ್ಲಿ ಒಂದೇ ಕುಟುಂಬದ ಆರು ಪ್ರವಾಸಿಗರು ಸಾವನ್ನಪ್ಪಿರುವಂತಹ (death) ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ (Dandeli) ತಾಲೂಕಿನ ಅಕ್ವಾಡ ಗ್ರಾಮದ ಬಳಿ ದುರಂತ ಸಂಭವಿಸಿದೆ. ಪ್ರವಾಸಕ್ಕೆ ತೆರಳಿದ್ದಾಗ ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಚಿಕ್ಕ ಮಗುವೊಂದು ಆಕಸ್ಮಿಕವಾಗಿ ನೀರಿಗೆ ಬಿದ್ದಿತ್ತು. ಮಗುವನ್ನು ರಕ್ಷಿಸಲು ಒಬ್ಬರ ಹಿಂದೆ ಒಬ್ಬರು ಹೋಗಿ 6 ಜನರು ಮೃತಪಟ್ಟಿದ್ದಾರೆ. ನಜೀರ್ ಅಹ್ಮದ್(40), ಅಲ್ಛೀಯಾ ಅಹ್ಮದ್(10), ಮೋಹಿನ್(6), ರೇಷಾ ಉನ್ನಿಸಾ(38), ಇಫ್ರಾ ಅಹ್ಮದ್(15), ಅಬೀದ್ ಅಹ್ಮದ್(12) ಮೃತರು.
ಮೃತರನ್ನು ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳು ಎಂದು ಗುರುತಿಸಲಾಗಿದೆ. ಒಟ್ಟು 8 ಜನರು ಪ್ರವಾಸಕ್ಕೆ ತೆರಳಿದ್ದರು. ಆ ಪೈಕಿ ಇಬ್ಬರು ಮಹಿಳೆಯರು ನೀರಿಗೆ ಇಳಿದಿರಲಿಲ್ಲ ಎನ್ನಲಾಗುತ್ತಿದೆ. ಸದ್ಯ ಕಾಳಿ ನದಿಯಿಂದ ಆರು ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ದಾಂಡೇಲಿ ಆಸ್ಪತ್ರೆಗೆ ಶವಗಳನ್ನು ಸ್ಥಳಾಂತರ ಮಾಡಲಾಗಿದೆ. ದಾಂಡೇಲಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ 7ನೇ ಹೊಸಕೋಟೆಯಲ್ಲಿ ಘಟನೆ ನಡೆದಿದೆ. ಕೇರಳದ ಕಾಸರಗೋಡು ಮೂಲದ ರಬಿಯಾ ಮೃತ ಮಹಿಳೆ. ಮತ್ತಿಬ್ಬರು ಮಹಿಳೆಯರ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ: ಲವ್ ಜಿಹಾದ್: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಇಸ್ಲಾಂಗೆ ಮತಾಂತರಕ್ಕೆ ಯತ್ನ
ಸಂಬಂಧಿಕರ ಮದುವೆಗೆ ಬಂದಿದ್ದಾಗ ದುರಂತ ಸಂಭವಿಸಿದೆ. ಅತಿವೇಗವಾಗಿ ಬಂದು ಪಾದಚಾರಿಗಳಿಗೆ ಕಾರು ಡಿಕ್ಕಿ ಆಗಿದೆ. ಶರತ್ ಎಂಬುವವನಿಗೆ ಕಾರು ಸೇರಿದೆ. ಶುಂಠಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಳಗಾವಿ: ಕ್ರಿಮಿನಾಶಕ ಮಿಶ್ರಿತ ನೀರು ಸೇವಿಸಿ 2 ಹಸು ಸೇರಿದಂತೆ 5 ಆಡುಗಳು ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ನಡೆದಿದೆ. ಯಲ್ಲಪ್ಪ ಚಿನಗುಪ್ಪಿ ಎಂಬುವರಿಗೆ ಸೇರಿದ 2 ಹಸು ಹಾಗೂ ಆಡುಗಳು ನಡುರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟಿವೆ.
ಇದನ್ನೂ ಓದಿ: Cyber Crime: ಬೆಂಗಳೂರಿನಲ್ಲಿ ಷೇರು ಹೂಡಿಕೆ ನೆಪದಲ್ಲಿ ₹5.17 ಕೋಟಿ ವಂಚನೆ
ಕಬ್ಬಿಗೆ ಔಷಧಿ ಸಿಂಪಡಿಸಲು ನೀರಿನಲ್ಲಿ ಕ್ರಿಮಿನಾಶಕ ಬೆರೆಸಿಟ್ಟಿದ್ದರು. ಈ ವೇಳೆ ಕ್ರಿಮಿನಾಶಕ ಮಿಶ್ರಿತ ನೀರು ಸೇವಿಸಿವೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:48 pm, Sun, 21 April 24