ಉತ್ತರ ಕನ್ನಡ: ನೌಕಾನಲೆಯ ಲೇಬರ್ ಕಾಲೋನಿಯಲ್ಲಿ ಸಿಲಿಂಡರ್ ಸ್ಫೋಟ
ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮುದಗಾ ನೌಕಾನೆಲೆಯ ಕಾರ್ಮಿಕರ ಶೆಡ್ನಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡು ಮನೆಗಳಿಗೆ ಬೆಂಕಿ ತಗುಲಿದೆ. ನೌಕಾನೆಲೆಯ ಲೇಬರ್ ಕಾಲೋನಿಯಲ್ಲಿ 150 ಕ್ಕೂ ಅಧಿಕ ಶೆಡ್ಗಳಿವೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಶಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಕಾರವಾರ, ಮಾರ್ಚ್ 10: ಉತ್ತರ ಕನ್ನಡ (Uttar Kannada) ಜಿಲ್ಲೆಯ ಕಾರವಾರ (Karwar) ತಾಲೂಕಿನ ಮುದಗಾ ನೌಕಾನೆಲೆಯ (Naval base) ಎನ್‌ಸಿಸಿ ಗುತ್ತಿಗೆ ಕಂಪನಿ ಕಾರ್ಮಿಕರ ಶೆಡ್ನಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡು (Cylinder Blast) ಒಂದು ಸಾಲಿನ ನಾಲ್ಕೈದು ಶೆಡ್‌ಗಳಿಗೆ ಬೆಂಕಿ (Fire) ತಗುಲಿದೆ. ನೌಕಾನೆಲೆಯ ಲೇಬರ್ ಕಾಲೋನಿಯಲ್ಲಿ 150 ಕ್ಕೂ ಅಧಿಕ ಶೆಡ್ಗಳಿವೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಶಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಬಸವೇಶ್ವರನಗರದ ಗ್ಯಾರೇಜ್‌ನಲ್ಲಿ ಅಗ್ನಿಅವಘಡ
ಬೆಂಗಳೂರು: ನಗರದ ಬಸವೇಶ್ವರನಗರದ ಗ್ಯಾರೇಜ್‌ನಲ್ಲಿ ಶನಿವಾರ (ಮಾ.09)ರ ಸಂಜೆ ಅಗ್ನಿ ಅವಘಡ ಸಂಭವಿಸಿದ್ದು, ಗ್ಯಾರೇಜ್ ಮಾಲೀಕ ಜಾರ್ಜ್ ಹಾಗೂ ಕೆಲಸಗಾರ ಶಿವು ಸೇರಿದಂತೆ ನಾಲ್ವರಿಗೆ ಗಾಯಗಳಾಗಿದ್ದವು. ಜೊತೆಗೆ ಸ್ಫೋಟದಿಂದ ಎರಡು ಅಂತಸ್ತಿನ ಮನೆಗೂ ಹಾನಿಯಾಗಿದ್ದು, ಸ್ವಿಫ್ಟ್ ಡಿಸೈರ್ ಕಾರು, ದ್ವಿಚಕ್ರ ವಾಹನ ಸಂಪೂರ್ಣ ಹಾನಿಯಾಗಿತ್ತು.
ಘಟನೆಯಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ಇಬ್ಬರಿಗೆ ಗಾಯ
ಇನ್ನು ರಸ್ತೆಯಲ್ಲಿ ಹೋಗುತ್ತಿದ್ದ ಇಬ್ಬರಿಗೂ ಗಾಯವಾಗಿದೆ. ಘಟನೆ ಹಿನ್ನಲೆ ಗ್ಯಾರೇಜ್ ಪಕ್ಕದ ಮನೆ ಹಾಗೂ ನಿರ್ಮಾಣ ಹಂತದ ಕಟ್ಟಡಕ್ಕೂ ಹಾನಿಯಾಗಿದ್ದು, ಸ್ಥಳಕ್ಕೆ ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಕುರಿತು ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಚಾಮರಾಜನಗರ ವ್ಯಾಪ್ತಿಯಲ್ಲಿ ಕಾಡಿಗೆ ಬೆಂಕಿ: ಕಿಡಿಗೇಡಿಗಳು ಬೆಂಕಿ ಹಾಕಿರುವುದು ಮೇಲ್ನೊಟಕ್ಕೆ ಪತ್ತೆ
ವೆಲ್ಡಿಂಗ್ ಗ್ಯಾಸ್ ಟ್ಯಾಂಕ್ ಸ್ಫೋಟದಿಂದ ಘಟನೆ ಸಂಭವ ಸಾಧ್ಯತೆ
ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಮಾತನಾಡಿ, ‘ಸಂಜೆ ಆರು ಗಂಟೆ ಸುಮಾರಿಗೆ ಗ್ಯಾರೇಜ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೇಲ್ನೋಟಕ್ಕೆ ವೆಲ್ಡಿಂಗ್ ಗ್ಯಾಸ್ ಟ್ಯಾಂಕ್ ಸ್ಫೋಟದಿಂದ ಘಟನೆ ಸಂಭವಿಸಿರುವ ಸಾದ್ಯತೆ ಇದೆ. ಘಟನೆಯಲ್ಲಿ ಗ್ಯಾರೇಜ್ ಮಾಲೀಕ ಹಾಗೂ ಕೆಲಸಗಾರ ಹಾಗೂ ಇಬ್ಬರು ಪಬ್ಲಿಕ್ಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡಿರುವ ವ್ಯಕ್ತಿಗಳನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡಿರುವ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಫೋಟದ ತೀವ್ರದ ಗ್ಯಾರೇಜ್ ಸುತ್ತಮುತ್ತ ಇರುವ ಮನೆಗಳ ಗ್ಲಾಸ್ಗಳು ಜಕ್ಕಂ ಆಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮಾಡಲಾಗುತ್ತದೆ ಎಂದು ಹೇಳಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:54 am, Sun, 10 March 24