AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಂಡೇಲಿ ಮನೆಯಲ್ಲಿ ಕಂತೆ ಕಂತೆ ನಕಲಿ ನೋಟು ಪತ್ತೆ ಪ್ರಕರಣ: ಉತ್ತರ ಪ್ರದೇಶದ ಲಖನೌನಲ್ಲಿ ಆರೋಪಿಯ ಬಂಧನ

ದಾಂಡೇಲಿಯ ಗಾಂಧಿನಗರದಲ್ಲಿ ಪತ್ತೆಯಾದ 14 ಕೋಟಿ ರೂಪಾಯಿಗಳ ನಕಲಿ ನೋಟುಗಳ ಪ್ರಕರಣದ ಆರೋಪಿಯನ್ನು ಉತ್ತರ ಪ್ರದೇಶದ ಲಖನೌನಲ್ಲಿ ಬಂಧಿಸಲಾಗಿದೆ. ಆರೋಪಿ ಅರ್ಷದ್ ಅಂಜುಂ ಖಾನ್ ಗೋವಾ ಮತ್ತು ಹೈದರಾಬಾದ್‌ನಲ್ಲಿದ್ದೇನೆ ಎಂದು ಪೊಲೀಸರನ್ನು ಯಾಮಾರಿಸಿದ್ದ. ಆದರೆ ಮೊಬೈಲ್ ಟವರ್ ಲೊಕೇಶನ್‌ ಮೂಲಕ ಆತನನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ. ಪೊಲೀಸರು ಸದ್ಯ ಆರೋಪಿಯನ್ನು ವಿಚಾರಣೆಗೆ ಒಳಪಡಿಸುತ್ತಿದ್ದಾರೆ.

ದಾಂಡೇಲಿ ಮನೆಯಲ್ಲಿ ಕಂತೆ ಕಂತೆ ನಕಲಿ ನೋಟು ಪತ್ತೆ ಪ್ರಕರಣ: ಉತ್ತರ ಪ್ರದೇಶದ ಲಖನೌನಲ್ಲಿ ಆರೋಪಿಯ ಬಂಧನ
ದಾಂಡೇಲಿಯ ನಿವಾಸದಲ್ಲಿ ಪತ್ತೆಯಾಗಿದ್ದ ನಕಲಿ ನೋಟಿನ ಬಂಡಲ್​ಗಳು
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Apr 18, 2025 | 10:28 AM

Share

ಕಾರವಾರ, ಏಪ್ರಿಲ್ 18: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ (Dandeli) ಗಾಂಧಿನಗರ ಬಡಾವಣೆಯ ಮನೆ ಒಂದರಲ್ಲಿ ಕಂತೆ ಕಂತೆ ನಕಲಿ ಕರೆನ್ಸಿ ನೋಟುಗಳು (Fake Currency Notes) ಪತ್ತೆಯಾದ ಪ್ರಕರಣ ಸಂಬಂಧ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಗೋವಾ, ಹೈದರಾಬಾದ್ ಎಂದು ಪೊಲೀಸರನ್ನು ಯಾಮಾರಿಸಿದ್ದ ಆರೋಪಿ ಅರ್ಷದ್ ಅಂಜುಂ ಖಾನ್‌ನನ್ನು ಉತ್ತರ ಪ್ರದೇಶದ ಲಖನೌನಲ್ಲಿ ಬಂಧಿಸಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಿ ಉತ್ತರ ಕನ್ನಡಕ್ಕೆ ಕರೆತಂದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಮನೆಯಲ್ಲಿ ನಕಲಿ ನೋಟುಗಳ ಪತ್ತೆಯಾದ 10 ದಿನಗಳ ಬಳಿಕ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆರಂಭದಲ್ಲಿ, ನಕಲಿ ನೋಟಿನ ಕಂತೆಗಳ ಮೇಲೆ, ‘ಮೂವಿ ಪರ್ಪಸ್ ಓನ್ಲಿ’ ಎಂದು ಬರೆದಿದ್ದರಿಂದ ಪೊಲೀಸರು ಸುಮ್ಮನಾಗಿದ್ದರು. ಆದರೆ ಆರೋಪಿ ಹೈದರಾಬಾದ್‌ನಲ್ಲಿದ್ದೇನೆ, ಗೋವಾದಲ್ಲಿದ್ದೇನೆ ಎಂದು ಯಾಮಾರಿಸಿದ್ದರಿಂದ ಅನುಮಾನ ಹೆಚ್ಚಾಗಿತ್ತು.

ನಂತರ ಆರೋಪಿಯ ಮೊಬೈಲ್ ಟವರ್ ಲೊಕೇಶನ್ ಹಾಗೂ ತಾಂತ್ರಿಕ ಸಹಾಯದ ಮೂಲಕ ಆತನನ್ನು ಪೊಲೀಸರು ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ
Image
ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ಕೋಲಾಹಲ: ಇಲ್ಲಿದೆ ಇನ್​ಸೈಡ್ ಡಿಟೇಲ್ಸ್
Image
ಜಾತಿ ಸಂಖ್ಯೆಯಲ್ಲಿ ಸಾಕಷ್ಟು ವ್ಯತ್ಯಾಸ: ಜಾತಿ ಗಣತಿಯಲ್ಲಿ ಒಳಪಂಗಡ ಗೊಂದಲ
Image
ಸಚಿವ ರಾಮಲಿಂಗಾರೆಡ್ಡಿ ಸಂಧಾನ ಸಭೆ ಸಕ್ಸಸ್​: ಲಾರಿ ಮಾಲೀಕರ ಮುಷ್ಕರ ವಾಪಸ್​
Image
ದಾಂಡೇಲಿ ಮನೆಯಲ್ಲಿ 14 ಕೋಟಿ ರೂ. ನಕಲಿ ನೋಟು: ಪೊಲೀಸರೇ ಶಾಕ್

ಆರೋಪಿಯನ್ನು ಸದ್ಯ ದಾಂಡೇಲಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದು, ಇದಕ್ಕೆ ನ್ಯಾಯಾಲಯ ಸಮ್ಮತಿ ಸೂಚಿಸಿದೆ. ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಯ ವಿಚಾರಣೆ ತೀವ್ರಗೊಳಿಸಲಾಗಿದ್ದು, ನಕಲಿ ನೋಟಿನ ಹಿಂದಿನ ಅಸಲಿ ಕಾರಣ ತಿಳಿಯಬೇಕಿದೆ.

ಪ್ರಕರಣದ ಹಿನ್ನೆಲೆ

ಗಾಂಧಿನಗರದ ನೂರಜಾನ್ ಜುಂಜುವಾಡ್ಕರ ಎಂಬವವರ ಮನೆಯಲ್ಲಿ ಅರ್ಷದ್ ಬಾಡಿಗೆಗೆ ವಾಸವಾಗಿದ್ದ. ಕಳೆದ ಒಂದು ತಿಂಗಳಿನಿಂದ ಈತ ಆ ಮನೆಯಲ್ಲಿ ಇಲ್ಲದೇ ಇರುವುದನ್ನು ಗಮನಿಸಿ ಮತ್ತು ಆ ಮನೆಯ ಹಿಂಬದಿಯ ಬಾಗಿಲ ಚಿಲಕ ಸರಿ ಹಾಕದೇ ಇರುವುದನ್ನು ತಿಳಿದು, ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದರು. ದಾಂಡೇಲಿ ನಗರ ಠಾಣೆಯ ಪೊಲೀಸರು ಮನೆಗೆ ಬಂದು ಬಾಗಿಲು ತೆರೆಯುತ್ತಿದ್ದಂತೆಯೇ, 500 ರೂ. ಮುಖ ಬೆಲೆಯ ಕಂತೆ ಕಂತೆ ನೋಟುಗಳು ಕಾಣಿಸಿದ್ದವು.

ಇದನ್ನೂ ಓದಿ: ದಾಂಡೇಲಿ ಮನೆಯಲ್ಲಿತ್ತು 14 ಕೋಟಿ ರೂ. ನಕಲಿ ನೋಟು: ರಾಶಿ ರಾಶಿ ಕರೆನ್ಸಿ ನೋಡಿ ಪೊಲೀಸರೇ ಶಾಕ್

ಸುಮಾರು 14 ಕೋಟಿ ರೂಪಾಯಿಗೂ ಹೆಚ್ಚು ಮುಖಬೆಲೆಯ ನಕಲಿ ನೋಟುಗಳು ಕಾಣಿಸಿದ್ದವು. ಅವುಗಳ ಬಂಡಲ್ ಮೇಲೆ ‘ಮೂವಿ ಪರ್ಪಸ್ ಓನ್ಲಿ’ ಎಂದು ಬರೆದಿತ್ತು. ನಂತರ ಅರ್ಷದ್​ಗೆ ಕರೆ ಮಾಡಿ ಪೊಲೀಸರು ವಿಚಾರಿಸಿದ್ದರು. ಆಗ ಆತ, ಗೋವಾದಲ್ಲಿ ಇದ್ದು ಬರುವುದಾಗಿ ಮಾಹಿತಿ ನೀಡಿದ್ದ. ಆದರೆ, ಆತ ಯಾಮಾರಿಸುತ್ತಿದ್ದಾನೆ ಎಂಬುದು ಅರಿವಾದ ಕೂಡಲೇ ಪೊಲೀಸರು ಮೊಬೈಲ್ ಟವರ್ ಲೊಕೇಶನ್ ಟ್ರೇಸ್ ಮಾಡಿದ್ದಾರೆ. ಆಗ ಆರೋಪಿ ಲಖನೌನಲ್ಲಿರುವುದು ಗೊತ್ತಾಗಿದ್ದು, ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ