AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡವರ ಹತ್ತಿರ ಹಣ ಸುಲಿಗೆ ಮಾಡಿದ್ರೆ ಕೈ-ಕಾಲು ಮುರಿಯುತ್ತೇನೆ: ವೈದ್ಯರಿಗೆ ಚಳಿ ಬಿಡಿಸಿದ ಶಾಸಕ ದೇಶಪಾಂಡೆ

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಇಂದು ನಡೆದ ತಾಲೂಕು ಆರೋಗ್ಯ ರಕ್ಷ ಸಮಿತಿ ಸಭೆಯಲ್ಲಿ ಶಾಸಕ ಆರ್​​ವಿ ದೇಶಪಾಂಡೆ ಗರಂ ಆದರು. ಇನ್ಮುಂದೆ ಬಡವರ ಹತ್ತಿರ ಹಣ ಸುಲಿಗೆ ಮಾಡಿದರೆ ಹುಷಾರ್​​ ಎಂದು ಹೆರಿಗೆ ಆಸ್ಪತ್ರೆ ವೈದ್ಯರಿಗೆ ಖಡಕ್​​ ಎಚ್ಚರಿಕೆ ನೀಡಿದ್ದಾರೆ.

ಬಡವರ ಹತ್ತಿರ ಹಣ ಸುಲಿಗೆ ಮಾಡಿದ್ರೆ ಕೈ-ಕಾಲು ಮುರಿಯುತ್ತೇನೆ: ವೈದ್ಯರಿಗೆ ಚಳಿ ಬಿಡಿಸಿದ ಶಾಸಕ ದೇಶಪಾಂಡೆ
ಶಾಸಕ ಆರ್.ವಿ.ದೇಶಪಾಂಡೆImage Credit source: tv9 kannada
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Mar 20, 2026 | 9:15 PM

Share

ಕಾರವಾರ, ಮಾರ್ಚ್​ 20: ಹೆರಿಗೆ ಆಸ್ಪತ್ರೆಯಲ್ಲಿ ಬಡವರ ಹತ್ತಿರ ಹಣ ಸುಲಿಗೆ ಮಾಡಿದರೆ ಕೈಕಾಲು ಮುರಿಯುತ್ತೇನೆ. ನನ್ಮೇಲೆ ಕ್ರಿಮಿನಲ್ ಕೇಸ್​ ಆದರೂ ಪರವಾಗಿಲ್ಲ ಎಂದು ಶಾಸಕ ಆರ್​​ವಿ ದೇಶಪಾಂಡೆ (R. V. Deshpande) ವೈದ್ಯರಿಗೆ ಖಡಕ್​​ ಎಚ್ಚರಿಕೆ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದ ತಾಲೂಕು ಆರೋಗ್ಯ ರಕ್ಷ ಸಮಿತಿ ಸಭೆಯಲ್ಲಿ ವೈದ್ಯರಾದ ಡಾ.ಅಖಿಲ್ ಕಿತ್ತೂರು​​ ಮತ್ತು ಡಾ.ಕೀರ್ತಿಗೆ ತರಾಟೆ ತೆಗೆದುಕೊಂಡಿದ್ದಾರೆ.

ವೈದ್ಯರ ಚಳಿ ಬಿಡಿಸಿದ ಶಾಸಕ ಆರ್​​ವಿ ದೇಶಪಾಂಡೆ

ಹೆರಿಗೆ ಮಾಡಿದರೆ ಯಾಕೆ ಹಣ ಪಡೆಯುತ್ತೀರಿ ಎಂದು ಸಭೆಯಲ್ಲಿ ಶಾಸಕ ಆರ್​​ವಿ ದೇಶಪಾಂಡೆ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಉತ್ತರಿಸಿದ ವೈದರು ನಾವು ಯಾರಿಂದಲೂ ಕೇಳಿ ಪಡೆಯುತ್ತಿಲ್ಲ. ಅವರೇ ಖುಷಿಯಿಂದ ಕೊಟ್ಟರಷ್ಟೇ ತಗೋತೇವೆ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿಕೆ ಶಿವಕುಮಾರ್​​ ಎಚ್ಚರಿಕೆ

ವೈದ್ಯರ ಮಾತಿಗೆ ಕೆಂಡಾಮಂಡಲರಾದ ಶಾಸಕ ದೇಶಪಾಂಡೆ, ಏನು ನಿಮ್ಮ ಮಾತಿನ ಅರ್ಥ. ಯಾರ ಬಳಿ ಕೇಳಲ್ಲ, ಕೊಟ್ಟಷ್ಟು ತಗೋತೀವಿ ಅಂದರೆ ಏನರ್ಥ. ಮಾನ ಮರ್ಯಾದೆ ಇಲ್ವಾ ನಿಮಗೆ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ. ಇದುವರೆಗೆ ಪಡೆದ ಹಣದ ಮಾಹಿತಿ ಪಡೆಯುವಂತೆ ತಹಶೀಲ್ದಾರ್​​ಗೆ ನಿರ್ದೇಶಿಸಿದ್ದಾರೆ.

ನಾನೇನು ಮಂತ್ರಿ ಸ್ಥಾನಕ್ಕೆ ಅಪೇಕ್ಷೆ ಇಟ್ಟಿಲ್ಲ ಎಂದ ಶಾಸಕ ಆರ್​​ವಿ ದೇಶಪಾಂಡೆ 

ಮಂತ್ರಿ ಸ್ಥಾನದ ವಿಚಾರವಾಗಿ ಮಾತನಾಡಿದ ಅವರು, ಹೊಸ ಶಾಸಕರು ಮಂತ್ರಿ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ. ಎಲ್ಲರಿಗೂ ಮಂತ್ರಿ ಆಗಬೇಕೆಂಬ ಆಸೆ ಇರುವುದು ಸಹಜ. ಮಂತ್ರಿ ಆಗಬೇಕಂತ ನನಗೆ ಅತಿ ಆಸೆ ಇಲ್ಲ. ಅವರಿಗೆ ಬೇಕಾದರೆ ನನ್ನನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಿ. 9 ಬಾರಿ ಶಾಸಕನಾಗಿ, ಸಚಿವನಾಗಿ ಕೆಲಸ ಮಾಡಿದ್ದೇನೆ. ಏಳೆಂಟು ಮುಖ್ಯಮಂತ್ರಿಗಳ ಜೊತೆ ಕೆಲಸ ಮಾಡಿದ್ದೇನೆ. ಮಂತ್ರಿ ಮಾಡಿ ಅಂತ ನಾನ್ಯಾರಿಗೂ ಕೇಳಲ್ಲ ಎಂದಿದ್ದಾರೆ.

ಇದನ್ನೂ ಓದಿ: ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್​​: ಟಿಕೆಟ್​​ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಕೆಗೆ ಮುಂದಾದ ಸಚಿವರ ಪುತ್ರ!

ಸಿಎಂ ಸಿದ್ದರಾಮಯ್ಯ ನನಗಿಂತ ವಯಸ್ಸಿನಲ್ಲಿ ಚಿಕ್ಕವರು. ಅವರು ನನ್ನ ತಮ್ಮನಿದ್ದಂತೆ. ಸಚಿವರು ಹಾಗೂ ಅಧಿಕಾರಿಗಳು ಗೌರವದಿಂದ ಕಾಣುತ್ತಾರೆ. ನನ್ನ ಕ್ಷೇತ್ರಕ್ಕೆ ಬೇಕಾಗಿರುವ ಎಲ್ಲ ಕೆಲಸಗಳು ಆಗುತ್ತಿವೆ. ಹೀಗಾಗಿ ನಾನೇನು ಮಂತ್ರಿ ಸ್ಥಾನಕ್ಕೆ ಅಪೇಕ್ಷೆ ಇಟ್ಟಿಲ್ಲ ಎಂದು ಶಾಸಕ ಆರ್​​ವಿ ದೇಶಪಾಂಡೆ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:14 pm, Fri, 20 March 26

Follow Us