ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಉತ್ತರ ಕನ್ನಡ ಡಿಸಿ ಮುಲೈ ಮುಹಿಲನ್​ ಸ್ಥಳ ಪರಿಶೀಲನೆ

ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್​​ ಕುಮಟಾ ಪಟ್ಟಣದ ವಿವಿಧೆಡೆ ಸ್ಥಳ ಪರಿಶೀಲನೆ ಮಾಡಿದರು.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಉತ್ತರ ಕನ್ನಡ ಡಿಸಿ ಮುಲೈ ಮುಹಿಲನ್​ ಸ್ಥಳ ಪರಿಶೀಲನೆ
ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Sep 20, 2022 | 3:10 PM

ಕಾರವಾರ: ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಸರ್ಕಾರವು ತಾತ್ವಿಕ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್​​ ಕುಮಟಾ ಪಟ್ಟಣದ ವಿವಿಧೆಡೆ ಸ್ಥಳ ಪರಿಶೀಲನೆ ಮಾಡಿದರು. ಕುಮಟಾದ ರೈಲ್ವೆ ನಿಲ್ದಾಣ ಪ್ರದೇಶ, ಮಿರ್ಜಾನ್ ಗ್ರಾಮ, ಕೊಂಕಣ ಎಜುಕೇಷನ್ ಸಂಸ್ಥೆಯ ಸುತ್ತಮುತ್ತ ಡಿಸಿ ಭೇಟಿ ನೀಡಿದ್ದರು. ಮಂಗಳೂರಿನ ಕೆ.ಎಸ್.ಹೆಗಡೆ ಆಸ್ಪತ್ರೆಯ ಹಿರಿಯ ಅಧಿಕಾರಿಗಳು ಜಿಲ್ಲಾಧಿಕಾರಿಯೊಂದಿಗೆ ಇದ್ದರು. ಸ್ಥಳ ಪರಿಶೀಲನೆ ಬಳಿಕ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿ ಕೆಲ ಹೊತ್ತು ಚರ್ಚಿಸಿದರು.

ಬೆಂಗಳೂರಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಾಸಕರು ಮತ್ತು ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ್ದ ಡಾ ಕೆ.ಸುಧಾಕರ್, ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವ ಪ್ರಸ್ತಾವದ ಕಡತವು ಇದೀಗ ಅರ್ಥಿಕ ಇಲಾಖೆಗೆ ಹೋಗಿದೆ. ಆಸ್ಪತ್ರೆಯನ್ನು ಎಲ್ಲಿ ನಿರ್ಮಿಸಬೇಕು ಎನ್ನುವ ತೀರ್ಮಾನ ಇನ್ನೂ ಅಂತಿಮಗೊಂಡಿಲ್ಲ. ಅಧಿವೇಶನ ಮುಗಿದ ಬಳಿಕ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಮಾಡಿ ಸ್ಥಳ ಆಯ್ಕೆ ಮಾಡಲಾಗುವುದು ಎಂದರು. ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವ ಜೊತೆಗೆ ಕಾರವಾರದ ವೈದ್ಯಕೀಯ ಕಾಲೇಜನ್ನು ಮೇಲ್ದರ್ಜೆಗೆ ಏರಿಸಬೇಕೆಂಬ ಬೇಡಿಕೆಯಿದೆ. ಖುದ್ದು ಪರಿಶೀಲನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸುಧಾಕರ್ ಹೇಳಿದರು.

ಸಭೆಯ ಬಳಿಕ ಮಾತನಾಡಿದ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸಪೂಜಾರಿ, ‘ಸಭೆಯು ಫಲಪ್ರದವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆ ಶೀಘ್ರ ಈಡೇರಲಿದೆ’ ಎಂದು ಹೇಳಿದ್ದರು. ಬೆಂಗಳೂರಿನಲ್ಲಿ ನಡೆದಿದ್ದ ಸಭೆಯಲ್ಲಿ ಸಚಿವ ಶಿವರಾಮ ಹೆಬ್ಬಾರ್, ಶಾಸಕರಾದ ದಿನಕರ ಶೆಟ್ಟಿ, ರೂಪಾಲಿ ನಾಯ್ಕ್, ಗಣಪತಿ ಉಳವೇಕರ್, ಶಾಂತರಾಮ ಸಿದ್ದಿ, ಆರೋಗ್ಯ ಇಲಾಖೆ ಆಯುಕ್ತ ರಣದೀಪ್, ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಉತ್ತರ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ ಶರದ್ ನಾಯಕ್, ಕಾರವಾರ ವೈದ್ಯಕೀಯ ಕಾಲೇಜು ನಿರ್ದೇಶಕ ಡಾ ಗಜನಾನನ ನಾಯಕ್ ಮತ್ತಿತರರು ಪಾಲ್ಗೊಂಡಿದ್ದರು.

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್