ಮಾಜಿ ಸಂಸದ ಅನಂತ ಕುಮಾರ್ ಹೆಗಡೆಗೆ ಜೀವ ಬೆದರಿಕೆ ಸಂದೇಶ

ಮಾಜಿ ಸಂಸದ ಅನಂತ ಕುಮಾರ್ ಹೆಗಡೆಯವರಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದೆ. ಈ ಬಗ್ಗೆ ಅವರ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿಯವರು ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜೂನ್ 24 ರಂದು ಬಂದ ಈ ಇ-ಮೇಲ್ ಬೆದರಿಕೆಯ ಕುರಿತು ನ್ಯಾಯಾಲಯದ ಅನುಮತಿ ಪಡೆದು ದೂರು ದಾಖಲಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮಾಜಿ ಸಂಸದ ಅನಂತ ಕುಮಾರ್ ಹೆಗಡೆಗೆ ಜೀವ ಬೆದರಿಕೆ ಸಂದೇಶ
ಮಾಜಿ ಸಂಸದ ಅನಂತ ಕುಮಾರ್ ಹೆಗಡೆ
Updated By: ವಿವೇಕ ಬಿರಾದಾರ

Updated on: Jul 18, 2025 | 6:39 PM

ಕಾರವಾರ, ಜುಲೈ 18: ಮಾಜಿ ಸಂಸದ ಅನಂತ ಕುಮಾರ್ ಹೆಗಡೆಗೆ (Ananth Kumar Hegde) ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದೆ. ಈ ಬಗ್ಗೆ ಅನಂತ ಕುಮಾರ್ ಹೆಗಡೆ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿಯವರು ಶಿರಸಿ (Sirasi) ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜೂನ್ 24ರಂದು ಅನಂತ ಕುಮಾರ್ ಹೆಗಡೆ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಸಂದೇಶ ಬಂದಿತ್ತು. ನ್ಯಾಯಾಲಯದ ಅನುಮತಿ ಮೇರೆಗೆ ಶುಕ್ರವಾರ (ಜು.18) ದೂರು ದಾಖಲಿಸಲಾಗಿದೆ. ಕೇಸ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅನಂತ ಕುಮಾರ್ ಹೆಗಡೆ ಅವರಿಗೆ ಈ ಹಿಂದೆ ಸಹ ಜೀವ ಬೆದರಿಕೆ ಸಂದೇಶ ಬಂದಿತ್ತು.

ಈ ಹಿಂದೆಯೂ ಬಂದಿತ್ತು ಜೀವ ಬೆದರಿಕೆ ಸಂದೇಶ

ಈ ಹಿಂದೆ ಅಪರಿಚಿತ ವ್ಯಕ್ತಿಯೋರ್ವ ಅನಂತ ಕಮಾರ್ ಹೆಗಡೆ ಅವರಿಗೆ ತಡರಾತ್ರಿ 2 ಗಂಟೆ ಸುಮಾರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದನು. “ನೀನು ಅನಂತ ಕುಮಾರ ಹೆಗಡೆ, ಬಿಜೆಪಿ ಪಕ್ಷದ ಸಂಸದ.. ಹೌದು ತಾನೆ? ನಾನು ಹಿಂದಿನ‌ ಬಾರಿ ಕರೆ ಮಾಡಿದ್ದಾಗ ಪೊಲೀಸ್​ ಠಾಣೆಗೆ ಹೋಗಿ ದೂರು ನೀಡಿದ್ದೆ. ಈ ಬಾರಿ ಏನು ಮಾಡುತ್ತೀಯಾ? ನೀನು ಪೊಲೀಸರಿಗೆ ದೂರು ನೀಡಿದ್ದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು,’ ಎಂದು ಉರ್ದು ಮಿಶ್ರಿತ ಹಿಂದಿಯಲ್ಲಿ ಮಾತನಾಡಿ ಜೀವ ಬೆದರಿಕೆ ಹಾಕಿದ್ದನು.

ಇದನ್ನೂ ಓದಿ: ಗಲಾಟೆ-ಹಲ್ಲೆ ಆರೋಪ, ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ, ಗನ್​ಮ್ಯಾನ್, ಚಾಲಕನ ವಿರುದ್ಧ ಎಫ್​ಐಆರ್

“ಸಂಸದರನ್ನು ಸುಮ್ಮನೆ ಬಿಡುವುದಿಲ್ಲ ಅಂತ ಬೆದರಿಕೆ ಹಾಕಿದ್ದಾನಂತೆ. ‘ಈ ಬಾರಿ ನಾನು ನಿನ್ನನ್ನು ಏನು ಮಾಡುತ್ತೇನೆ ನೋಡ್ತಾ ಇರು, ನಿನ್ನನ್ನು ಸುಮ್ಮನೆ ಬಿಡಲ್ಲ,’ ಎಂದು ಈ ಅಪರಿಚಿತ ವ್ಯಕ್ತಿ ಬೆದರಿಕೆ ನೀಡಿದ್ದನು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:37 pm, Fri, 18 July 25