ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಕುರಿತು ಆರೋಗ್ಯ ಸಚಿವ ಡಾ‌.ಸುಧಾಕರ್ ಜೊತೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತುಕತೆ ನಡೆಸಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಶೀಘ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸ್ಪೀಕರ್ ಕಾಗೇರಿಗೆ ಆರೋಗ್ಯ ಸಚಿವ ಸುಧಾಕರ್ ಭರವಸೆ
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 24, 2022 | 11:57 AM

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಗೆ ಕನಿಷ್ಠ ಎರಡು ಮಲ್ಟಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ (Multi Speciality Hospital for Uttara Kannada District) ಬೇಕು ಎಂದು ಸಾರ್ವಜನಿಕರು ನಡೆಸುತ್ತಿರುವ ಆಂದೋಲನವನ್ನು ಸರ್ಕಾರವಾಗಿ ಪರಿಗಣಿಸಿದೆ. ಆಸ್ಪತ್ರೆ ನಿರ್ಮಾಣದ ಕುರಿತು ಆರೋಗ್ಯ ಸಚಿವ ಡಾ‌.ಸುಧಾಕರ್ ಜೊತೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತುಕತೆ ನಡೆಸಿದರು. ‘ಉತ್ತರ ಕನ್ನಡ ಜನರ ಅಗತ್ಯಗಳ ಬಗ್ಗೆ ಮಾಹಿತಿಯಿದೆ. ಈ ಕುರಿತು ಮುಖ್ಯಮಂತ್ರಿ ಜೊತೆಗೆ ಚರ್ಚಿಸಿ, ಇದನ್ನು ವಿಶೇಷ ಮತ್ತು ಅತ್ಯಗತ್ಯ ಪ್ರಕರಣವೆಂದು ಪರಿಗಣಿಸಿ ಆಸ್ಪತ್ರೆ ನಿರ್ಮಿಸಲು ಪ್ರಯತ್ನ ನಡೆಸುತ್ತೇನೆ’ ಎಂದು ಸಚಿವ ಸುಧಾಕರ್ ಭರವಸೆ ನೀಡಿದರು.

ಹೋರಾಟ ಚುರುಕು

ಸುಸಜ್ಜಿತ ಆಸ್ಪತ್ರೆಗಾಗಿ ಜನರು ನಡೆಸುತ್ತಿರುವ ಹಕ್ಕೊತ್ತಾಯದ ಭಾಗವಾಗಿ ಅಗಸ್ಟ್ 1ರಿಂದ ರಕ್ತದಲ್ಲಿ ಪತ್ರ ಬರೆಯುವ ಅಭಿಯಾನವನ್ನು ಉತ್ತರ ಕನ್ನಡ ಜಿಲ್ಲೆಯ ಜನರು ಆರಂಭಿಸಲಿದ್ದಾರೆ. ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದು ಅಭಿಯಾನ ಶುರುಮಾಡಲು ಕಾರವಾರ ನಿವಾಸಿಗಳೂ ಸೇರಿದಂತೆ ಜಿಲ್ಲೆಯ ಜನರು ಮುಂದಾಗಿದ್ದಾರೆ. ಭೌಗೋಳಿಕವಾಗಿ ಬಹು ವಿಸ್ತಾರವಾಗಿರುವ ಜಿಲ್ಲೆಯಲ್ಲಿ ಒಂದೇ ಒಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಇಲ್ಲ. ಇದೇ ಕಾರಣಕ್ಕೆ ತುರ್ತು ಸಂದರ್ಭದಲ್ಲಿ ಚಿಕಿತ್ಸೆಗಾಗಿ ದೂರದ ಉಡುಪಿ, ಮಂಗಳೂರು, ಹುಬ್ಬಳ್ಳಿ, ಗೋವಾಕ್ಕೆ ಹೋಗಬೇಕಾದ ಪರಿಸ್ಥಿತಿ ಬಂದಿದೆ. ಕಳೆದ ಜುಲೈ 20 ರಂದು ಸಂಭವಿಸಿದ ಆಂಬುಲೆನ್ಸ್ ಅಪಘಾತದಲ್ಲಿ ಹೊನ್ನಾವರದ ನಾಲ್ವರು ಸಾವನ್ನಪ್ಪಿದ್ದರು.

ಈ ಘಟನೆಯ ನಂತರ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ಬೇಕು ಎನ್ನುವ ಕೂಗು ಪ್ರಬಲವಾಗಿತ್ತು. ಇದೀಗ ಹೋರಾಟ ಸಂಘಟಿತ ರೂಪ ಪಡೆದುಕೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಮಲ್ಪಿ ಸ್ಪಷಾಲಿಟಿ ಆಸ್ಪತ್ರೆ ಸ್ಥಾಪನೆಯಾಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಜನರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಜನರು ಘಟ್ಟದ ಮೇಲಿನ ತಾಲ್ಲೂಕುಗಳಾದ ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡು, ಹಳಿಯಾಳಗಳಿಗೆ ಸೇರಿದಂತೆ ಒಂದು ಆಸ್ಪತ್ರೆ. ಘಟ್ಟದ ಕೆಳಗಿನ ತಾಲ್ಲೂಕುಗಳಾದ ಕುಮಟ, ಹೊನ್ನಾವರ, ಅಂಕೋಲ, ಭಟ್ಕಳ, ಕಾರವಾರ, ಜೋಯಿಡಾಕ್ಕೆ ಸೇರಿದಂತೆ ಮತ್ತೊಂದು ಆಸ್ಪತ್ರೆ ಸ್ಥಾಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ಟ್ವಟರ್ ಅಭಿಯಾನದಲ್ಲಿ ನೀವೂ ಪಾಲ್ಗೊಳ್ಳಿ

ಉತ್ತರ ಕನ್ನಡ ಜಿಲ್ಲೆಗೆ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂದು ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಿರುವ ಹಲವರು ಟ್ವಿಟರ್ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಜನರಿಗೆ ಮನವಿ ಮಾಡಿದ್ದಾರೆ. ಜುಲೈ 24ರ ಭಾನುವಾರ ಟ್ವಿಟರ್ ಅಭಿಯಾನ ನಡೆಯಲಿದೆ.

ಇದು ಜನಸಾಮಾನ್ಯರೇ ರೂಪಿಸುತ್ತಿರುವ ಅಭಿಯಾನ. ಇದಲ್ಲಿ ಪಾಲ್ಗೊಳ್ಳಲು ನೀವು ಮಾಡಬೇಕಾದ್ದು ಇಷ್ಟೇ. #WeNeedEmergencyHospitalInUttaraKannada ಮತ್ತು #NoHospitalNoVote ಈ ಎರಡು ಹ್ಯಾಷ್​ಟ್ಯಾಗ್​ಗಳನ್ನು ಬಳಸಿ ಉತ್ತರ ಕನ್ನಡಕ್ಕೆ ಸುಸಜ್ಜಿತ ಆಸ್ಪತ್ರೆ ಏಕೆ ಬೇಕು ಎಂದು ನಿಮ್ಮ ಅಭಿಪ್ರಾಯ ಟ್ವೀಟ್ ಮಾಡಿ. ಟ್ವೀಟ್ ಮಾಡುವಾಗ @PMOIndia @narendramodi @AmitShah @mansukhmandviya @CmofKarnataka @Mla_sudhakar ಈ ಟ್ವಿಟರ್​ ಹ್ಯಾಂಡಲ್​ಗಳನ್ನು ಟ್ಯಾಗ್ ಮಾಡಲು ಹೋರಾಟಗಾರರು ವಿನಂತಿಸಿದ್ದಾರೆ.

Published On - 11:57 am, Sun, 24 July 22

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ