AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಕರ್ಣ ಮಹಾಬಲೇಶ್ವರನ ದರ್ಶನಕ್ಕೆ ಮೂಗು ಮುಚ್ಚಿಕೊಂಡೇ ಹೋಗಬೇಕಾದ ಸ್ಥಿತಿ: ಭಕ್ತರ ಗೋಳು ಕೇಳುವವರೇ ಇಲ್ಲ

ದಕ್ಷಿಣಕಾಶಿ ಖ್ಯಾತಿಯ ಪುರಾಣಪ್ರಸಿದ್ಧ ಪುಣ್ಯಕ್ಷೇತ್ರ ಗೋಕರ್ಣ. ಪ್ರತಿನಿತ್ಯ ವಿವಿಧೆಡೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆತ್ಮಲಿಂಗದ ದರ್ಶನಕ್ಕೆಂದೇ ಮಹಾಬಲೇಶ್ವರನ ಕ್ಷೇತ್ರಕ್ಕೆ ಆಗಮಿಸುತ್ತಾರೆ. ಪ್ರವಾಸಿತಾಣವಾಗಿಯೂ ಪ್ರಸಿದ್ಧಿ ಹೊಂದಿರುವ ಗೋಕರ್ಣದಲ್ಲಿ ಭಕ್ತರು ಸಮುದ್ರಸ್ನಾನ ಮಾಡಿ ದೇವಸ್ಥಾನಕ್ಕೆ ತೆರಳಬೇಕಿದ್ದರೆ ಮೂಗು ಮುಚ್ಚಿಕೊಂಡೇ ಹೋಗಬೇಕಾದ ಸ್ಥಿತಿ ಇದೆ. ಹೇಳಿಕೊಳ್ಳಲು ಸುಪ್ರಸಿದ್ಧ ತಾಣವಾಗಿದ್ದರೂ ಸ್ವಚ್ಛತೆ ಇಲ್ಲದಿರುವುದು ಈ ಕ್ಷೇತ್ರಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಿದೆ.

ಗೋಕರ್ಣ ಮಹಾಬಲೇಶ್ವರನ ದರ್ಶನಕ್ಕೆ ಮೂಗು ಮುಚ್ಚಿಕೊಂಡೇ ಹೋಗಬೇಕಾದ ಸ್ಥಿತಿ: ಭಕ್ತರ ಗೋಳು ಕೇಳುವವರೇ ಇಲ್ಲ
ಸಮುದ್ರ ಬದಿಯಿಂದ ಗೋಕರ್ಣ ಮಹಾಬಲೇಶ್ವರನ ದರ್ಶನಕ್ಕೆ ತೆರಳುವ ಬೀದಿ ಹಾಗೂ ಅದರ ಬದಿಯಲ್ಲಿರುವ ಕೊಳಚೆ, ತ್ಯಾಜ್ಯ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: May 17, 2025 | 1:21 PM

Share

ಕಾರವಾರ, ಮೇ 17: ಒಂದೆಡೆ ಪುರಾಣ ಪ್ರಸಿದ್ಧ ಆತ್ಮಲಿಂಗವಿರುವ ಮಹಾಬಲೇಶ್ವರನ (Mahabaleshwara Temple) ದರ್ಶನಕ್ಕೆ ತೆರಳುತ್ತಿರುವ ಭಕ್ತರ ದಂಡು. ಇನ್ನೊಂದೆಡೆ, ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲೇ ನದಿಯಂತೆ ಹರಿಯುತ್ತಿರುವ ಕೊಳಚೆ ನೀರು. ಮತ್ತೊಂದೆಡೆ ಮೂಗು ಮುಚ್ಚಿಕೊಂಡು ಓಡಾಡುತ್ತಿರುವ ಪ್ರವಾಸಿಗರು. ಕರ್ನಾಟಕದ ಸುಪ್ರಸಿದ್ಧ ಧಾರ್ಮಿಕ ಪ್ರವಾಸಿ ತಾಣದ ಸ್ಥಿತಿ ಇದು. ಉತ್ತರಕನ್ನಡ ಜಿಲ್ಲೆಯ ಗೋಕರ್ಣ (Gokarna) ಕ್ಷೇತ್ರದಲ್ಲಿ ಮಹಾಬಲೇಶ್ವರನ ದರ್ಶನಕ್ಕೆ ಬರುವ ಬಹುತೇಕ ಭಕ್ತರು ಸಮೀಪದ ಕಡಲತೀರದಲ್ಲಿ ಸಮುದ್ರಸ್ನಾನ ಮಾಡಿಯೇ ದೇವಸ್ಥಾನಕ್ಕೆ ತೆರಳುತ್ತಾರೆ. ಆದರೆ, ಹೀಗೆ ಸಮುದ್ರದಿಂದ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ಇಡೀ ಗೋಕರ್ಣದ ಕೊಳಚೆ ನೀರು ರಾಜಕಾಲುವೆ ಮೂಲಕ ಹರಿಯುತ್ತದೆ. ರಾಜಕಾಲುವೆ ಸಂಪೂರ್ಣ ತ್ಯಾಜ್ಯದಿಂದ ತುಂಬಿಹೋಗಿದ್ದು ನೀರು ನಿಂತು ಕೆಟ್ಟ ವಾಸನೆ ಇಡೀ ಮಾರ್ಗದ ತುಂಬ ಹಬ್ಬಿದೆ. ಹೀಗಾಗಿ ದೇವರ ದರ್ಶನಕ್ಕೆ ಬರುವಂತಹ ಜನರು ಕೊಳಚೆ ಕಂಡು ಅಸಹ್ಯಪಡುತ್ತಲೇ ದೇವಸ್ಥಾನಕ್ಕೆ ತೆರಳುವಂತಾಗಿದ್ದು, ಕ್ಷೇತ್ರದ ಬಗ್ಗೆ ಕೆಟ್ಟ ಭಾವನೆ ಬರುವಂತಿದೆ. ತ್ಯಾಜ್ಯದಿಂದ ತುಂಬಿ ನಿಂತಿರುವ ರಾಜಕಾಲುವೆ ಸ್ವಚ್ಛಗೊಳಿಸುವಂತೆ ಗ್ರಾಮ ಪಂಚಾಯಿತಿಗೆ ಸಾಕಷ್ಟು ಬಾರಿ ಮನವಿ ನೀಡಿದ್ದರೂ ಸಹ ಯಾವುದೇ ಕ್ರಮ ಕೈಗೊಳ್ಳದಿರುವುದು ಸ್ಥಳೀಯರ ಬೇಸರಕ್ಕೂ ಕಾರಣವಾಗಿದೆ.

ಇಡೀ ಗೋಕರ್ಣದ ಕೊಳಚೆ ನೀರು ರಾಜಕಾಲುವೆ ಮೂಲಕ ಸಮುದ್ರಕ್ಕೆ ಬಂದು ಸೇರುತ್ತದೆ. ಕೆಲವೆಡೆ ಜನವಸತಿ ಪ್ರದೇಶಗಳ ಬಳಿ ತ್ಯಾಜ್ಯದ ರಾಶಿಯೇ ಸಂಗ್ರಹಗೊಂಡು ಕೊಳಚೆ ನೀರು ಹರಿಯದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜಕಾಲುವೆ ಪಕ್ಕದ ನಿವಾಸಿಗಳ ಪಾಡಂತೂ ಹೇಳತೀರದಾಗಿದೆ. ಕೊಳಚೆ ನೀರು ಸಂಗ್ರಹವಾಗಿರುವುದರಿಂದ ಸೊಳ್ಳೆಗಳು ಉತ್ಪತ್ತಿಯಾಗಿ ರೋಗಗಳು ಹರಡುವ ಆತಂಕ ಸಹ ಇದ್ದು, ಶಾಶ್ವತ ಪರಿಹಾರ ಒದಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಗೋಕರ್ಣಕ್ಕೆ ಪ್ರತಿದಿನ ಸಾವಿರಾರು ಜನ ಪ್ರವಾಸಿಗರು ಆಗಮಿಸಿ ಮಹಾಬಲೇಶ್ವರ ದೇವರ ದರ್ಶನ ಪಡೆದು ಸಮುದ್ರಕ್ಕೆ ತೆರಳುತ್ತಾರೆ. ಈ ಸಂದರ್ಭದಲ್ಲಿ ಕೊಳಚೆ ಪ್ರದೇಶ ನೋಡಿ ಬೇಸರಪಡುತ್ತಿದ್ದು, ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದು ಸ್ಥಳಿಯರಾದ ಬಸವರಾಜ್ ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ
Image
ಬೆಂಗಳೂರು ತುಮಕೂರು ಮೆಟ್ರೋ ಸ್ಟುಪಿಡ್ ಐಡಿಯಾ ಎಂದ ತೇಜಸ್ವಿ ಸೂರ್ಯ!
Image
160 ಮೆಟ್ರೋ ಪಿಲ್ಲರ್​ಗಳಿಗೆ ಕಲರ್ ಲೈಟಿಂಗ್ಸ್: ಪ್ರಯಾಣಿಕರು ಆಕ್ರೋಶ
Image
ಹೆಬ್ಬಾಳ ಫ್ಲೈಓವರ್​​ ಇಂದಿನಿಂದ ಮೇ 21ರವರೆಗೆ ಪ್ರತಿದಿನ 3 ಗಂಟೆ ಬಂದ್
Image
ಹೊನ್ನಾವರದ ವೀಳ್ಯದೆಲೆಗೆ ಪಾಕ್ ದೊಡ್ಡ ಮಾರುಕಟ್ಟೆ! ಆದರೂ ಕಳ್ಸಲ್ಲ ರೈತರು

ಇದನ್ನೂ ಓದಿ: ಶರಾವತಿ ನದಿ ತೀರದ ‘ರಾಣಿ ವೀಳ್ಯದೆಲೆ’ಗೆ ಪಾಕಿಸ್ತಾನವೇ ದೊಡ್ಡ ಮಾರುಕಟ್ಟೆ! ಆದರೂ ರಫ್ತು ನಿರಾಕರಿಸಿದ ರೈತರು

ಒಟ್ಟಾರೆ, ಧಾರ್ಮಿಕ ಹಾಗೂ ಪ್ರವಾಸಿ ತಾಣವಾಗಿಯೂ ಪ್ರಸಿದ್ಧವಾಗಿರುವ ಗೋಕರ್ಣ ಕ್ಷೇತ್ರಕ್ಕೆ ಕೊಳಚೆ ಸಮಸ್ಯೆ ಇದೀಗ ಕಪ್ಪುಚುಕ್ಕೆಯಂತಾಗಿದ್ದು, ಆದಷ್ಟು ಬೇಗ ಆಡಳಿತವು ತ್ಯಾಜ್ಯ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಂಡು ಪ್ರವಾಸಿಗರಿಗೆ ಉತ್ತಮ ವಾತಾವರಣ ನಿರ್ಮಿಸಿಕೊಡಬೇಕಿದೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​