ಪದ್ಮಶ್ರೀ ಪುರಸ್ಕೃತೆ ತುಳಸಿಗೌಡ ಮನವಿಗೆ ಸ್ಪಂದಿಸಿದ ಜಿಲ್ಲಾಡಳಿತ; ಮನೆಗೆ ಭೇಟಿ ಕೊಟ್ಟು ಸೇತುವೆಗೆ ಅಳತೆ ತೆಗೆದುಕೊಂಡ ಅಧಿಕಾರಿಗಳು!

| Updated By: ಆಯೇಷಾ ಬಾನು

Updated on: Jul 08, 2022 | 9:10 PM

ಉತ್ತರ ಕನ್ನಡ ಜಿಲ್ಲಾಡಳಿತ ತುಳಸಜ್ಜಿ ಮನವಿಗೆ ಸ್ಪಂದಿಸಿ ಮನೆ ಮುಂದೆ ಸೇತುವೆ ನಿರ್ಮಿಸಲು ಮುಂದಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹೊನ್ನಾಳಿ ಗ್ರಾಮದಲ್ಲಿರುವ ತುಳಸಿಗೌಡ ಮನೆಗೆ ಅಧಿಕಾರಿಗಳು ಭೇಟಿ ನೀಡಿ ಸೇತುವೆ ನಿರ್ಮಿಸಲು ಅಳತೆ ತೆಗೆದುಕೊಂಡು ಹೋಗಿದ್ದಾರೆ.

ಪದ್ಮಶ್ರೀ ಪುರಸ್ಕೃತೆ ತುಳಸಿಗೌಡ ಮನವಿಗೆ ಸ್ಪಂದಿಸಿದ ಜಿಲ್ಲಾಡಳಿತ; ಮನೆಗೆ ಭೇಟಿ ಕೊಟ್ಟು ಸೇತುವೆಗೆ ಅಳತೆ ತೆಗೆದುಕೊಂಡ ಅಧಿಕಾರಿಗಳು!
ಪದ್ಮಶ್ರೀ ಪುರಸ್ಕೃತೆ ತುಳಸಿಗೌಡ
Follow us on

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು ಮಳೆರಾಯ ಜನರನ್ನ ಹಿಂಡಿ ಹಿಪ್ಪೆ ಮಾಡುತ್ತಿದ್ದಾನೆ. ಮತ್ತೊಂದು ಕಡೆ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡರವರ ಮನೆಗೆ ತೆರಳಲು ಸೇತುವೆಯೇ ಇಲ್ಲದೆ ಪರದಾಡುತ್ತಿದ್ದಾರೆ. ಮನೆಯ ಮುಂದೆ ಹಳ್ಳ ಹರಿಯುತ್ತಿದ್ದು ಓಡಾಡಲು ತೊಂದರೆಯಾಗುತ್ತಿದೆ. ಸೇತುವೆ ನಿರ್ಮಿಸುವಂತೆ ಪದ್ಮಶ್ರೀ ಪುರಸ್ಕೃತೆ ತುಳಸಿಗೌಡರವರು ಮನವಿ ಮಾಡಿ ವಿಡಿಯೋ ಮಾಡಿದ್ದರು. ಸದ್ಯ ಪದ್ಮಶ್ರೀ ಪುರಸ್ಕೃತೆ ತುಳಸಿಗೌಡ ಮನವಿಗೆ ಜಿಲ್ಲಾಡಳಿತ ಸ್ಪಂದಿಸಿದೆ.

ಉತ್ತರ ಕನ್ನಡ ಜಿಲ್ಲಾಡಳಿತ ತುಳಸಜ್ಜಿ ಮನವಿಗೆ ಸ್ಪಂದಿಸಿ ಮನೆ ಮುಂದೆ ಸೇತುವೆ ನಿರ್ಮಿಸಲು ಮುಂದಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹೊನ್ನಾಳಿ ಗ್ರಾಮದಲ್ಲಿರುವ ತುಳಸಿಗೌಡ ಮನೆಗೆ ಅಧಿಕಾರಿಗಳು ಭೇಟಿ ನೀಡಿ ಸೇತುವೆ ನಿರ್ಮಿಸಲು ಅಳತೆ ತೆಗೆದುಕೊಂಡು ಹೋಗಿದ್ದಾರೆ.

ಹಾಲಕ್ಕಿ ಸಮುದಾಯದ ತುಳಸಿ ಗೌಡ ಅವರು ತಮ್ಮ ಸಮುದಾಯದಂತೆಯೇ ಆಧುನಿಕ ಜೀವನಶೈಲಿಯಿಂದ ದೂರ ಉಳಿದವರು. ಭೂಮಿಯನ್ನು ಪ್ರೀತಿಸುವ ಇವರು, ಬರಿಗಾಲಲ್ಲೇ ಕಾಡು- ಮೇಡು ಅಲೆದು ಮರಗಿಡಿಗಳನ್ನು ಕಾಯುತ್ತಿದ್ದರು. ಪ್ರಶಸ್ತಿ ಪ್ರದಾನ ಸಮಾರಂಭಕ್ಕೂ ಬರಿಗಾಲಲ್ಲೇ ತೆರಳಿ ಪ್ರಶಸ್ತಿ ಸ್ವೀಕರಿಸಿ ಅವರು ಗಮನ ಸೆಳೆದಿದ್ದರು. ಅವರನ್ನು ವೃಕ್ಷ ಮಾತೆ ಎಂದು ಕರೆಯಲು ಕಾರಣ, ಒಂದಲ್ಲಾ ಎರಡಲ್ಲಾ, ಲಕ್ಷಕ್ಕೂ ಅಧಿಕ ಮರಗಳನ್ನು ಬೆಳೆಸಿದ್ದಾರೆ. ತುಳಸಿಗೌಡಗೆ ಪರಿಸರ ಪ್ರೀತಿ ಎಷ್ಟಿದೆ ಎಂದರೆ, ಇವರನ್ನು ಮರಗಳ ವಿಜ್ಞಾನಿ ಎಂದೇ ಹೇಳಬಹುದು. ಯಾವ ಯಾವ ಗಿಡಗಳನ್ನು ಯಾವ ಋತುವಿನಲ್ಲಿ ನೆಡಬೇಕು, ಎಷ್ಟು ನೀರು, ಗೊಬ್ಬರ ಬೇಕು, ಯಾವ ಗಿಡಗಳು ಯಾವ ಸಂದರ್ಭದಲ್ಲಿ ಹೂವು ಹಣ್ಣು ಬಿಡುತ್ತದೆ, ಹೀಗೆ ಅರಣ್ಯದಲ್ಲಿನ ಸುಮಾರು 300ಕ್ಕೂ ಹೆಚ್ಚು ಪ್ರಭೇದದ ಮರಗಳ ಬಗ್ಗೆ ತುಳಸಿ ಅವರಿಗೆ ಮಾಹಿತಿ ಇದೆ. ಅರಣ್ಯದಲ್ಲಿನ ಪ್ರತಿ ಮರಗಳ ನಾಡಿ ಮಿಡಿತವನ್ನು ತುಳಸಿ ಹೇಳುತ್ತಾರೆ. ತನ್ನ ಸುತ್ತಮುತ್ತಲೂ ಯಾರು ಮರಗಳನ್ನು ಕಡಿಯದಂತೆ, ಮರಗಳನ್ನು ತನ್ನ ಮಕ್ಕಳಂತೆ ಸಾಕುತ್ತಾರೆ.

Published On - 8:53 pm, Fri, 8 July 22