AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ED Raid: ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಇಡಿ ರೇಡ್

ಇಡಿ ದಾಳಿ: ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜೈಲು ಸೇರಿ ನಂತರ ಹೈಕೋರ್ಟ್ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್​​ಗೆ ಮತ್ತೆ ಸಂಕಷ್ಟ ಎದುರಾಗಿದೆ. ಬುಧವಾರ ಬೆಳಗ್ಗೆಯೇ ಅವರ ನಿವಾಸಕ್ಕೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ. ವಿಧಾನಸಭೆ ಅಧಿವೇಶನದ ಕಾರಣ ಸೈಲ್ ಬೆಂಗಳೂರಿನಲ್ಲಿದ್ದಾರೆ.

ED Raid: ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಇಡಿ ರೇಡ್
ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸ
ಸೂರಜ್​, ಮಹಾವೀರ್​ ಉತ್ತುರೆ
| Edited By: |

Updated on:Aug 13, 2025 | 9:41 AM

Share

ಕಾರವಾರ, ಆಗಸ್ಟ್ 13: ಉತ್ತರ ಕನ್ನಡ ಜಿಲ್ಲೆ (Uttara Kannada) ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ (Satish Krishna Sail) ನಿವಾಸದ ಮೇಲೆ ಬುಧವಾರ ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. 6 ಕಾರುಗಳಲ್ಲಿ ಬಂದಿರುವ 24 ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಸತೀಶ್ ಸೈಲ್ ನಿವಾಸದಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ವಿಧಾನಸೆ ಅಧಿವೇಶನ ನಡೆಯುತ್ತಿರುವ ಕಾರಣ ಶಾಸಕ ಸೈಲ್ ಬೆಂಗಳೂರಿನಲ್ಲಿದ್ದಾರೆ. ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜೈಲು ಶಿಕ್ಷೆಗೊಳಗಾಗಿದ್ದ ಸೈಲ್ ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ.

ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಮೂಲಕ ಅಕ್ರಮ ಅದಿರು ಸಾಗಾಟ ಮಾಡಿದ್ದ ಪ್ರಕರಣದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ದೆ ಅವರ ತಂಡ ಸೈಲ್ ವಿರುದ್ಧ ದೂರು ದಾಖಲಿಸಿತ್ತು. ಸತೀಶ್ ಸೈಲ್​ಗೆ ಜನಪ್ರತಿನಿಧಿಗಳ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿತ್ತು. ನಂತರ ಅವರು ಹೈಕೋರ್ಟ್​​ನಲ್ಲಿ ಜಾಮೀನು ಪಡೆದುಕೊಂಡಿದ್ದರು.

ಬೇಲೆಕೇರಿ ಬಂದರಿನಿಂದ ಅದಿರನ್ನು ಅಕ್ರಮವಾಗಿ ವಿದೇಶಕ್ಕೆ ಸಾಗಾಟ ಮಾಡಿದ ಪ್ರಕರಣದಲ್ಲಿ ಸತೀಶ್ ಸೈಲ್ ಅವರನ್ನು ದೋಷಿ ಎಂದು ಕಳೆದ ವರ್ಷ ಅಕ್ಟೋಬರ್​​ನಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ನಂತರ ಬೇಲೆಕೇರಿ ಅದಿರು ಸಾಗಾಟ ಪ್ರಕರಣ ಸಂಬಂಧಿತ 6 ಪ್ರಕರಣಗಳಲ್ಲಿ ಅವರಿಗೆ 7 ವರ್ಷ ಜೈಲು ಶಿಕ್ಷೆ ಹಾಗೂ 44 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಲಾಗಿತ್ತು. ಆನಂತರ ಜೈಲು ಪಾಲಾಗಿದ್ದ ಅವರು ಶಾಸಕ ಸ್ಥಾನದಿಂದ ಅನರ್ಹರಾಗುವ ಭೀತಿ ಎದುರಿಸುತ್ತಿದ್ದರು.

ಇದನ್ನೂ ಓದಿ
Image
ಜನಪ್ರತಿನಿಧಿಗಳು ಅಧಿಕಾರಿಗಳ ಮೇಲೆ ರೇಗುವುದು ಯಾಕೆ?
Image
ಬೇಲೆಕೇರಿ ಅದಿರು ಅಕ್ರಮ ಸಾಗಾಟ: ಸತೀಶ್​​ ಸೈಲ್​ಗೆ 7 ವರ್ಷ ಜೈಲು
Image
ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್ ಇನ್ ಜೈಲ್​: ಶಾಸಕ ಸ್ಥಾನ ಅನರ್ಹ ಭೀತಿ!
Image
ಬೇಲೆಕೇರಿ ಅದಿರು ಸಾಗಾಟ ಪ್ರಕರಣ: 6 ಕೇಸ್​ನಲ್ಲೂ​ ಶಾಸಕ ಸತೀಶ್ ಸೈಲ್‌ ದೋಷಿ

ಇದನ್ನೂ ಓದಿ: ಕಾಂಗ್ರೆಸ್​ನ ಸತೀಶ್​​ ಸೈಲ್​ಗೆ 7 ವರ್ಷ ಜೈಲು: ಬೇಲೆಕೇರಿ ಅದಿರು ಅಕ್ರಮ ಸಾಗಾಟ ಪ್ರಕರಣದಲ್ಲಿ ಮಹತ್ವದ ತೀರ್ಪು

ನಂತರ ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪಿನ ವಿರುದ್ಧ ಸೈಲ್ ಹೈಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ನವೆಂಬರ್​​​ನಲ್ಲಿ ವಿಚಾರಣೆ ನಡೆಸಿದ್​ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ, ಸೈಲ್​​​ಗೆ ವಿಧಿಸಿರುವ ಶಿಕ್ಷೆಯ ಆದೇಶವನ್ನು ಅಮಾನತಿನಲ್ಲಿಡಲು ಸೂಚಿಸಿತ್ತು. ದಂಡ ಮೊತ್ತದ ಶೇ 25 ರಷ್ಟನ್ನು ಠೇವಣಿ ಇಡುವಂತೆ ಸೂಚನೆ ನೀಡಿದ್ದ ಹೈಕೋರ್ಟ್ ಸೈಲ್​ಗೆ ಜಾಮೀನು ನೀಡಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:32 am, Wed, 13 August 25

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ