AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡಿ ದಾಳಿ: ಸಂಪರ್ಕಕ್ಕೆ ಸಿಗದ ಸತೀಶ್ ಸೈಲ್, ಅಜ್ಞಾತ ಸ್ಥಳಕ್ಕೆ ತೆರಳಿದ ಕಾಂಗ್ರೆಸ್ ಶಾಸಕ

ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇಡಿ ಅಧಿಕಾರಿಗಳು 22 ಗಂಟೆಗಳ ಕಾಲ ಪರಿಶೀಲನೆ ಮಾಡಿ ತೆರಳಿದ್ದಾರೆ. ಆದರೆ ಸತೀಶ್ ಸೈಲ್​ ಮಾತ್ರ ಎಷ್ಟೇ ಪ್ರಯತ್ನ ಪಟ್ಟರೂ ಅಧಿಕಾರಿಗಳ ಸಂಪರ್ಕಕ್ಕೆ ಸಿಕ್ಕಿಲ್ಲ. ಹೀಗಾಗಿ ಅಂಗರಕ್ಷಕರನ್ನು ಕರೆದು ಸೈಲ್ ಬಗ್ಗೆ ಅಧಿಕಾರಿಗಳು ಮಾಹಿತಿ ಪಡೆದುಕೊಂಡಿದ್ದಾರೆ.

ಇಡಿ ದಾಳಿ: ಸಂಪರ್ಕಕ್ಕೆ ಸಿಗದ ಸತೀಶ್ ಸೈಲ್, ಅಜ್ಞಾತ ಸ್ಥಳಕ್ಕೆ ತೆರಳಿದ ಕಾಂಗ್ರೆಸ್ ಶಾಸಕ
ಸತೀಶ್ ಸೈಲ್ ಮನೆ ಮೇಲೆ ಇಡಿ ದಾಳಿ
ಸೂರಜ್​, ಮಹಾವೀರ್​ ಉತ್ತರೆ
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 14, 2025 | 1:03 PM

Share

ಕಾರವಾರ, ಆಗಸ್ಟ್ 14: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಚಿತ್ತಾಕುಲ ಗ್ರಾಮದಲ್ಲಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ (Satish Sail) ಮನೆ ಮೇಲೆ ಬುಧವಾರ ದಾಳಿ ಮಾಡಿದ್ದ ಇ.ಡಿ ಅಧಿಕಾರಿಗಳು (ED Raid) ಬೆಳಗಿನ ಜಾವ 4ರವರೆಗೂ ಮನೆಯಲ್ಲಿ ಪರಿಶೀಲನೆ ನಡೆಸಿ ತೆರಳಿದ್ದಾರೆ. ಇಡಿ ದಾಳಿ ಬೆನ್ನಲ್ಲೇ ಸತೀಶ್ ಸೈಲ್ ಮೊಬೈಲ್ ಸ್ವಿಚ್​ ಆಫ್​ ಮಾಡಿಕೊಂಡು ಅಜ್ಞಾತ ಸ್ಥಳಕ್ಕೆ ತೆರಳಿದ್ದು, ಯಾರ ಸಂಪರ್ಕಕ್ಕೆ ಸಿಗುತ್ತಿಲ್ಲ.

ಶಾಸಕ ಸತೀಶ್ ಸೈಲ್​​ ಮನೆಯಲ್ಲಿ ಅವರ ಅತ್ತೆಯ ಉಪಸ್ಥಿತಿಯಲ್ಲೇ ಇ.ಡಿ ಅಧಿಕಾರಿಗಳು ಶೋಧ ಮಾಡಿದ್ದಾರೆ. 22 ಗಂಟೆಗಳ ಕಾಲ ನಿರಂತರವಾಗಿ ಶೋಧ ಮಾಡಿದ್ದು, ಹಲವು ದಾಖಲೆಗಳ ಸಮೇತ ತೆರಳಿದ್ದಾರೆ.

ಇದನ್ನೂ ಓದಿ: ED Raid: ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಇಡಿ ರೇಡ್

ಇನ್ನು ಎಷ್ಟೇ ಪ್ರಯತ್ನ ಪಟ್ಟರೂ ಸತೀಶ್ ಸೈಲ್ ಸಂಪರ್ಕಕ್ಕೆ ಸಿಕ್ಕಿಲ್ಲ. ಆಪ್ತರು, ಗನ್ ಮ್ಯಾನ್ ಮೊಬೈಲ್ ಮೂಲಕ ಸಂಪರ್ಕಿಸಲು ಯತ್ನಿಸಲಾಗಿದೆ. ಯಾರ ಫೋನ್ ಸಂಪರ್ಕಕ್ಕೂ ಸಿಗದೆ ಅಜ್ಞಾತ ಸ್ಥಳದಲ್ಲಿ ಉಳಿದುಕೊಂಡಿದ್ದಾರೆ. ಅಂಗರಕ್ಷಕರನ್ನ ಕರೆದು ಸೈಲ್ ಬಗ್ಗೆ ಇಡಿ ಅಧಿಕಾರಿಗಳು ಮಾಹಿತಿ ಪಡೆದುಕೊಂಡಿದ್ದಾರೆ.

ಬೆಳಿಗ್ಗೆಯಿಂದ ಅವರು ನಮಗೆ ಕರೆ ಮಾಡಿಲ್ಲ. ಮಾಧ್ಯಮಗಳಲ್ಲಿ ನೋಡಿ ಬೆಳಿಗ್ಗೆ ಮನೆ ಬಳಿ ಬಂದಿದ್ದೇವೆ. ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋಗಿದ್ದಾರೆ ಅಷ್ಟೇ. ಆ ಬಳಿಕ ನಮಗೆ ಯಾವುದೇ ಕರೆ ಅಥವಾ ಸಂಪರ್ಕ ಮಾಡಿಲ್ಲ ಎಂದು ಇಡಿ ಅಧಿಕಾರಿಗಳಿಗೆ ಸೈಲ್ ಅಂಗರಕ್ಷಕರು ಹೇಳಿದ್ದಾರೆ.

ಇದನ್ನೂ ಓದಿ: Bengaluru ED Raid: ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆಗಳು ಸೇರಿ ಬೆಂಗಳೂರಿನ 5 ಕಡೆ ಇಡಿ ದಾಳಿ

ಅಕ್ರಮ ಅದಿರು ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರ ಬಂದಿರುವ ಶಾಸಕ ಸತೀಶ್ ಸೈಲ್​ಗೆ ನಿನ್ನೆ ಬೆಳಂಬೆಳಿಗ್ಗೆ ಇಡಿ ಅದಿಕಾರಿಗಳು ಶಾಕ್ ಕೊಟ್ಟಿದ್ದರು. ಹೌದು 2010 ರಿಂದ ಇದುವರೆಗೂ ಬೆಂಬಿಡದೆ ಕಾಡುತ್ತಿರುವ ಬೆಲಿಕೇರಿ ಬಂದರಿನ ಮೂಲಕ ಸಾಗಿಸಲಾಗಿರುವ ಅಕ್ರಮ ಅದಿರು ಸಾಗಾಟ ಪ್ರಕರಣದಿಂದ ಸತೀಶ್ ಸೈಲ್ ಎರಡು ಬಾರಿ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಸಿಬಿಐ ಹಾಗೂ ಲೋಕಾಯಕ್ತ ತನಿಖೆಯನ್ನ ಎದುರಿಸಿದ್ಧಾರೆ. ಸದ್ಯ ಹೈಕೋರ್ಟ್​ನಲ್ಲಿ ಈ ಪ್ರಕರಣ ವಿಚಾರಣೆ ಹಂತದಲ್ಲಿರುವಾಗಲ್ಲೇ ಇತ್ತ ಇ.ಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!