AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ ​ಶಾಸಕ ಸತೀಶ್​ ಸೈಲ್​ ಮನೆಯಲ್ಲಿ ಇಡಿ ಶೋಧ: ಕೋಟ್ಯಾಂತರ ರೂಪಾಯಿ ಹಣ, ಕೆಜಿಗಟ್ಟಲೆ ಚಿನ್ನ ಜಪ್ತಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಶಾಸಕ ಸತೀಶ್ ಸೈಲ್ ಅವರ ನಿವಾಸದಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿ ಕೋಟ್ಯಾಂತರ ರೂಪಾಯಿ ಹಣ ಮತ್ತು ಚಿನ್ನವನ್ನು ವಶಪಡಿಸಿಕೊಂಡಿದೆ. ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. ಈಗಾಗಲೇ ಜನಪ್ರತಿನಿಧಿಗಳ ನ್ಯಾಯಾಲಯವು ಸೈಲ್ ಅವರಿಗೆ ಶಿಕ್ಷೆ ವಿಧಿಸಿತ್ತು.

ಕೈ ​ಶಾಸಕ ಸತೀಶ್​ ಸೈಲ್​ ಮನೆಯಲ್ಲಿ ಇಡಿ ಶೋಧ: ಕೋಟ್ಯಾಂತರ ರೂಪಾಯಿ ಹಣ, ಕೆಜಿಗಟ್ಟಲೆ ಚಿನ್ನ ಜಪ್ತಿ
ಇಡಿ, ಸತೀಶ್​ ಸೈಲ್​
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Aug 15, 2025 | 3:12 PM

Share

ಕಾರವಾರ, ಆಗಸ್ಟ್​ 15: ಉತ್ತರ ಕನ್ನಡ ಜಿಲ್ಲೆಯ (Uttara Kannada) ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ (Satish Krishna Sail) ನಿವಾಸದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಶೋಧ ಕಾರ್ಯ ನಡೆಸಿದ್ದರು. ಶೋಧದ ಸಂದರ್ಭದಲ್ಲಿ ಇಡಿ ಅಧಿಕಾರಿಗಳು ಕೋಟ್ಯಾಂತರ ರೂಪಾಯಿ ಹಣ, ಕೆಜಿಗಟ್ಟಲೆ ಚಿನ್ನ ಪತ್ತೆಹಚ್ಚಿದ್ದಾರೆ.

ಶಾಸಕ ಸತೀಶ್ ಸೈಲ್ ಮನೆ ಮತ್ತು ಬ್ಯಾಂಕ್ ಖಾತೆಯಲ್ಲಿದ್ದ 1.68 ಕೋಟಿ ನಗದು, ಮತ್ತು ಅಂದಾಜು 6,20,45,319 ರೂ. ಮೌಲ್ಯದ 6.75 ಕೆ‌ಜಿ ಚಿನ್ನವನ್ನು ಇಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಚರಾಸ್ತಿ, ಸ್ಥಿರಾಸ್ತಿ ಸೇರಿ ಒಟ್ಟು 14.13 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ್ದಾರೆ. ಇಡಿ ಅಧಿಕಾರಿಗಳು 2 ಟ್ರಂಕ್​ನಲ್ಲಿ ಚಿನ್ನ, ಹಣ, ದಾಖಲೆ ಕೊಂಡೊಯ್ದಿದ್ದಾರೆ. ಇಡಿ ಶೋಧದ ವೇಳೆ ಹಣಕಾಸು, ದೋಷಾರೋಪ ದಾಖಲೆ, ಇ-ಮೇಲ್ ಹಾಗೂ ಇತರ ದಾಖಲೆಗಳು ಪತ್ತೆಯಾಗಿದ್ದವು.

ಅಕ್ರಮ ಅದಿರು ಸಾಗಾಟ ಮಾಡಿದ್ದ ಪ್ರಕರಣ

ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಮೂಲಕ ಅಕ್ರಮ ಅದಿರು ಸಾಗಾಟ ಮಾಡಿದ್ದ ಪ್ರಕರಣದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ದೆ ಅವರ ತಂಡ ಸೈಲ್ ವಿರುದ್ಧ ದೂರು ದಾಖಲಿಸಿತ್ತು. ಸತೀಶ್ ಸೈಲ್​ಗೆ ಜನಪ್ರತಿನಿಧಿಗಳ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿತ್ತು. ನಂತರ ಅವರು ಹೈಕೋರ್ಟ್​​ನಲ್ಲಿ ಜಾಮೀನು ಪಡೆದುಕೊಂಡಿದ್ದರು.

ಇದನ್ನೂ ಓದಿ
Image
ಜನಪ್ರತಿನಿಧಿಗಳು ಅಧಿಕಾರಿಗಳ ಮೇಲೆ ರೇಗುವುದು ಯಾಕೆ?
Image
ಬೇಲೆಕೇರಿ ಅದಿರು ಅಕ್ರಮ ಸಾಗಾಟ: ಸತೀಶ್​​ ಸೈಲ್​ಗೆ 7 ವರ್ಷ ಜೈಲು
Image
ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್ ಇನ್ ಜೈಲ್​: ಶಾಸಕ ಸ್ಥಾನ ಅನರ್ಹ ಭೀತಿ!
Image
ಬೇಲೆಕೇರಿ ಅದಿರು ಸಾಗಾಟ ಪ್ರಕರಣ: 6 ಕೇಸ್​ನಲ್ಲೂ​ ಶಾಸಕ ಸತೀಶ್ ಸೈಲ್‌ ದೋಷಿ

ಬೇಲೆಕೇರಿ ಬಂದರಿನಿಂದ ಅದಿರನ್ನು ಅಕ್ರಮವಾಗಿ ವಿದೇಶಕ್ಕೆ ಸಾಗಾಟ ಮಾಡಿದ ಪ್ರಕರಣದಲ್ಲಿ ಸತೀಶ್ ಸೈಲ್ ಅವರನ್ನು ದೋಷಿ ಎಂದು ಕಳೆದ ವರ್ಷ ಅಕ್ಟೋಬರ್​​ನಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ನಂತರ ಬೇಲೆಕೇರಿ ಅದಿರು ಸಾಗಾಟ ಪ್ರಕರಣ ಸಂಬಂಧಿತ 6 ಪ್ರಕರಣಗಳಲ್ಲಿ ಅವರಿಗೆ 7 ವರ್ಷ ಜೈಲು ಶಿಕ್ಷೆ ಹಾಗೂ 44 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಲಾಗಿತ್ತು. ಆನಂತರ ಜೈಲು ಪಾಲಾಗಿದ್ದ ಅವರು ಶಾಸಕ ಸ್ಥಾನದಿಂದ ಅನರ್ಹರಾಗುವ ಭೀತಿ ಎದುರಿಸುತ್ತಿದ್ದರು.

ಇದನ್ನೂ ಓದಿ: ಕಾಂಗ್ರೆಸ್​ನ ಸತೀಶ್​​ ಸೈಲ್​ಗೆ 7 ವರ್ಷ ಜೈಲು: ಬೇಲೆಕೇರಿ ಅದಿರು ಅಕ್ರಮ ಸಾಗಾಟ ಪ್ರಕರಣದಲ್ಲಿ ಮಹತ್ವದ ತೀರ್ಪು

ನಂತರ ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪಿನ ವಿರುದ್ಧ ಸೈಲ್ ಹೈಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ನವೆಂಬರ್​​​ನಲ್ಲಿ ವಿಚಾರಣೆ ನಡೆಸಿದ್​ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ, ಸೈಲ್​​​ಗೆ ವಿಧಿಸಿರುವ ಶಿಕ್ಷೆಯ ಆದೇಶವನ್ನು ಅಮಾನತಿನಲ್ಲಿಡಲು ಸೂಚಿಸಿತ್ತು. ದಂಡ ಮೊತ್ತದ ಶೇ 25 ರಷ್ಟನ್ನು ಠೇವಣಿ ಇಡುವಂತೆ ಸೂಚನೆ ನೀಡಿದ್ದ ಹೈಕೋರ್ಟ್ ಸೈಲ್​ಗೆ ಜಾಮೀನು ನೀಡಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:11 pm, Fri, 15 August 25

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್