AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಡವಾಯ್ತು ಹೆತ್ತ ಕರುಳು: 5 ಮಕ್ಕಳಿದ್ರೂ ತಾಯಿಗೆ ಸಿಗದ ಆಸರೆ; ವೃದ್ಧಾಶ್ರಮಕ್ಕೆ ದಾಖಲು

ಉತ್ತರ ಕನ್ನಡದ ಜಿಲ್ಲೆಯ ಕಾರವಾರ ತಾಲೂಕಿನ ಶಿರವಾಡದಲ್ಲಿ ಅಮಾನವೀಯ ಘಟನೆ ಒಂದು ನಡೆದಿದೆ. ಐವರು ಮಕ್ಕಳ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಲಿವರ್ ಸಮಸ್ಯೆಯಿಂದ ಹಾಸಿಗೆ ಹಿಡಿದ ತಾಯಿಯನ್ನು ಮಕ್ಕಳು ನಿರ್ಲಕ್ಷಿಸಿದ್ದಾರೆ. ಆಸ್ಪತ್ರೆಯಲ್ಲಿದ್ದ ತಾಯಿಯನ್ನು ನೋಡಿಕೊಳ್ಳಲು ಹಿಂದೇಟು ಹಾಕಲಾಗಿದ್ದು, ಇದೀಗ ವೃದ್ಧಾಶ್ರಮಕ್ಕೆ ಸೇರಿಸಲು ಮುಂದಾಗಿದ್ದಾರೆ.

ಬೇಡವಾಯ್ತು ಹೆತ್ತ ಕರುಳು: 5 ಮಕ್ಕಳಿದ್ರೂ ತಾಯಿಗೆ ಸಿಗದ ಆಸರೆ; ವೃದ್ಧಾಶ್ರಮಕ್ಕೆ ದಾಖಲು
ತಾಯಿ ಈರವ್ವImage Credit source: tv9 kannada
ಅಶೋಕ್​ ಪೂಜಾರಿ
| Edited By: |

Updated on: Sep 11, 2026 | 7:49 PM

Share

ಕಾರವಾರ, ಸೆಪ್ಟೆಂಬರ್​ 11: ಹೆತ್ತು ಹೊತ್ತು ಸಾಕಿ ಸಲಹಿದ ತಾಯಿಗೆ ಕೊನೆಗಾಲದಲ್ಲಿ ಆಸರೆಯಾಗಬೇಕಿದ್ದ ಐವರು ಮಕ್ಕಳು ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಹಾಸಿಗೆ ಹಿಡಿದಿರುವ ತಾಯಿಯನ್ನು ನೋಡಿಕೊಳ್ಳಲು ಹಿಂದೇಟು ಹಾಕಿದ್ದು, ಅಷ್ಟೇ ಅಲ್ಲದೆ ಅನಾಥಾಶ್ರಮಕ್ಕೆ ಸೇರಿಸಲು ಮುಂದಾಗಿರುವ ಮನಕಲಕುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಬೆಳಕಿಗೆ ಬಂದಿದೆ.

ಲಿವರ್ ಸಮಸ್ಯೆಯಿಂದ ಹಾಸಿಗೆ ಹಿಡಿದ ತಾಯಿ

ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಶಿರವಾಡದ ನಿವಾಸಿ ಈರವ್ವ ಅವರಿಗೆ ನಾಲ್ವರು ಹೆಣ್ಣು ಮಕ್ಕಳು ಹಾಗೂ ಓರ್ವ ಗಂಡು ಮಗ ಸೇರಿದಂತೆ ಒಟ್ಟು ಐದು ಮಂದಿ ಮಕ್ಕಳಿದ್ದಾರೆ. ಎಲ್ಲರಿಗೂ ಮದುವೆಯಾಗಿ ಬೇರೆ ಬೇರೆ ಊರುಗಳಲ್ಲಿ ಸಂಸಾರ ನಡೆಸುತ್ತಿದ್ದಾರೆ. ಆದರೆ ಕಳೆದ ಕೆಲ ತಿಂಗಳಿಂದ ತಾಯಿಗೆ ಲಿವರ್ ಸಮಸ್ಯೆ ಕಾಣಿಸಿಕೊಂಡು ಹಾಸಿಗೆ ಹಿಡಿಯುತ್ತಿದ್ದಂತೆ ಮಕ್ಕಳು ದೂರವಾಗಿದ್ದಾರೆ.

ಇದನ್ನೂ ಓದಿ: 20 ವರ್ಷಗಳ ಬಳಿಕ ಸಮಾಗಮ: 105 ವರ್ಷದ ತಾಯಿ ನೋಡಲು ದುರ್ಗಮ ಹಾದಿಯಲ್ಲಿ ಕ್ರಮಿಸಿ ಬಂದ 85 ವರ್ಷದ ಮಗಳು!

ಒಂದೆರಡು ದಿನ ಆಸ್ಪತ್ರೆಗೆ ಬಂದು ಹೋದ ಮಕ್ಕಳು ಬಳಿಕ ಸಂಪರ್ಕಕ್ಕೂ ಸಿಕ್ಕಿಲ್ಲ. ತಾಯಿಯನ್ನು ನೋಡಿಕೊಳ್ಳಲು ಸಾಧ್ಯವಿಲ್ಲ, ಎಲ್ಲಿಯಾದರೂ ಅನಾಥಾಶ್ರಮಕ್ಕೆ ಸೇರಿಸಿ ಎಂದಿದ್ದಾರಂತೆ. ಇಷ್ಟು ವರ್ಷ ಮಕ್ಕಳಿಗೆ ಆಸರೆಯಾಗಿದ್ದ ತಾಯಿಗೆ ಇದೀಗ ಮಕ್ಕಳು ಆಸರೆಯಾಗದ ಸ್ಥಿತಿ ನಿರ್ಮಾಣವಾಗಿದೆ.

LIVE TV

ಕ್ರಿಮ್ಸ್ ಆಸ್ಪತ್ರೆಗೆ ದಾಖಲು; ಮಕ್ಕಳ ಪಲಾಯನ

ಸದ್ಯ ಕಾರವಾರದ ಕ್ರಿಮ್ಸ್ ಆಸ್ಪತ್ರೆಯಲ್ಲಿ ತಾಯಿ ಈರವ್ವ ಚಿಕಿತ್ಸೆ ಪಡೆಯುತ್ತಿದ್ದಾರೆ. ದೊಡ್ಡ ಮಗಳು ಗೀತಾ ತಾಯಿಯ ಆರೈಕೆ ಮಾಡುತ್ತಿದ್ದಾರೆ. ಆದರೆ ತಾನೂ ಬಾಡಿಗೆ ಮನೆಯಲ್ಲಿ ಇರೋದ್ರಿಂದ ತಾಯಿಯನ್ನು ತನ್ನೊಂದಿಗೆ ಕರೆದುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ ಅಂತಿದ್ದಾರೆ. ಇನ್ನು ಮೂವರು ತಂಗಿಯರು ಕೆಲ ದಿನ ಆಸ್ಪತ್ರೆ ಕಡೆ ಬಂದು ಹೋಗಿದ್ದಾರೆ. ಆದರೆ ಮೊನ್ನೆ ಓರ್ವ ತಂಗಿ ದುರ್ಗಾ ಎಂಬಾಕೆ ಆಸ್ಪತ್ರೆಯಿಂದ ಹೊರಟು ಹೋಗಿ ವಾಪಸ್ ಬಂದಿಲ್ಲ. ನಿನ್ನೆ ಇಬ್ಬರು ತಂಗಿಯರು ಊಟ ತರುತ್ತೇವೆ ಅಂತಾ ಹೋದವರು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈಗ ತಾಯಿಯನ್ನು ಎಲ್ಲಿಯಾದರೂ ಬಿಟ್ಟುಬಿಡಿ. ನಮಗೆ ಸಂಬಂಧವಿಲ್ಲ ಅನ್ನೋ ರೀತಿಯಲ್ಲಿ ಮಕ್ಕಳು ವರ್ತಿಸುತ್ತಿದ್ದಾರಂತೆ‌.

ಕುಮಟಾದ ಜಾನಕಿರಾಮ ವೃದ್ಧಾಶ್ರಮಕ್ಕೆ ಸೇರಿಸಲು ನಿರ್ಧಾರ

ಈರವ್ವ ಲಿವರ್ ಸಂಪೂರ್ಣ ಹಾನಿಯಾಗಿರುವುದರಿಂದ ಆರೋಗ್ಯ ಸುಧಾರಿಸುವುದು ಕಷ್ಟ ಎಂದು ವೈದ್ಯರು ಹೇಳಿದ್ದಾರಂತೆ. ಆದರೆ ಚೆನ್ನಾಗಿ ನೋಡಿಕೊಂಡರೆ ಇನ್ನೂ ಆರು ತಿಂಗಳು ಅಥವಾ ಒಂದು ವರ್ಷ ಬದುಕಬಹುದಂತೆ. ಇದೀಗ ಈರವ್ವ ಅವರನ್ನು ಕುಮಟಾದ ಜಾನಕಿರಾಮ ವೃದ್ಧಾಶ್ರಮಕ್ಕೆ ಸೇರಿಸಲು ನಿರ್ಧರಿಸಲಾಗಿದೆ. ಒಟ್ಟಿನಲ್ಲಿ ಐದು ಮಕ್ಕಳನ್ನು ಹೆತ್ತು ಅವರ ಬದುಕಿಗೆ ದಾರಿ ತೋರಿಸಿದ ತಾಯಿಗೆ ಕೊನೆಗಾಲದಲ್ಲಿ ತನ್ನ ಮಕ್ಕಳ ಆಸರೆ ಸಿಗದೆ ವೃದ್ಧಾಶ್ರಮದ ದಾರಿ ಹಿಡಿಯಬೇಕಾದ ಪರಿಸ್ಥಿತಿ ಬಂದಿರುವುದು ದುರಂತವೇ ಸರಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ